ಕೇರಳ | ಬ್ಯಾಂಕ್ ಕ್ಯಾಂಟೀನ್‌ನಲ್ಲಿ ‘ದನದ ಮಾಂಸ’ ನಿಷೇಧಿಸಿದ ಬಿಹಾರಿ ಮ್ಯಾನೇಜರ್; ನೌಕರರ ಪ್ರತಿಭಟನೆ

Date:

ಕೇರಳದ ಸಾಂಪ್ರದಾಯಿಕ ಆಹಾರದಲ್ಲಿ ಬೀಪ್‌ (ದನದ ಮಾಂಸ) ಕೂಡ ಅವಿಭಾಜ್ಯ ಅಂಗ. ಆದರೆ, ಬಿಹಾರದ ಮೂಲಕ ಬ್ಯಾಂಕ್‌ ಮ್ಯಾನೇಜರ್ ಒಬ್ಬರು ತಾವು ಕೆಲಸ ಮಾಡುತ್ತಿರುವ ಕೇರಳದ ಬ್ಯಾಂಕ್‌ನಲ್ಲಿ ‘ಗೋವಾಂಸ’ವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಅವರ ಧೋರಣೆಯನ್ನು ಖಂಡಿಸಿರುವ ಬ್ಯಾಂಕ್‌ನ ನೌಕರರು ‘ದನದ ಮಾಂಸ’ ತಿಂದು ಪ್ರತಿಭಟನೆ ನಡೆಸಿದ್ದಾರೆ.

ಕೇರಳದ ಕೊಚ್ಚಿಯಲ್ಲಿರುವ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಈ ಘಟನೆ ನಡೆದಿದೆ. ಬ್ಯಾಂಕ್‌ಗೆ ಹೊಸದಾಗಿ ನೇಮಕಗೊಂಡಿರುವ ಬಿಹಾರದ ಮೂಲಕ ಮ್ಯಾನೇಜರ್, ತಮ್ಮ ಶಾಖೆಯ ಕ್ಯಾಂಟೀನ್‌ನಲ್ಲಿ ‘ಬೀಫ್‌’ ಖಾದ್ಯಗಳನ್ನು ತಯಾರಿಸದಂತೆ ಆದೇಶಿಸಿದ್ದಾರೆ. ಇದು, ಕೇರಳದ ಪಾಕಪದ್ಧತಿಗೆ ವಿರುದ್ಧವಾದ ಧೋರಣೆ ಎಂದು ನೌಕರರು ಆರೋಪಿಸಿದ್ದಾರೆ.

ಬ್ಯಾಂಕ್‌ಗೆ ನೇಮಕಗೊಂಡ ಸಂದರ್ಭದಿಂದಲೂ ಮ್ಯಾನೇಜರ್ ಕಿರುಕುಳ ಮತ್ತು ಅವಮಾನಕರವಾಗಿ ನಡೆದುಕೊಳ್ಳಿತ್ತಿದ್ದಾರೆ ಎಂದು ಆರೋಪಿಸಿರುವ ಬ್ಯಾಂಕ್ ನೌಕರರ ಒಕ್ಕೂಟವು (BEFI) ಶುಕ್ರವಾರ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದೇ ಸಂದರ್ಭದಲ್ಲಿ, ಕ್ಯಾಂಟಿನ್‌ನಲ್ಲಿ ಬೀಫ್‌ಅನ್ನು ನಿಷೇಧಿಸಲಾಗಿದೆ ಎಂಬ ವಿಚಾರ ತಿಳಿದ ಪ್ರತಿಭಟನಾಕಾರರು, ಪ್ರತಿಭಟನಾ ಸ್ಥಳದಲ್ಲಿಯೇ ಬೀಫ್‌-ಪರೋಟ ಸೇವಿಸಿ ಪ್ರತಿಭಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಬ್ಯಾಂಕ್ ಸಂವಿಧಾನದ ಮಾರ್ಗಸೂಚಿಗಳ ಪ್ರಕಾರ ಕಾರ್ಯನಿರ್ವಹಿಸುತ್ತಿದೆ. ಆಹಾರ ನಮ್ಮ ವೈಯಕ್ತಿಕ ಆಯ್ಕೆ. ಭಾರತದಲ್ಲಿ, ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಆಹಾರವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಹೊಂದಿದ್ದಾರೆ. ನಾವು ಯಾರನ್ನೂ ಬೀಫ್‌ ತಿನ್ನುವಂತೆ ಒತ್ತಾಯಿಸುತ್ತಿಲ್ಲ. ಅಂತೆಯೇ, ನಮ್ಮ ಆಹಾರದ ಆಯ್ಕೆಯನ್ನು ಕಸಿದುಕೊಳ್ಳಲು ಮತ್ತೊಬ್ಬರಿಗೆ ಅವಕಾಶವೂ ಇಲ್ಲ” ಎಂದು ಬ್ಯಾಂಕ್ ನೌಕರರ ಒಕ್ಕೂಟ ಎಸ್.ಎಸ್ ಅನಿಲ್ ಹೇಳಿದ್ದಾರೆ.

ನೌಕರರ ಪ್ರತಿಭಟನೆಗೆ ಕೊಚ್ಚಿ ಶಾಸಕ ಕೆ.ಟಿ ಜಲೀಲ್ ಬೆಂಬಲ ನೀಡಿದ್ದು, “ಕೇರಳದಲ್ಲಿ ಸಂಘ ಪರಿವಾರದ ಕಾರ್ಯಸೂಚಿಗಳ ಹೇರಿಕೆ/ಜಾರಿಗೆ ಅವಕಾಶ ನೀಡುವುದಿಲ್ಲ. ಈ ಮಣ್ಣು ಕೆಂಪು. ಈ ನೆಲದ ಹೃದಯ ಕೆಂಪು. ಕೆಂಪು ಧ್ವಜ ಹಾರುವಲ್ಲೆಲ್ಲಾ, ನೀವು ಭಯವಿಲ್ಲದೆ ಫ್ಯಾಸಿಸ್ಟ್‌ಗಳ ವಿರುದ್ಧ ಮಾತನಾಡಬಹುದು. ಕೇಸರಿ ಧ್ವಜವನ್ನು ಹಾರಿಸಲು, ಜನರ ನೆಮ್ಮದಿ ಹಾಳುಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...