ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮುಂದೂಡಬೇಕು ಎಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಕೇರಳದಲ್ಲಿ ಭಾರತೀಯ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆ ಕೈಗೊಳ್ಳಲು ಮೂಮದಾಗಿದೆ. ರಾಜ್ಯದಲ್ಲಿ ಡಿಸೆಂಬರ್‌ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು ಅದೇ ಹೊತ್ತಿಗೆ ಎಸ್‌ಐಆರ್ ಪ್ರಕ್ರಿಯೆ ಆರಂಭಿಸಿದರೆ ಭದ್ರತಾ ವ್ಯವಸ್ಥೆ ಮೇಲೆ ಒತ್ತಡ ಉಂಟಾಗುತ್ತದೆ ಎಂದು ಕೇರಳ ಸರ್ಕಾರ ಹೇಳಿದೆ.
ರಾಜ್ಯ ವಿಧಾನಸಭೆ ಚುನಾವಣೆ ನಡೆಯುವುದು 2026ರ ಮೇ ತಿಂಗಳಿನಲ್ಲಾದ್ದರಿಂದ ಎಸ್‌ಐಆರ್ ತುರ್ತಾಗಿ ನಡೆಸುವ ಅಗತ್ಯವಿಲ್ಲ. ತಾನು ಇಡೀ ಎಸ್‌ಐಆರ್ ಪ್ರಕ್ರಿಯೆಯನ್ನು ಪ್ರತ್ಯೇಕವಾಗಿ ಪ್ರಶ್ನಿಸಬಹುದಾದರೂ ಈ ಅರ್ಜಿ ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದೂಡುವಂತೆ ಮಾತ್ರ ಕೇಳುತ್ತಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.





