ಕೇರಳ | ಬಾಲಕಿ ಮೇಲೆ 64 ಕಾಮುಕರಿಂದ ಲೈಂಗಿಕ ದೌರ್ಜನ್ಯ

Date:

ಅಪ್ರಾಪ್ತ ಬಾಲಕಿಯ ಮೇಲೆ ಸುಮಾರು ನಾಲ್ಕು ವರ್ಷಗಳಿಂದ ಸುಮಾರು 64 ಮಂದಿ ಕಾಮುಕರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ, ಅಮಾನುಷ ಘಟನೆ ಬೆಳಕಿಗೆ ಬಂದಿದೆ. ಐದು ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ 6ನೇ ಆರೋಪಿ ಈಗಾಗಲೇ ಬೇರೊಂದು ಪ್ರಕರಣದಲ್ಲಿ ಜೈಲಿನಲ್ಲಿದ್ದಾನೆ ಎಂದು ವರದಿಯಾಗಿದೆ.

ಇತ್ತೀಚೆಗೆ, ಬಾಲಕಿ ವ್ಯಾಸಂಗ ಮಾಡುತ್ತಿದ್ದ ಶಾಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯಿಂದ ಕೌನ್ಸೆಲಿಂಗ್ ನಡೆಸಲಾಗಿತ್ತು. ಈ ವೇಳೆ, ಬಾಲಕಿ ತನ್ನ ಮೇಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಹೇಳಿಕೊಂಡಿದ್ದಾಳೆ. ಬಳಿಕ, ಮಕ್ಕಳ ಕಲ್ಯಾಣ ಸಮಿತಿಯು ಬಾಲಕಿಯಿಂದ ಪೊಲೀಸರಿಗೆ ದೂರು ದಾಖಲಿಸಿದೆ ಎಂದು ಸಮಿತಿಯ ಅಧ್ಯಕ್ಷ ರಾಜೀವ್ ಎನ್ ತಿಳಿಸಿದ್ದಾರೆ.

ಕ್ರೀಡಾಪಟು ಆಗಿರುವ ಬಾಲಕಿಯ ಮೇಲೆ ಪತ್ತನಂತಿಟ್ಟದ ವಿವಿಧ ಸ್ಥಳಗಳಲ್ಲಿ, ಕ್ರೀಡಾ ಶಿಬಿರಗಳಲ್ಲಿಯೂ ಲೈಂಗಿಕ ದೌರ್ಜನ್ಯಗಳು ನಡೆದಿವೆ. ಆಕೆಯ ಮೇಲೆ ದೌರ್ಜನ್ಯ ಎಸಗಿರುವ ಆರೋಪಿಗಳಲ್ಲಿ ಹೆಚ್ಚಿನವರು ತರಬೇತುದಾರರು, ಸಹಪಾಠಿಗಳು ಮತ್ತು ಸ್ಥಳೀಯ ನಿವಾಸಿಗಳಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಕ್ಸೊ ಕಾಯ್ದೆಯಡಿ ಪ್ರಕರಣಗಳು ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತ್ತನಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರು ತನಿಖೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ವರದಿ ಓದಿದ್ದೀರಾ?: ‘ಹಿಂದುತ್ವ ಮೊದಲು – ಜಾತಿ ನಂತರ’: ಏನಿದು ಬಿಜೆಪಿಯ ‘ಹೈಂದವ ಸಂಖಾರವಂ’?

ಬಾಲಕಿಯ ಬಳಿ ವೈಯಕ್ತಿಕ ಮೊಬೈಲ್ ಫೋನ್ ಇಲ್ಲ. ಆಕೆಯ ತಂದೆಯ ಮೊಬೈಲ್ ಫೋನ್ ಬಳಸುತ್ತಾರೆ. ಈ ಫೋನ್‌ನಲ್ಲಿ, ತನ್ನ ಮೇಲೆ ದೌರ್ಜನ್ಯ ಎಸಗಿದ ಸುಮಾರು 40 ಜನರ ಮೊಬೈಲ್‌ ಸಂಖ್ಯೆಗಳನ್ನು ಸಂಗ್ರಹಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ತಾನು ಅನುಭವಿಸಿದ ದೌರ್ಜನ್ಯಗಳ ಬಗ್ಗೆ ಹೇಳಿಕೊಂಡಿದ್ದನ್ನು ಕೇಳಿ ಆಘಾತಕ್ಕೊಳಗಾದ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಆಕೆಯ ಆರೋಪಗಳು ಸತ್ಯವೇ ಎಂದು ಖಚಿತಪಡಿಸಿಕೊಳ್ಳಲು ಮನಶ್ಶಾಸ್ತ್ರಜ್ಞರಿಂದ ಕೌನ್ಸೆಲಿಂಗ್‌ಗೆ ಒಳಪಡಿಸಿದ್ದರು. “ಕೌನ್ಸೆಲಿಂಗ್ ವೇಳೆ ಆಕೆಯ ಆರೋಪಗಳು ನಂಬಲಾರ್ಹವೆಂದು ಗೊತ್ತಾಗಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಪ್ರಕರಣ ದಾಖಲಿಸಿದ್ದೇವೆ. ತನಿಖೆಯನ್ನು ‘ಫಾಲೋ’ ಮಾಡುತ್ತಿದ್ದೇವೆ” ಎಂದು ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...