ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ನೋಟಿಸ್

Date:

ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ (ಕಿಫ್‌ಬಿ) ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿ ದಾಖಲಾಗಿರುವ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯವು (ಇ.ಡಿ) ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯಮಂತ್ರಿ ವಿಜಯನ್ ಜೊತೆಗೆ ಮಾಜಿ ಹಣಕಾಸು ಸಚಿವ ಹಾಗೂ ಸಿಪಿಎಂ ನಾಯಕ ಡಾ. ಥಾಮಸ್ ಐಸಕ್ ಮತ್ತು ಕೆಐಐಎಫ್‌ಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಅಬ್ರಹಾಂ ಅವರಿಗೂ ನೋಟಿಸ್ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಕೊಟ್ಟ ಮಾತು’ ಗದ್ದಲ ಸೃಷ್ಟಿಸಿದ ಬಳಿಕ ಎಚ್ಚೆತ್ತ ಕಾಂಗ್ರೆಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಂಡನ್ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ 2019ರಲ್ಲಿ ಕೆಐಐಎಫ್‌ಬಿ 2,150 ಕೋಟಿ ರೂಪಾಯಿ ಸಂಗ್ರಹಿಸಲು ಮಸಾಲಾ ಬಾಂಡ್ (ವಿದೇಶದಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಆವೃತ್ತಿ ಮಾಡುವ ಬಾಂಡ್‌ಗಳು) ಹೊರಡಿಸಿತ್ತು. ಈ ವಹಿವಾಟಿನಲ್ಲಿ ಅಕ್ರಮಗಳಿವೆ ಎಂಬ ಇಡಿ ವರದಿಯ ಆಧಾರದ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA)ಯಡಿ ಪ್ರಕರಣವನ್ನು ಪರಿಗಣಿಸುತ್ತಿರುವ ಅಧಿಕಾರಿಗಳು ಈ ನೋಟಿಸ್‌ಗಳನ್ನು ಜಾರಿಗೊಳಿಸಿದ್ದಾರೆ.

ಈ ಹಿಂದೆ ಮಹಾ ಲೆಕ್ಕಪರಿಶೋಧಕ ಮತ್ತು ಮಹಾಲೇಖಪಾಲ (ಸಿಎಜಿ) ಕೂಡ ಕೆಐಐಎಫ್‌ಬಿ ಮಸಾಲಾ ಬಾಂಡ್ ವಹಿವಾಟು ಸಂವಿಧಾನ ವಿರೋಧಿಯೆಂದು ಟೀಕಿಸಿ, ಗಂಭೀರ ಅಕ್ರಮಗಳನ್ನು ಎತ್ತಿ ತೋರಿಸಿದ್ದರು.

ಪ್ರಸ್ತುತ ಯುಎಇ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಬೆಳವಣಿಗೆ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...