ಕೇರಳ | ಆಸ್ಪತ್ರೆಗೆ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿದ ವ್ಯಕ್ತಿ!

Date:

ವ್ಯಕ್ತಿಯೊಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಉಳ್ಳೂರಿನ ರವೀಂದ್ರನ್ ನಾಯರ್ ಎಂಬ 59 ವರ್ಷದ ವ್ಯಕ್ತಿಯೊಬ್ಬರನ್ನು ಎರಡು ದಿನಗಳಿಂದ ಆಸ್ಪತ್ರೆಯ ಲಿಫ್ಟ್‌ನಲ್ಲಿ ಸಿಲುಕಿದ್ದು ಸೋಮವಾರ ಬೆಳಿಗ್ಗೆ ರಕ್ಷಿಸಲಾಗಿದೆ.

ಪೊಲೀಸ್ ವರದಿಗಳ ಪ್ರಕಾರ, ನಾಯರ್ ಆಸ್ಪತ್ರೆಯ ಮೊದಲ ಮಹಡಿಯನ್ನು ತಲುಪಲೆಂದು ಒಪಿ ಬ್ಲಾಕ್‌ನಲ್ಲಿರುವ ಲಿಫ್ಟ್‌ಗೆ ಪ್ರವೇಶಿಸಿದರು. ಆದರೆ ಲಿಫ್ಟ್ ಸರಿಯಾಗಿ ಕಾರ್ಯನಿರ್ವಹಿಸಿಲ್ಲ, ಮೇಲಕ್ಕೆ ಏರುವ ಬದಲು ಲಿಫ್ಟ್ ಕೆಳಗಿಳಿದು ಸ್ಥಗಿತಗೊಂಡಿದೆ. ಜೊತೆಗೆ ಲಿಫ್ಟ್‌ನ ಬಾಗಿಲುಗಳನ್ನು ಕೂಡಾ ತೆರೆಯಲು ನಾಯರ್ ಅವರಿಗೆ ಸಾಧ್ಯವಾಗಲಿದೆ.

ಲಿಫ್ಟ್‌ನಲ್ಲಿ ಸಿಲುಕಿದ ಬಳಿಕ ನಾಯರ್‌ ಸಹಾಯಕ್ಕಾಗಿ ಕೂಡಾಗಿದ್ದಾರೆ. ಆದರೆ ಹೊರಗಿನಿಂದ ಯಾವ ಪ್ರತಿಕ್ರಿಯೆಯೂ ಕೇಳಿಬಂದಿಲ್ಲ. ಈ ಸಂದರ್ಭದಲ್ಲೇ ನಾಯರ್ ಫೋನ್‌ ಕೂಡಾ ಸ್ವಿಚ್‌ ಆಫ್ ಆಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ಸಾಮಾನ್ಯ ಕೆಲಸದ ಅವಧಿಯಲ್ಲಿ ಲಿಫ್ಟ್ ಬಳಕೆ ಆರಂಭಿಸಿದಾಗ ಲಿಫ್ಟ್‌ನಲ್ಲೇ ವ್ಯಕ್ತಿಯೊಬ್ಬರು ಸಿಲುಕಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಬೆಂಗಳೂರು | ಲಿಫ್ಟ್​​ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ಯುವಕ ಸಾವು

ಇನ್ನು ಸಮಯಕ್ಕೆ ಸರಿಯಾಗಿ ರವೀಂದ್ರನ್ ನಾಯರ್ ಮನೆಗೆ ತಲುಪದೆ ಇರುವುದನ್ನು ನೋಡಿದ ಕುಟುಂಬಸ್ಥರು ವೈದ್ಯಕೀಯ ಕಾಲೇಜು ಪೊಲೀಸರಿಗೆ ದೂರು ನೀಡಿದ್ದಾರೆ. ರವೀಂದ್ರನ್ ನಾಯರ್ ಲಿಫ್ಟ್‌ನಲ್ಲಿ ಸಿಲುಕಿದ್ದ ಬಗ್ಗೆ ಮಾಹಿತಿ ತಿಳಿದ ಬಳಿಕ ಕುಟುಂಬವು ಆಸ್ಪತ್ರೆ ಆಡಳಿತದ ನಿರ್ಲಕ್ಷ್ಯಕ್ಕಾಗಿ ಆಸ್ಪತ್ರೆ ವಿರುದ್ಧ ದೂರು ದಾಖಲಿಸಲು ಮುಂದಾಗಿದೆ. ಲಿಫ್ಟ್‌ ಬಳಕೆಯಲ್ಲಿಲ್ಲ ಎಂದು ಯಾವುದೇ ಸೂಚನಾ ಫಲಕವನ್ನು ಕೂಡಾ ಹಾಕಿಲ್ಲ ಎಂದು ದೂರಿದೆ.

ನಾಯರ್ ಸೋಮವಾರ ಬೆಳಗ್ಗೆ ಲಿಫ್ಟ್‌ನಲ್ಲಿ ಮಲಗಿದ್ದನ್ನು ಲಿಫ್ಟ್ ಆಪರೇಟರ್ ಪತ್ತೆಹಚ್ಚಿದ್ದು ಲಿಫ್ಟ್ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ ಲಿಫ್ಟ್ ಪ್ರವೇಶಿಸಿದ ನಾಯರ್ ಸೋಮವಾರ ಬೆಳಿಗ್ಗೆ 6 ಗಂಟೆಗೆ ಲಿಫ್ಟ್‌ನಿಂದ ಹೊರ ಬಂದಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಬಳಿಕ ಆರೋಗ್ಯ ಸಚಿವೆ ವೀಣಾ ಜಾರ್ಜ್ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಈ ಕುರಿತು ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...