ಕೇರಳ | ಕಣ್ಣೂರು ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಪಿಎಂ ನಾಯಕಿ ದಿವ್ಯಾ ಬಂಧನ

Date:

ಕಣ್ಣೂರು ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕೇರಳದ ಸಿಪಿಎಂ ನಾಯಕಿ ಪಿಪಿ ದಿವ್ಯಾ ಅವರಿಗೆ ಕಣ್ಣೂರಿನ ಸ್ಥಳೀಯ ನ್ಯಾಯಾಲಯ ಮಂಗಳವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದ್ದು ಇದಾದ ಬಳಿಕ ದಿವ್ಯಾ ಪೊಲೀಸರ ಮುಂದೆ ಶರಣಾಗಿದ್ದಾರೆ.

ಆಕೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಣ್ಣೂರು ಜಿಲ್ಲಾ ಪೊಲೀಸ್ ಮುಖ್ಯಸ್ಥ ಅಜಿತ್ ಕುಮಾರ್ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಈಗಾಗಲೇ ದಿವ್ಯಾ ಬಂಧನ ವಿಳಂಬ ಮಾಡಿದ್ದಕ್ಕೆ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದರು.

ತಲಶ್ಶೇರಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ ಟಿ ನಿಸ್ಸಾರ್ ಅಹಮ್ಮದ್ ಅವರು ದಿವ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕರಾವಳಿಗರ ಭಾರೀ ವಿರೋಧದ ನಡುವೆ ಬೆಂಗಳೂರು – ಮಂಗಳೂರು – ಕಣ್ಣೂರು ರೈಲು ಕೊಯಿಕ್ಕೋಡ್‌ಗೆ ವಿಸ್ತರಣೆ

ಕಣ್ಣೂರು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ನವೀನ್ ಬಾಬು ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪ ದಿವ್ಯಾ ಮೇಲಿದೆ.

ಅಕ್ಟೋಬರ್ 14ರಂದು ನಡೆದ ನವೀನ್ ಬಾಬು ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ದಿವ್ಯಾ, ಬಾಬು ಚೆಂಗಲೈನಲ್ಲಿ ಪೆಟ್ರೋಲ್ ಪಂಪ್‌ನ ಅನುಮೋದನೆಯನ್ನು ಹಲವಾರು ತಿಂಗಳುಗಳಿಂದ ನವೀನ್ ಬಾಬು ವಿಳಂಬಗೊಳಿಸಿದ್ದರು ಎಂದು ಟೀಕಿಸಿದ್ದರು.

ವರ್ಗಾವಣೆಯಾದ ಎರಡು ದಿನಗಳ ನಂತರ ನವೀನ್ ಬಾಬು ಪೆಟ್ರೋಲ್ ಪಂಪ್‌ಗೆ ಅನುಮೋದನೆ ನೀಡಿದ್ದರು ಎಂದು ಹೇಳುವ ಮೂಲಕ ಇದರ ಹಿಂದಿನ ಕಾರಣ ತನಗೆ ತಿಳಿದಿದೆ ಎಂದು ದಿವ್ಯಾ ಹೇಳಿದ್ದರು. ಇದಾದ ಮರುದಿನ ನವೀನ್ ಬಾಬು ಕಣ್ಣೂರಿನ ತನ್ನ ಕ್ವಾರ್ಟರ್ಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು.

ಬಿಎನ್‌ಎಸ್‌ಎಸ್‌ನ ಸೆಕ್ಷನ್ 108 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವನ್ನು ದಿವ್ಯಾ ವಿರುದ್ಧ ಪೊಲೀಸರು ದಾಖಲಿಸಿದ್ದರು. ಇದಾದ ಬಳಿಕ ನಿರೀಕ್ಷಣಾ ಜಾಮೀನು ಕೋರಿ ಅಕ್ಟೋಬರ್ 19ರಂದು ತಲಶ್ಶೇರಿ ಸೆಷನ್ಸ್ ನ್ಯಾಯಾಲಯಕ್ಕೆ ದಿವ್ಯಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ಇಂದು ವಜಾಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...