ಲಕ್ನೋ ತಂಡದಿಂದ ಕೆ.ಎಲ್ ರಾಹುಲ್ ಔಟ್‌; ‘ಆರ್‌ಸಿಬಿ’ ಸೇರ್ತಾರಾ?

Date:

ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಬ್ಯಾಟ್ಸ್‌ಮನ್‌ ಕೆ.ಎಲ್‌ ರಾಹುಲ್‌ ಅವರು ಐಪಿಎಲ್‌ನಲ್ಲಿ ‘ಲಕ್ನೋ ಸೂಪರ್ ಜೈಂಟ್ಸ್’ (ಎಲ್‌ಎಸ್‌ಜಿ) ಇಂದ ಹೊರಬಂದಿದ್ದಾರೆ. ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಕಾರಣಗಳಿಂದ ಎಲ್‌ಎಸ್‌ಜಿ ತೊರೆದಿದ್ದಾರೆ ಎಂದು ವರದಿಯಾಗಿದೆ. ಆರ್‌ಸಿಬಿಯೂ ಸೇರಿದಂತೆ ನಾಲ್ಕು ತಂಡಗಳು ಅವರನ್ನು ಸೇರಿಸಿಕೊಳ್ಳಲು ಉತ್ಸಕವಾಗಿವೆ.

ಆಗಸ್ಟ್ 26 ರಂದು, ಕೆ.ಎಲ್‌ ರಾಹುಲ್ ಅವರು ಎಲ್‌ಎಸ್‌ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರನ್ನು ಕೋಲ್ಕತ್ತಾದಲ್ಲಿ ಭೇಟಿ ಮಾಡಿದ್ದರು. ಅವರ ಭೇಟಿಯು ರಾಹುಲ್ ಎಲ್‌ಎಸ್‌ಜಿಯನ್ನು ಮುಂದಿನ ಪಂದ್ಯಾವಳಿಯಲ್ಲಿಯೂ ಮುನ್ನಡೆಸಬಹುದು ಎಂಬ ಚರ್ಚೆಯನ್ನು ಹುಟ್ಟುಹಾಕಿತ್ತು. ಜೊತೆಗೆ, ಅವರಿಗೆ ಹೆಚ್ಚಿನ ಸಂಭಾವನೆ ನೀಡುವುದಾಗಿ ಎಲ್‌ಎಸ್‌ಜಿ ಪ್ರಾಂಚೈಸಿ ಭರವಸೆ ನೀಡಿತ್ತು. ಆದಾಗ್ಯೂ, ಅವರು ತಂಡವನ್ನು ತೊರೆಯಲು ನಿರ್ಧಿಸಿದ್ದಾರೆ.

ಕೆ.ಎಲ್‌ ರಾಹುಲ್ ಭಾರತ ಕ್ರಿಕೆಟ್‌ ತಂಡದ ಅತ್ಯಂತ ಹಿರಿಯ ಆಟಗಾರ. ಅವರು ಕೇವಲ ವಿಕೆಟ್ ಕೀಪರ್-ಬ್ಯಾಟರ್ ಮಾತ್ರವಲ್ಲದೆ, ಆಲ್‌ರೌಡರ್‌ ಆಗಿಯೂ ಆಟವಾಡಬಲ್ಲ ಸಾಮರ್ಥ್ಯ ಉಳ್ಳಾವರು. ಅವರು ಈ ಹಿಂದೆ ಪಂಜಾಬ್ ಕಿಂಗ್ಸ್‌ ತಂಡವನ್ನು ಮುನ್ನಡೆಸಿದ್ದರು. ಕಳೆದೆರಡು ಟೂರ್ನಿಗಳಲ್ಲಿ ಎಲ್‌ಎಸ್‌ಜಿ ತಂಡದ ನಾಯಕರಾಗಿದ್ದರು. ಸದ್ಯ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ಫಾರ್ಮ್ ಸ್ವಲ್ಪ ಕ್ಷೀಣಿಸಿದರೂ, ಬೇಡಿಕೆಯ ಆಟಗಾರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯಕ್ಕೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ), ಗುಜರಾತ್ ಟೈಟಾನ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ – ನಾಲ್ಕು ಫ್ರಾಂಚೈಸಿಗಳು ಅವರನ್ನು ಹರಾಜಿನಲ್ಲಿ ಖರೀದಿಸಲು ಮುಂದಾಗಿವೆ. ಅವರನ್ನು ಹೆಚ್ಚಿನ ಮೊತ್ತದೊಂದಿಗೆ ಆರ್‌ಸಿಬಿ ಖರೀದಿಸಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ.

ಮೆಗಾ ಹರಾಜಿಗೆ ಮುಂಚಿತವಾಗಿ ಬಿಡುಗಡೆಯಾದ ಐಪಿಎಲ್ ಸಂಭಾವನೆಯ ಪ್ರಕಾರ, ಈ ಬಾರಿ ಹರಾಜಿನಲ್ಲಿ ಪ್ರತಿ ಪ್ರಾಚೈಸಿಯು ತನ್ನ ತಂಡಕ್ಕೆ ಆಟಗಾರರನ್ನು ಕೊಳ್ಳಲು 120 ಕೋಟಿ ರೂ.ವರೆಗೆ ಖರ್ಚು ಮಾಡಬಹುದು. ಅದರಲ್ಲಿ, ಮೊದಲ ಆಟಗಾರನಿಗೆ ತಂಡವು 18 ಕೋಟಿ ರೂ.ವರೆಗೆ ಸಂಭಾವನೆ ನೀಡಬಹುದು. ಎರಡನೇ ಅಥವಾ ಕ್ಯಾಪ್ಡ್‌ ಆಟಗಾರರಿಗೆ 14 ಕೋಟಿ ರೂ. ಹಾಗೂ ಅನ್‌ಕ್ಯಾಪ್ಡ್ ಆಟಗಾರರಿಗೆ ತಲಾ 4 ಕೋಟಿ ರೂ. ಭರಿಸಬಹುದು.

ಒಂದು ತಂಡವು ಐವರು ಕ್ಯಾಪ್ಡ್ ಆಟಗಾರರನ್ನು ಖರೀದಿಸಿದರೆ, ಆ ತಂಡವು ಹರಾಜು ಮಡಕೆಯಿಂದ 75 ಕೋಟಿ ರೂ.ಗಳನ್ನು ಆ ಐವರಿಗೆ ವ್ಯಯಿಸಬೇಕಾಗುತ್ತದೆ. ನವೆಂಬರ್‌ನಲ್ಲಿ ಮೆಗಾ ಹರಾಜು ನಡೆಯುವ ಸಾಧ್ಯತೆಯಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...