ಕೋಲ್ಕತ್ತಾ ಅತ್ಯಾಚಾರ-ಕೊಲೆ | ಪ್ರಕರಣ ಮುಚ್ಚಿಹಾಕಲು ಪೋಷಕರಿಗೆ ಹಣ ಕೊಡಲು ಯತ್ನಿಸಿದ್ದ ಪೊಲೀಸರು

Date:

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಯ ಪ್ರಕರಣವನ್ನು ಮುಚ್ಚಿಹಾಕಲು ಸಂತ್ರಸ್ತೆಯ ಪೋಷಕರಿಗೆ ಹಣ ಕೊಡಲು ಪೊಲೀಸರು ಪ್ರಯತ್ನಿಸಿದ್ದರು. ಮಾತ್ರವಲ್ಲದೆ, ಸಂತ್ರಸ್ತೆಯ ಮೃತದೇಹವನ್ನು ತ್ವರಿತವಾಗಿ ಸುಟ್ಟು ಹಾಕುವ ಮೂಲಕ ಪ್ರಕರಣವನ್ನು ತಿರುಚಲು ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಸ್ವತಃ ಮೃತ ವೈದ್ಯೆಯ ಕುಟುಂಬವೇ ಈ ಆರೋಪ ಮಾಡಿದೆ.

ವೈದ್ಯೆಯ ಅತ್ಯಾಚಾರ-ಕೊಲೆಯ ವಿರುದ್ಧ ಪ್ರತಿಭಟನಾನಿರತ ವೈದ್ಯರೊಂದಿಗೆ ಸಂತ್ರಸ್ತೆಯ ಕುಟುಂಬ ಪ್ರತಿಭಟನೆಗೆ ಇಳಿದಿದೆ. ಆರ್‌ಜಿ ಕರ್ ಆಸ್ಪತ್ರೆ ಬಳಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕುಟುಂಬವು ಭಾಗವಹಿಸಿದೆ. “ಆಗಸ್ಟ್‌ 9ರಂದು ಘಟನೆ ನಡೆದು, ಘಟನೆ ಬೆಳಕಿಗೆ ಬಂದ ಬಳಿಕ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣ (ಲಂಚ) ನೀಡಲು ಪ್ರಯತ್ನಿಸಿದರು” ಎಂದು ಕುಟುಂಬ ಆರೋಪಿಸಿದೆ.

“ಪೊಲೀಸರು ಮೊದಲಿನಿಂದಲೂ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದರು. ಮೃತದೇಹವನ್ನು ನೋಡಲು ನಮಗೆ ಅವಕಾಶ ನೀಡಲಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುವಾಗ ಪೊಲೀಸ್ ಠಾಣೆಯಲ್ಲಿ ಕಾಯಬೇಕಾಯಿತು. ನಂತರ, ಶವವನ್ನು ಹಸ್ತಾಂತರಿಸಿದಾಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನಮಗೆ ಹಣ ನೀಡಲು ಮುಂದಾಗಿದ್ದರು. ಅವರ ಹಣವನ್ನು ನಾವು ತಕ್ಷಣ ನಿರಾಕರಿಸಿದ್ದೇವೆ” ಎಂದು ಮೃತ ವೈದ್ಯರ ತಂದೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...