ಮುಸ್ಲಿಮರಿಗೆ ‘ಎಚ್ಚರಿಕೆ’ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು

Date:

ಕಾಂಗ್ರೆಸ್ ಹಿಂದೂಗಳನ್ನು ವಿಭಜಿಸಿ ಮುಸ್ಲಿಮರನ್ನು ಓಲೈಸುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆರೋಪಿಸಿದ್ದಾರೆ.

ಸುದ್ದಿ ಸಂಸ್ಥೆ ಐಎಎನ್ಎಸ್ ಗೆ ನೀಡಿದ ಸಂದರ್ಶನದಲ್ಲಿ ಸಂಸದೀಯ ವ್ಯವಹಾರಗಳ ಸಚಿವ, ಕಾಂಗ್ರೆಸ್ ಮುಸ್ಲಿಮರನ್ನು ಮತ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. “ಚುನಾವಣೆಗಳ ಸಮಯದಲ್ಲಿ, ಕಾಂಗ್ರೆಸ್ ತನ್ನ ಶೇಕಡಾ 15 ರಷ್ಟು ಮತಗಳನ್ನು ಮುಸ್ಲಿಂ ಸಮುದಾಯದಲ್ಲಿ ಮೀಸಲಾಗಿದೆ ಎಂದು ಹೇಳುತ್ತದೆ. ಇದು ಪಕ್ಷದ ಮನಸ್ಥಿತಿಯನ್ನು ಬಿಂಬಿಸುತ್ತದೆ. ಕಾಂಗ್ರೆಸ್ ಮುಸ್ಲಿಮರನ್ನು ತನ್ನ ಮತಬ್ಯಾಂಕ್ ಎಂದು ಪರಿಗಣಿಸುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಅದು ಮುಸ್ಲಿಮರಿಗೆ ದೊಡ್ಡ ನಷ್ಟ” ಎಂದು ಕಿರಣ್ ರಿಜಿಜು ಉಲ್ಲೇಖಿಸಿದ್ದಾರೆ.

ಭಾನುವಾರ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ತಮ್ಮ ಸಂದರ್ಶನದ ಕ್ಲಿಪ್ ಅನ್ನು ಹಂಚಿಕೊಂಡ ಕೇಂದ್ರ ಸಚಿವ, “ಮುಸ್ಲಿಮರಿಗೆ ನನ್ನ ಎಚ್ಚರಿಕೆ: ಕಾಂಗ್ರೆಸ್‌ನ ಮತ ಬ್ಯಾಂಕ್ ಆಗಬೇಡಿ! ಹಿಂದೂಗಳು ಮತ್ತು ಇತರರಿಗೂ ನನ್ನ ಎಚ್ಚರಿಕೆ: ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಗಳಿಗೆ ಬಲಿಯಾಗಬೇಡಿ”, ಎಂದು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಮುಸ್ಲಿಮರು ಯಾವಾಗಲೂ ತನಗೆ ಮತ ಹಾಕುತ್ತಾರೆ ಎಂದು ಕಾಂಗ್ರೆಸ್ ಪಕ್ಷವು ನಂಬುತ್ತದೆ. ಹೀಗಾದರೆ ಸಮುದಾಯವು ಹೇಗೆ ಅಭಿವೃದ್ಧಿ ಹೊಂದುತ್ತದೆ? ಎಂದು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕಾನೂನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದಾಗಲೂ ಕಾಂಗ್ರೆಸ್ ಪಕ್ಷವು ಭಾರತೀಯ ಸಂವಿಧಾನ ಶಿಲ್ಪಿಯನ್ನು ಅವಮಾನಿಸುವುದನ್ನು ಮುಂದುವರೆಸಿತ್ತು ಎಂದು ಅವರು ಆರೋಪಿಸಿದ್ದಾರೆ.

ಹಿಂದೂಗಳನ್ನು ವಿಭಜಿಸುತ್ತಾ ಮುಸ್ಲಿಮರನ್ನು ತನ್ನ ಮತಬ್ಯಾಂಕ್ ಆಗಿ ಇಟ್ಟುಕೊಳ್ಳುವುದು ಕಾಂಗ್ರೆಸ್‌ನ ಯೋಜನೆಯ ಮಹತ್ವದ ಭಾಗವಾಗಿದೆ ಎಂದು ರಿಜಿಜು ಹೇಳಿದ್ದಾರೆ.

“ಎಸ್ಸಿ, ಎಸ್ಟಿ ಮತ್ತು ಒಬಿಸಿಗಳಿಗೆ ಸೇರಿದ ಜನರು ಎದುರಿಸುತ್ತಿರುವ ಸಮಸ್ಯೆಗಳ ಎಬಿಸಿಡಿ ರಾಹುಲ್ ಗಾಂಧಿ ಅವರಿಗೆ ತಿಳಿದಿಲ್ಲ. ಆದರೂ ಅವರು ಎಸ್ಸಿ, ಎಸ್ಟಿ ಮತ್ತು ಒಬಿಸಿಗಳ ಬಗ್ಗೆ ಸದಾ ಮಾತನಾಡುತ್ತಲೇ ಇದ್ದಾರೆ. ಅವರಿಗೆ ಹಾಗೆ ಮಾತನಾಡಲು ಕಲಿಸಲಾಗಿದೆ”, ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರೂ ಆಗಿರುವ ರಿಜಿಜು ಹೇಳಿದರು.

ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಬಡವರನ್ನಾಗಿ ಮಾಡಿದೆ ಎಂದು ಇತ್ತೀಚೆಗೆ ರಿಜಿಜು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...