ಕೋಲ್ಕತ್ತಾ ಪ್ರಕರಣ | 9ನೇ ದಿನವೂ ಮುಂದುವರೆದ ಕಿರಿಯ ವೈದ್ಯರ ಉಪವಾಸ ಸತ್ಯಾಗ್ರಹ; ರಾಜ್ಯಾದ್ಯಂತ ಬೆಂಬಲ

Date:

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ನಂತರ ಬಂಗಳಾದ ಕಿರಿಯ ವೈದ್ಯರು ಸರ್ಕಾರದ ಎದುರು ಪ್ರಮುಖ ಐದು ಬೇಡಿಕೆಗಳನ್ನಿಟ್ಟಿದ್ದಾರೆ. ಅವುಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ, ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಉಪವಾಸ ಸತ್ಯಾಗ್ರಹ ಭಾನುವಾರ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಅವರ ಪ್ರತಿಭಟನೆಯನ್ನು ಬೆಂಬಲಿಸಿ ರಾಜ್ಯಾದ್ಯಂತ ಜನರು ‘ಸಾಂಕೇತಿಕ ಉಪವಾಸ’ ನಡೆಸಿದ್ದಾರೆ.

ಬಂಗಾಳದ ಕೋಲ್ಕತ್ತಾ ಮತ್ತು ಸಿಲಿಗುರಿ ನಗರದಲ್ಲಿ 9 ದಿನಗಳಿಂದ ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರಲ್ಲಿ, ಈವರೆಗೆ ಮೂವರು ಅಸ್ವಸ್ಥಗೊಂಡಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರೈನಿ ವೈದ್ಯರನ್ನು ಬೆಂಬಲಿಸಿ ಮಾಲ್ಡಾ ಮತ್ತು ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ಹಲವಾರು ಜನರು 12 ಗಂಟೆಗಳ ‘ಸಾಂಕೇತಿಕ ಉಪವಾಸ’ ನಡೆಸಿದ್ದಾರೆ. ಟ್ರೈನಿ ವೈದ್ಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಾಚಾರ-ಹತ್ಯೆಗೆ ಬಲಿಯಾದ ಆರ್‌ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿ ಎನ್‌.ಎಸ್‌ ನಿಗಮ್‌ ಅವರನ್ನು ಕೂಡಲೇ ವಜಾಗೊಳಿಸಬೇಕು. ಕೆಲಸದ ಸ್ಥಳಗಳಲ್ಲಿ ಭದ್ರತೆ ಒದಗಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಕೇಂದ್ರೀಕೃತ ರೆಫರಲ್ ವ್ಯವಸ್ಥೆಯನ್ನು ಸ್ಥಾಪಿಸಬೇಕು ಎಂಬುದು ಸೇರಿದಂತೆ ಹಲವು ಕ್ರಮಗಳಿಗೆ ಪ್ರತಿಭಟನಾನಿರತ ವೈದ್ಯರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...