ಸಂವಿಧಾನವನ್ನು ‘ನಗರ ನಕ್ಸಲಿಸಂ’ಗೆ ಹೋಲಿಕೆ; ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡ ಮಲ್ಲಿಕಾರ್ಜುನ ಖರ್ಗೆ

Date:

ಭಾರತದ ಸಂವಿಧಾನದ ‘ಕೆಂಪು ಪುಸ್ತಕ’ವನ್ನು ನಗರ ನಕ್ಸಲಿಸಂಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. 2017ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ಇದೇ ಪ್ರತಿಯನ್ನು ನೀಡಿದ್ದರು ಎಂಬುದನ್ನು ಉಲ್ಲೇಖಿಸಿದ್ದಾರೆ.

ನವೆಂಬರ್ 20ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದಾದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚೆಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೈಯಲ್ಲಿ ‘ಕೆಂಪು ಪುಸ್ತಕ’ ಹಿಡಿದು ‘ನಗರ ನಕ್ಸಲರು ಮತ್ತು ಅರಾಜಕತಾವಾದಿಗಳ’ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಒಳಮೀಸಲಾತಿ | ‌ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ಗೆ ವರದಿ ಜಾರಿ ಇಷ್ಟವಿಲ್ಲ: ವಿಪಕ್ಷ ನಾಯಕ ಆರ್‌ ಅಶೋಕ್

ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿಯವರು ತಮ್ಮ ರ‍್ಯಾಲಿಗಳಲ್ಲಿ ಕೆಂಪು ಕವರ್‌ ಹೊಂದಿರುವ ಸಂವಿಧಾನದ ಸಂಕ್ಷಿಪ್ತ ಆವೃತ್ತಿಯನ್ನು ಪ್ರದರ್ಶಿಸುತ್ತಿದ್ದಾರೆ. “ಕೆಂಪು ಕೈಪಿಡಿಯನ್ನು ಉಲ್ಲೇಖಕ್ಕಾಗಿ ಮಾತ್ರ ಬಳಸಲಾಗಿದೆ ಮತ್ತು ಅದು ಸಂಪೂರ್ಣ ಸಂವಿಧಾನವಲ್ಲ” ಎಂದು ಖರ್ಗೆ ಹೇಳಿದ್ದಾರೆ.

“ನರೇಂದ್ರ ಮೋದಿ ಅವರು 2017ರ ಜುಲೈ 26ರಂದು ಅಂದಿನ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಇದೇ ಪ್ರತಿಯನ್ನು ನೀಡಿದ್ದಾರೆ” ಎಂದು ಕಾಂಗ್ರೆಸ್ ನಾಯಕ ಖರ್ಗೆ ಉಭಯ ನಾಯಕರ ಚಿತ್ರವನ್ನು ಪ್ರದರ್ಶಿಸಿದರು.

ಮೋದಿ ಮತ್ತು ಬಿಜೆಪಿಯವರು ಯೋಜಿಸುತ್ತಿರುವಂತೆ ಅದು ಖಾಲಿಯಾಗಿಲ್ಲ. ಪ್ರಧಾನಿ ಮೋದಿ ಮತ್ತೆ ಪ್ರಾಥಮಿಕ ಶಾಲೆಗೆ ಸೇರಿಸುವುದು ಅಗತ್ಯ ಎಂದು ಖರ್ಗೆ ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...