ಮಲಯಾಳಂ ಕಡ್ಡಾಯ ಮಸೂದೆ ಮರುಪರಿಶೀಲಿಸುತ್ತೇವೆ: ಕರ್ನಾಟಕ ಗಡಿ ಪ್ರಾಧಿಕಾರಕ್ಕೆ ಕೇರಳ ರಾಜ್ಯಪಾಲರ ಭರವಸೆ

Date:

ಕೇರಳ ಸರ್ಕಾರದ ಮಲಯಾಳಂ ಕಡ್ಡಾಯ ಮಸೂದೆಯನ್ನು ತಡೆ ಹಿಡಿಯುವಂತೆ ಕೇರಳ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿಯಾಗಿ ಕರ್ನಾಟಕ ಗಡಿ ಪ್ರಾಧಿಕಾರ ಮನವಿ ಮಾಡಿದೆ. ಈ ವೇಳೆ ಕೇರಳ ರಾಜ್ಯಪಾಲರು ಈ ಮಸೂದೆ ಮರುಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆಯೇ ಕಾಸರಗೋಡಿನ ಗಡಿನಾಡು ಕನ್ನಡಿಗರ ಸಮಸ್ಯೆಗಳ ಬಗ್ಗೆಯೂ ರಾಜ್ಯಪಾಲರಿಗೆ ಜತೆ ಚರ್ಚಿಸಲಾಗಿದೆ ಎಂದು ಕರ್ನಾಟಕ ಗಡಿ ಪ್ರಾಧಿಕಾರ ತಿಳಿಸಿದೆ.

ಇತ್ತೀಚೆಗೆ ಕೇರಳ ವಿಧಾನಸಭೆಯಲ್ಲಿ ಮಲಯಾಳಂ ಕಡ್ಡಾಯ ಮಸೂದೆಯನ್ನು ಅಂಗೀಕರಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಮಲಯಾಳಂ ಕಡ್ಡಾಯ ಮಾಡುವುದು, ಸರ್ಕಾರಿ ಸಂವಹನ, ಇ-ಆಡಳಿತ ಮತ್ತು ನ್ಯಾಯಾಲಯಗಳಲ್ಲಿ ಮಲಯಾಳಂ ಬಳಸುವುದು ಈ ಮಸೂದೆಯ ಉದ್ದೇಶವಾಗಿದೆ. ಆದರೆ ಇದರಿಂದಾಗಿ ಕಾಸರಗೋಡು ಗಡಿನಾಡ ಕನ್ನಡಿಗರ ಹಕ್ಕುಗಳ ಬಗ್ಗೆ ಕಳವಳ ವ್ಯಕ್ತವಾಗಿದೆ. ಈ ಮಸೂದೆಗೆ 2025ರಲ್ಲೇ ರಾಷ್ಟ್ರಪತಿ ಅನುಮೋದನೆ ನಿರಾಕರಿಸಿದ್ದರು.

ಇದನ್ನು ಓದಿದ್ದೀರಾ? ತ್ರಿಭಾಷಾ ಸೂತ್ರದ ಹೆಸರಿನಲ್ಲಿ‌ ಹಿಂದಿ‌ ಹೇರಿಕೆ‌ ಮಾಡುತ್ತಿದೆ ಕೇಂದ್ರ ಸರ್ಕಾರ? three-language formula | BJP

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಈ ಮಸೂದೆ ತಡೆಗೆ ಕರ್ನಾಟಕ ಗಡಿ ಪ್ರಾಧಿಕಾರ ಒತ್ತಾಯಿಸಿದ್ದು, “ಈ ಮಸೂದೆ ಸಂಪೂರ್ಣವಾಗಿ ಸಂವಿಧಾನಬಾಹಿರವಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಬಹಳ ಹೆಚ್ಚು ಸಂಖ್ಯೆಯಲ್ಲಿ ವಾಸಿಸುತ್ತಿರುವ ಕನ್ನಡ ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದೆ. ಹಾಗೆಯೇ ಕೇಂದ್ರ ಸರ್ಕಾರದ ಅಲ್ಪಸಂಖ್ಯಾತ ಸಚಿವಾಲಯ ಕೇರಳ ಸರ್ಕಾರಕ್ಕೆ ಹಲವಾರು ಬಾರಿ ಕೇರಳದ ಭಾಷಾ ಅಲ್ಪಸಂಖ್ಯಾತರ ಹಿತಗಳ ರಕ್ಷಣೆ ಮಾಡಬೇಕೆಂದು ಸೂಚಿಸಿದೆ ಎಂದಿದೆ.

“ಭಾರತ ಸಂವಿಧಾನದ ಪ್ರಕಾರ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ನೇಮಕಾತಿ ಕಡ್ಡಾಯವಾಗಿದೆ. ಕಾಸರಗೋಡಿನ ಎಲ್ಲಾ ಪೊಲೀಸ್ ಠಾಣೆಗಳು, ರೈಲು ನಿಲ್ದಾಣಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ಸಂಕೇತ ಕನ್ನಡ ಫಲಕಗಳನ್ನು ಪ್ರತಿಷ್ಠಾಪಿಸಬೇಕು. ಸರಕಾರಿ ಸಾರ್ವಜನಿಕ ಕಚೇರಿ ಪತ್ರ ವ್ಯವಹಾರವು ಕಾಸರಗೋಡು ಜಿಲ್ಲೆಯಲ್ಲಿ ಸ್ಥಳೀಯ ಕನ್ನಡ ಭಾಷೆಯಲ್ಲಿ ಬರೆಯಲಾಗುತ್ತದೆ” ಎಂದು ಪ್ರಾಧಿಕಾರ ಹೇಳಿದೆ.

kerala karnataka1
ಕೇರಳ ರಾಜ್ಯಪಾಲರೊಂದಿಗೆ ಕರ್ನಾಟಕ ಗಡಿ ಪ್ರಾಧಿಕಾರ ಸದಸ್ಯರು

“ಕಾಸರಗೋಡು ಜಿಲ್ಲೆಯಲ್ಲಿ ಉದ್ಯೋಗ ಖಾಲಿ ಸ್ಥಾನಗಳನ್ನು ಕುರಿತಂತೆ, PSC ಅಥವಾ ನೇಮಕಾತಿ ಸಂಸ್ಥೆಯಿಂದ ಬಂದ ಅರ್ಜಿಗಳ ಆಧಾರದ ಮೇಲೆ ಭರ್ತಿ ಮಾಡದೇ, ಸ್ಥಳೀಯ ಭಾಷಾ ಅಲ್ಪಸಂಖ್ಯಾತರ ಜನಸಂಖ್ಯೆ ಆಧಾರದ ಮೇಲೆ ಭರ್ತಿ ಮಾಡಬೇಕು. ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರು ಎದುರಿಸುವ ಸಮಸ್ಯೆಗಳ ಬಗ್ಗೆ ಪ್ರತಿ ಎರಡು ತಿಂಗಳಿಗೊಮ್ಮೆ ನಿಯಮಿತ ಸಭೆಗಳನ್ನು ನಡೆಸಲು ಕಾಸರಗೋಡು ಜಿಲ್ಲಾ ಕಲೆಕ್ಟರ್ ಸಮಿತಿಯಿಂದ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದೆ.

“ಕಾಸರಗೋಡು ಮತ್ತು ಕೇರಳದ ಇತರ ಕನ್ನಡ ಭಾಷಿಕರು ಇರುವ ಪ್ರದೇಶಗಳಲ್ಲಿ, ಭಾಷಾತ್ಮಕ ಸುಲಲತೆ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಮೊದಲ ಭಾಷೆಯಾಗಿ ಕನ್ನಡವನ್ನು ಮತ್ತು ಎರಡನೇ ಭಾಷೆಯಾಗಿ ಮತ್ತೊಂದು ಭಾಷೆಯನ್ನು ಅಧ್ಯಯನ ಮಾಡುತ್ತಿದ್ದಾರೆ. ಇದು ವಿದ್ಯಾರ್ಥಿಗಳು ಹಿಂದಿ ಅಥವಾ ಸಂಸ್ಕೃತ ಅಥವಾ ಉರ್ದುವನ್ನು ಎರಡನೇ ಭಾಷೆಯಾಗಿ ಆಯ್ಕೆಮಾಡಲು ಸಹಾಯ ಮಾಡುತ್ತದೆ” ಎಂದು ಹೇಳಿಕೊಂಡಿದ್ದಾರೆ.

“ಈ ಮಸೂದೆ ಅಂಗೀಕರಿಸಿದರೆ, ಕನ್ನಡ ವಿದ್ಯಾರ್ಥಿಗಳು ಮಲಯಾಳಂ ಭಾಷೆಯನ್ನು ತಿಳಿಯದಿದ್ದರೂ ಬಲವತ್ತಾಗಿ ಕಲಿಯಬೇಕಾಗಬಹುದು. ಇದು ಅವರ ಭವಿಷ್ಯಕ್ಕೆ ಪೂರಕವಾಗುತ್ತದೆ. ವಿಶೇಷವಾಗಿ ದೇಶದ ಇತರ ಭಾಗಗಳಲ್ಲಿ ಈ ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಮುಂದುವರಿಸಿದರೆ, ಅವರಿಗೆ ಸಂಪೂರ್ಣ ಹೊಡೆತ ಬೀಳಲಿದೆ” ಎಂದು ಅಭಿಪ್ರಾಯಿಸಿದೆ.

ಗಡಿನಾಡಿನಲ್ಲಿ ಭಾಷಾ ಅಲ್ಪಸಂಖ್ಯಾತರ ಮೇಲೆ (ಕನ್ನಡ ಮತ್ತು ತಮಿಳು ಭಾಷಿಕರು) ಮಲಯಾಳಂ ಹೇರಿಕೆಯಾಗುತ್ತದೆ ಎಂಬ ಕಾರಣಕ್ಕೆ ಈ ಮಸೂದೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಅದರೆ 2025ರ ಹೊಸ ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ವಿಶೇಷ ನಿಬಂಧನೆಗಳನ್ನು ಸೇರಿಸಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...