ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತೆಯ ಅಪಹರಣ; ವಿಡಿಯೋ ವೈರಲ್

Date:

ಶಾಲೆಯ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಣ ಮಾಡಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ. ಈ ಅಪಹರಣದ ಸಿಸಿಟಿವಿ ದೃಶ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರ ತವರು ಜಿಲ್ಲೆ ಭರತ್‌ಪುರದಲ್ಲಿ ಈ ಘಟನೆ ನಡೆದಿದ್ದು, ಹಾಡುಹಗಲೇ ಬಾಲಕಿಯನ್ನು ಯುವಕರು ಅಪಹರಿಸಿ ಎಸ್‌ಯುವಿಯಲ್ಲಿ ಕರೆದೊಯ್ದಿದ್ದಾರೆ. ಜೊತೆಗೆ ಬಾಲಕಿಯನ್ನು ಕಾಪಾಡಲು ಜನರು ಬಂದಾಗ ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಪಂಚರ್ ಹಾಕುವ ವೇಳೆ ಟೈರ್ ಸ್ಫೋಟ: ಗಾಳಿಯಲ್ಲಿ ಹಾರಿಬಿದ್ದ ಯುವಕ; ವಿಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ಮತ್ತು ರಾಜಕೀಯ ಟೀಕೆಗೆ ಕಾರಣವಾಗಿದೆ. ಅಪಹರಣವಾದ ಬಾಲಕಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು ಸೋಮವಾರ ಅರ್ಧವಾರ್ಷಿಕ ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಆಕೆ ಬರುವುದನ್ನೇ ಕಾಯುತ್ತಿದ್ದ ಅಪಹರಣಕಾರರು ಆಕೆಯನ್ನು ಬಲವಂತವಾಗಿ ತಮ್ಮ ವಾಹನಕ್ಕೆ ಎಳೆದೊಯ್ದಿದ್ದಾರೆ. ಆಕೆಯ ಸ್ನೇಹಿತರು ಆಕೆಯನ್ನು ರಕ್ಷಿಸಲು ಮುಂದಾದಾಗ ಅಪಹರಣಕಾರರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಇನ್ನು ಬಾಲಕಿಯ ತಂದೆ ಆಕೆಯ ‘ಭಾವಿ ಪತಿಯ ಮನೆಯವರು’ ಅಪಹರಣಕ್ಕೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಆಟಾ-ಸಾಟಾ ಪದ್ಧತಿಯ ಪ್ರಕಾರ ಬಾಲ್ಯ ವಿವಾಹ ಮಾಡಲಾಗಿದೆ. ಔಪಚಾರಿಕವಾಗಿ ವಿವಾಹವಾಗಿದ್ದರೂ ಬಾಲಕಿ ವಯಸ್ಕಳಾಗುವವರೆಗೂ ಪತಿಯೊಂದಿಗೆ ಜೀವಿಸುತ್ತಿರಲಿಲ್ಲಿ.

ಇನ್ನು ವರದಕ್ಷಿಣೆ ವಿಚಾರದಲ್ಲಿ ಉಭಯ ಕುಟುಂಬದ ನಡುವೆ ಭಿನ್ನಾಭಿಪ್ರಾಯವಿತ್ತು ಎಂದು ಹೇಳಲಾಗಿದೆ. ಇದೇ ವಿಚಾರದಲ್ಲಿ ಅಪಹರಣ ಮಾಡಲಾಗಿದೆ ಎಂದು ಬಾಲಕಿಯ ತಂದೆ ಆರೋಪಿಸಿದ್ದಾರೆ. ಈ ಘಟನೆ ನಡೆದು 24 ಗಂಟೆಗಳು ಕಳೆದಿದ್ದು ಇನ್ನೂ ಬಾಲಕಿಯ ಪತ್ತೆಯಾಗಿಲ್ಲ. ಅಪಹರಣಕಾರರು ಯಾವುದೇ ಬೇಡಿಕೆಯನ್ನು ಮುಂದಿಟ್ಟಿಲ್ಲ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...