ಬಂಗಾಳ ಸರ್ಕಾರವನ್ನು ಪ್ರತಿನಿಧಿಸಿದ್ದಕ್ಕೆ ವಕೀಲರಿಗೆ ಅತ್ಯಾಚಾರ ಬೆದರಿಕೆ; ಕಪಿಲ್ ಸಿಬಲ್ ಆರೋಪ

Date:

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸಿದ್ದಕ್ಕಾಗಿ ತಮ್ಮ ಸಹೋದ್ಯೋಗಿ ವಕೀಲರಿಗೆ ಅತ್ಯಾಚಾರ ಬೆದರಿಕೆಗಳು ಬಂದಿವೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಆರೋಪಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಸೋಮವಾರ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಪಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ ಪ್ರಕರಣದ ವಿಚಾರಣೆ ನಡೆಸಿದೆ. ಈ ವೇಳೆ, ವಾದ ಮಂಡಿಸಿದ ಸಿಬಲ್ ,”ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಕಾರಣಕ್ಕಾಗಿ, ನನ್ನ ಚೇಂಬರ್‌ನಲ್ಲಿರುವ ಮಹಿಳಾ ವಕೀಲೆಯರು ಮತ್ತು ಸಿಬ್ಬಂದಿಗಳಿಗೆ ಆಸಿಡ್ ದಾಳಿ ಮತ್ತು ಅತ್ಯಾಚಾರದ ಕರೆಗಳು ಬರುತ್ತಿವೆ” ಎಂದು ತಿಳಿಸಿದ್ದಾರೆ. ಪ್ರಕರಣದ ವಿಚಾರಣೆಯ ‘ಲೈವ್‌ ಸ್ಟ್ರೀಮಿಂಗ್’ಅನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಅದಾಗ್ಯೂ, ನ್ಯಾಯಾಲಯವು ‘ಲೈವ್ ಸ್ಟ್ರೀಮಿಂಗ್’ ನಿಲ್ಲಿಸುವ ಸಿಬಲ್ ಅವರ ಮನವಿಯನ್ನು ತಿರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್‌ 9ರಂದು ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸೆಮಿನಾಲ್ ಹಾಲ್‌ನಲ್ಲಿ ಟ್ರೈನಿ ವೈದ್ಯೆಯ ಮೃತದೇಹ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಕೃತ್ಯವನ್ನು ಖಂಡಿಸಿ ವೈದ್ಯರು ಕಳೆದ ಒಂದೂವರೆ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆಅ.

ಪ್ರತಿಭಟನಾನಿರತ ವೈದ್ಯರು ಮಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಂಗಾಳ ಸರ್ಕಾರದ ಮುಂದೆ ಐದು ಬೇಡಿಕೆಗಳನ್ನು ಇಟ್ಟಿದ್ದಾರೆ. ಅವುಗಳಲ್ಲಿ ಮೂರು ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಹೀಗಾಗಿ, ವೈದ್ಯರು ಮಂಗಳವಾರ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...