ಘಟನೆಯ ದಿನ ಪೊಲೀಸ್‌ ಅಧಿಕಾರಿಯ ಬೈಕ್‌ ಬಳಸಿದ್ದ ಕೋಲ್ಕತ್ತಾ ಅತ್ಯಾಚಾರ ಆರೋಪಿ

Date:

ಕೋಲ್ಕತ್ತಾದ ಆರ್​ಜಿ ಕರ್‌ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌​ ಆಗಸ್ಟ್‌ 9ರ ಘಟನೆಯ ದಿನ ಉನ್ನತ ಪೊಲೀಸ್‌ ಅಧಿಕಾರಿಯ ಬೈಕ್‌ ಬಳಸಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಕೋಲ್ಕತ್ತಾ ಪೊಲೀಸ್​ ಇಲಾಖೆಯಲ್ಲಿ ಸ್ವಯಂಸೇವಕನಾಗಿದ್ದ ಸಂಜಯ್ ರಾಯ್‌ ಅಂದು ಮುಂಬೈನ ರೆಡ್​ ಲೈಟ್ ಏರಿಯಾಗೆ ಹೋಗುವಾಗ ಬಳಸಿದ್ದು ಇದೇ ಅಧಿಕಾರಿಯ ಬೈಕ್ ಆಗಿತ್ತು. ಆರೋಪಿ ಕುಡಿದ ಅಮಲಿನಲ್ಲಿ 15 ಕಿ.ಮೀ ದೂರದವರೆಗೆ ಬೈಕ್ ಚಲಾಯಿಸಿದ್ದ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಬೈಕ್ 2014 ರಲ್ಲಿ ನೋಂದಾಯಿಸಲ್ಪಟ್ಟಿದೆ. ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ವಾಹನವನ್ನು ವಶಪಡಿಸಿಕೊಂಡಿದೆ. ಬೈಕ್​ನಲ್ಲಿ ಕೆಪಿ ಅಂದರೆ ಕೋಲ್ಕತ್ತಾ ಪೊಲೀಸ್​ ಎಂದು ಬರೆಯಲಾಗಿದೆ. ಸಂಜಯ್ ತನ್ನನ್ನು ಪೊಲೀಸ್ ಎಂದು ಹೇಳಿಕೊಂಡು ಎಲ್ಲರನ್ನೂ ಬೆದರಿಸುತ್ತಿದ್ದ. ಈ ಬೈಕ್ ಹಿರಿಯ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ನೋಂದಣಿಯಾಗಿದೆ. ಆಗಸ್ಟ್ 9 ರ ಘಟನೆಯ ನಂತರ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಕೋಲ್ಕತ್ತಾ ಪೊಲೀಸರು ಸಂಜಯ್ ರಾಯ್‌ನನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದರ್ಶನಾತಿಥ್ಯ- ಪೊಲೀಸರಿಂದ ಪೊಲೀಸರಿಗಾದ ಅವಮಾನ

ಆರ್‌ಜಿ ಕರ್ ಆಸ್ಪತ್ರೆಯ ಸೆಮಿನಾರ್ ಕೊಠಡಿಗೆ ಬಂದಾಗ ಮಹಿಳಾ ವೈದ್ಯೆ ಆಗಲೇ ಮೃತಪಟ್ಟಿದ್ದಳು ಎಂದು ಆರೋಪಿ ಸಂಜಯ್ ರಾಯ್​ ಪಾಲಿಗ್ರಾಫ್​ ಪರೀಕ್ಷೆ ವೇಳೆ ಹೇಳಿಕೆ ನೀಡಿದ್ದಾನೆ. ಅತ್ಯಾಚಾರ, ಕೊಲೆ ಮಾಡಿದ್ದು ನಾನೇ ಎಂದು ಈಗಾಗಲೇ ಒಪ್ಪಿಕೊಂಡಿರುವ ಸಂಜಯ್ ರಾಯ್ ಇದೀಗ ಸುಳ್ಳು ಹೇಳುತ್ತಿದ್ದಾನೆ. ಅಂದು ನಾನು ಸೆಮಿನಾರ್​ ಕೊಠಡಿಗೆ ಹೋಗುವ ಮೊದಲು ಆಕೆ ಸಾವನ್ನಪ್ಪಿದ್ದಳು, ನಾನು ನಿರಪರಾಧಿ ಎಂದು ಹೇಳಿದ್ದಾನೆ.

ಕೋಲ್ಕತ್ತಾದ ಪ್ರೆಸಿಡೆನ್ಸಿ ಜೈಲಿನಲ್ಲಿ ಸಿಬಿಐ ಅಧಿಕಾರಿಗಳು ಆರೋಪಿ ಸಂಜಯ್ ರಾಯ್‌ನ ಪಾಲಿಗ್ರಾಫ್ ಪರೀಕ್ಷೆಯನ್ನು ನಡೆಸಿದ್ದರು. ಸುಳ್ಳು ಪತ್ತೆ ಪರೀಕ್ಷೆ ವೇಳೆ ಸುಳ್ಳು ಹಾಗೂ ಅನುಮಾನಾಸ್ಪದ ಉತ್ತರಗಳನ್ನು ಗುರುತಿಸಲಾಗಿದೆ. ಸಂಜಯ್ ರಾಯ್ ಆ ವೇಳೆ ಆತಂಕಗೊಂಡಿದ್ದು, ಸಿಬಿಐ ಹಲವು ಸಾಕ್ಷ್ಯಗಳನ್ನು ಮುಂದಿಟ್ಟರೂ ಆತ ಸಮರ್ಥನೆ ನೀಡುತ್ತಲೇ ಇದ್ದ ಎಂದು ಮಾಧ್ಯಮಗಳು ವರದಿ ಮಾಡಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...