ಕೇರಳ | ಉತ್ಸವದ ವೇಳೆ ದಿಗ್ಭ್ರಾಂತಿಗೊಂಡು ಓಡಿದ ಆನೆಗಳು; ಮೂವರ ಸಾವು

Date:

ದೇವರ ಉತ್ಸವದ ವೇಳೆ ಆನೆಗಳು ದಿಗ್ಭ್ರಾಂತಿಗೊಂಡು ಓಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿಯಲ್ಲಿ ನಡೆದಿದೆ. ಘಟನೆಯಲ್ಲಿ 36 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಕೊಯಿಲಾಂಡಿಯ ಕುರುವಂಗಾಡ್‌ನಲ್ಲಿರುವ ಮಾನಕ್ಕುಲಾಂಗರಾ ಭಗವತಿ ದೇವಾಲಯದಲ್ಲಿ ಉತ್ಸವ ನಡೆಯುತ್ತಿತ್ತು. ಈ ವೇಳೆ, ಉತ್ಸವದಲ್ಲಿ ಆನೆಯು ಮೆರವಣಿಗೆ ಸಾಗುತ್ತಿತ್ತು. ಈ ವೇಳೆ, ಕೆಲವರು ಪಟಾಕಿ ಸಿಡಿಸಿದ್ದಾರೆ. ಪಟಾಕಿ ಸಿಡಿದ ಸದ್ದಿಗೆ ದಿಗ್ಭ್ರಾಂತಿಗೊಂಡ ಆನೆಗಳು ಜನರ ಗುಂಪಿನ ಮೇಲೆ ಓಡಿವೆ.

ಘಟನೆಯಲ್ಲಿ ಮೃತಪಟ್ಟವರನ್ನು ಅಮ್ಮುಕುಟ್ಟಿ (70), ಲೀಲಾ (65) ಹಾಗೂ ರಾಜನ್ (70) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕೋಝಿಕ್ಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಏಳು ಮಂದಿಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...