ಕೇರಳ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಶಿಕ್ಷಕನಿಗೆ 111 ವರ್ಷ ಜೈಲು ಶಿಕ್ಷೆ

Date:

ಪಿಯುಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಟ್ಯೂಷನ್ ಶಿಕ್ಷಕನಿಗೆ 111 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಕೇರಳದ ತಿರುವನಂತಪುರಂನ ನ್ಯಾಯಾಲಯ ತೀರ್ಪು ನೀಡಿದೆ.

ಐದು ವರ್ಷಗಳ ಹಿಂದೆ, 2019ರ ಜುಲೈ 2ರಂದು ಅಪ್ರಾಪ್ತ ಬಾಲಕಿ, ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಟ್ಯೂಷನ್ ಶಿಕ್ಷಕ ಮನೋಜ್ ಎಂಬಾತ ಅತ್ಯಾಚಾರ ಎಸಗಿದ್ದ. ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಅಪರಾಧಿ ಶಿಕ್ಷಕನಿಗೆ 111 ವರ್ಷಗಳ ಜೈಲು ಶಿಕ್ಷೆ ಮತ್ತು 1.05 ಲಕ್ಷ ರೂ. ದಂಡ ವಿಧಿಸಿದೆ. ದಂಡ ಪಾವತಿ ಮಾಡದಿದ್ದರೆ, ಅಪರಾಧಿಗೆ ಹೆಚ್ಚುವರಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿಯೇ ಹೇಳಿದೆ.

ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಮನೋಜ್‌ ಮನೆಯಲ್ಲಿ ಟ್ಯೂಷನ್‌ಗೆ ತೆರಳುತ್ತಿದ್ದರು. ವಿಶೇಷ ತರಗತಿಗೆಂದು ವಿದ್ಯಾರ್ಥಿಯನ್ನು ಮಾತ್ರವೇ ಕರೆಸಿಕೊಂಡಿದ್ದ ಮನೋಜ್, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಆ ಕೃತ್ಯದ ವಿಡಿಯೋ ಮತ್ತು ಫೋಟೋಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ. ಅತ್ಯಾಚಾರಕ್ಕೊಳಗಾದ ಬಾಲಕಿ ಟ್ಯೂಷನ್‌ಗೆ ಹೋಗುವುದನ್ನು ನಿಲ್ಲಿಸಿದ್ದರು. ಆಗ, ಕೃತ್ಯದ ಫೋಟೋಗಳನ್ನು ಮನೋಜ್ ಹರಿಬಿಟ್ಟಿದ್ದ ಎಂದು ಆರೋಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃತ್ಯದ ಫೋಟೋಗಳು ಹೊರಬಂದ ಬಳಿಕ, ಬಾಲಕಿ ಮೇಲಾಗಿರುವ ಕೃತ್ಯದ ಬಗ್ಗೆ ತಿಳಿದ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಇದೀಗ, ಆರೋಪಗಳು ಸಾಬೀತಾಗಿದ್ದು, ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ.

ಬಾಲಕಿಯ ಮೇಲೆ ಮನೋಜ್ ಲೈಂಗಿಕ ದೌರ್ಜನ್ಯ ಎಸಗಿದ್ದನ್ನು ತಿಳಿದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...