ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಉತ್ತರ ಜಿಲ್ಲೆಗಳಲ್ಲಿ 60% ಮತದಾನ

Date:

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಗುರುವಾರ 2ನೇ ಹಂತದ ಮತದಾನ ನಡೆಯುತ್ತಿದೆ. ಕೇರಳದ ಉತ್ತರದ ಜಿಲ್ಲೆಗಳ ಒಟ್ಟು 604 ಸ್ಥಳೀಯ ಸಂಸ್ಥೆಗಳಿಗೆ ಮತದಾರರು ಇಂದು (ಡಿ.11) ಮತಚಲಾಯಿಸುತ್ತಿದ್ದಾರೆ. ಸಂಜೆ 4 ಗಂಟೆಯವರೆಗೆ 60% ಮತದಾನವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಡಿಸೆಂಬರ್‌ 9ರಂದು ದಕ್ಷಿಣ ಕೇರಳದ ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ 595 ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆದಿತ್ತು. ಗುರುವಾರ, ಉತ್ತರ ಕೇರಳದ ಏಳು ಜಿಲ್ಲೆಗಳಾದ ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಹಾಗೂ ಕಾಸರಗೋಡುಗಳಲ್ಲಿ ಮತದಾನ ನಡೆದಿದೆ.

ಒಟ್ಟು 604 ಸ್ಥಳೀಯ ಸಂಸ್ಥೆಗಳ ಪೈಕಿ 470 ಗ್ರಾಮ ಪಂಚಾಯತಿಗಳು, 77 ಪುರ ಸಭೆಗಳು, 7 ಜಿಲ್ಲಾ ಪಂಚಾಯತಿಗಳು, 27 ನಗರಸಭೆಗಳು ಹಾಗೂ 3 ಮಹಾನಗರ ಪಾಲಿಕೆಗಳಿಗೆ ಮತದಾನವಾಗಿದೆ. 7 ಜಿಲ್ಲೆಗಳ ಒಟ್ಟು ಮತದಾರರ ಪೈಕಿ 60% ಮತದಾರರು ಈವರೆಗೆ ಮತಚಲಾಯಿಸಿದ್ದಾರೆ. ಪಾಲಕ್ಕಾಡ್‌ ಜಿಲ್ಲೆಯು ಅತೀ ಹೆಚ್ಚು ಮತಗಳನ್ನು ದಾಖಲಿಸಿದ್ದು, 65% ಮತದಾರರು ಮತದಾನ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಮತದಾನವು 80% ಗಡಿದಾಟುವ ನಿರೀಕ್ಷೆ ಇದೆ.

2ನೇ ಹಂತದ ಚುನಾವಣೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ 2020ರಲ್ಲಿ ಕೋಯಿಕ್ಕೋಡ್‌ ಜಿಲ್ಲೆಯು ಅತೀ ಹೆಚ್ಚು ಮತದಾನವನ್ನು ದಾಖಲಿಸಿತ್ತು. 81.28% ಮತದಾನದಾರರು ಮತ ಚಲಾಯಿಸಿದ್ದರು. ನಂತರದ ಸ್ಥಾನದಲ್ಲಿ ಕಣ್ಣೂರು 79.5% ಮತದಾನ ದಾಖಲಿಸಿದೆ. ಉಳಿದಂತೆ,
ತ್ರಿಶೂರ್: 76.34%
ಪಾಲಕ್ಕಾಡ್: 78.82%
ಮಲಪ್ಪುರಂ: 78.87%
ಕೋಝಿಕೋಡ್: 81.28%
ವಯನಾಡ್: 79.46%
ಕಣ್ಣೂರು: 79.5%
ಕಾಸರಗೋಡು: 77.3% ಮತದಾರರು ಮತ ಚಲಾಯಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...