ಕೇರಳ |ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಜಲಫಿರಂಗಿ ದಾಳಿ

Date:

ಕೇರಳದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ರಾಜ್ಯ ಅನುದಾನಿತ ವಿಶ್ವವಿದ್ಯಾಲಯಗಳನ್ನು ಕೇಸರಿಕರಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ತಿರುವನಂತಪುರಂ ಮತ್ತು ಕಣ್ಣೂರಿನಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಕಣ್ಣೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಜಲಫಿರಂಗಿ ಬಳಸಿ ದಾಳಿ ಮಾಡಿದ್ದಾರೆ.

ತಿರುವನಂತಪುರಂನ ಕೇರಳ ವಿಶ್ವವಿದ್ಯಾಲಯದ ಆವರಣದಲ್ಲಿ ಅಖಿಲ ಭಾರತ ಯುವ ಒಕ್ಕೂಟ (AIYF) ಮತ್ತು ಭಾರತೀಯ ಪ್ರಜಾಸತ್ತಾತ್ಮಕ ಯುವ ಒಕ್ಕೂಟ (DYFI) ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಕಣ್ಣೂರಿನ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಭಾರತೀಯ ವಿದ್ಯಾರ್ಥಿ ಒಕ್ಕೂಟದ (SFI) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಕಣ್ಣೂರಿನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದ್ದಾರೆ. ತಿರುವನಂತಪುರಂನಲ್ಲಿ ಹಲವಾರು ವಿದ್ಯಾರ್ಥಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇರಳ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಮೋಹನನ್ ಕುನ್ನುಮ್ಮಲ್ ಅವರನ್ನು ರಾಜ್ಯಪಾಲರು ಅಮಾನತುಗೊಳಿಸಿದ್ದಾರೆ. ಅವರ ಸ್ಥಾನಕ್ಕೆ ಸಿಜಾ ಥಾಮಸ್ ಅವರನ್ನು ಪ್ರಭಾರ ಉಪಕುಲಪತಿಯಾಗಿ ನೇಮಿಸಿದ್ದಾರೆ. ಥಾಮಸ್ ಅವರು ಕಾನೂನಿಗೆ ವಿರುದ್ಧವಾಗಿ ವರ್ತಿಸುತ್ತಿದ್ದಾರೆ. ವಿಶ್ವವಿದ್ಯಾಲಯದ ಸಿಂಡಿಕೇಟ್‌ಅನ್ನು ಕಡೆಗಣಿಸಿ ಸ್ವ-ಇಚ್ಛೆಯಂತೆ ಆಡಳಿತ ನಡೆಸಲು ಯತ್ನಿಸುತ್ತಿದ್ದಾರೆ. ಹೆಚ್ಚುವರಿ ರಿಜಿಸ್ಟಾರ್‌ ನೇಮಕಕ್ಕೆ ಮುಂದಾಗಿದ್ದಾರೆ. ಈ ನಿರ್ಧಾರವನ್ನು ಅವರು ಆರ್‌ಎಸ್‌ಎಸ್‌ ಕಚೇರಿಯಲ್ಲಿ ತೆಗೆದುಕೊಂಡಿದ್ದಾರೆ. ಉಪಕುಲಪತಿಯ ಧೋರಣೆಯನ್ನು ವಿದ್ಯಾರ್ಥಿಗಳು ಖಂಡಿಸಿ, ಪ್ರತಿಭಟನೆಗಿಳಿದಿದ್ದೇವೆ” ಎಂದು DYFI ಕೇರಳ ಕಾರ್ಯದರ್ಶಿ ವಿ.ಕೆ. ಸನುಜ್ ಹೇಳಿದ್ದಾರೆ.

“ಉಪಕುಲಪತಿಗಳು ಆರ್‌ಎಸ್‌ಎಸ್‌ ಅಂಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಆರ್‌ಎಸ್‌ಎಸ್‌ ಕೈಗೊಂಬೆಯಂತೆ ಕೆಲಸ ಮಾಡಲು ನಾವು ಬಿಡುವುದಿಲ್ಲ. ವಿಶ್ವವಿದ್ಯಾಲಯದ ಕಾಯ್ದೆ ಮತ್ತು ಕಾನೂನಿನ ಪ್ರಕಾರ ಅವರು ಕೆಲಸ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...