ಕೋಲ್ಕತ್ತಾ | ‘ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಟ್ರೇಲರ್ ಬಿಡುಗಡೆಗೆ ಪೊಲೀಸರ ತಡೆ

Date:

1946ರಲ್ಲಿ ಕೋಲ್ಕತ್ತಾದಲ್ಲಿ ನಡೆದಿದ್ದ ಗಲಭೆಯ ಘಟನೆಗಳನ್ನಾಧರಿಸಿ ನಿರ್ಮಿಸಲಾಗಿರುವ ‘ದಿ ಬೆಂಗಾಲ್ ಫೈಲ್ಸ್‌’ ಸಿನಿಮಾದ ಟ್ರೈಲರ್‌ ಬಿಡುಗಡೆಗೆ ಕೋಲ್ಕತ್ತಾ ಪೊಲೀಸರು ತಡೆಯೊಡ್ಡಿದ್ದಾರೆ ಎಂದು ವರದಿಯಾಗಿದೆ.

ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಪೊಲೀಸರು ವಿರುದ್ಧ ಆರೋಪ ಮಾಡಿದ್ದು, “ಶನಿವಾರ ಮಧ್ಯಾಹ್ನ ಪಂಚತಾರಾ ಹೋಟೆಲ್‌ನಲ್ಲಿ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ನಿರ್ಧರಿಸಿದ್ದೆವು. ಆದರೆ, ಟ್ರೇಲರ್ ಬಿಡುಗಡೆಯನ್ನು ಪೊಲೀಸರು ತಡೆದಿದ್ದಾರೆ” ಎಂದು ಹೇಳಿದ್ದಾರೆ.

ಸೆನ್ಸಾರ್ ಮಂಡಳಿಯು ಸಿನಿಮಾ ಬಿಡುಗಡೆಗೆ ಅನುಮತಿ ನೀಡಿದೆ. ಸಿನಿಮಾದ ನಿಷೇಧಕ್ಕೆ ಹೈಕೋರ್ಟ್‌ ಕೂಡ ತಡೆ ನೀಡಿದೆ. ಆದರೂ, ಟ್ರೈಲರ್ ಬಿಡುಗಡೆ ಕಾರ್ಯಕ್ರಮದ ಮೇಲೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ. ಜನರ ಪ್ರಜಾಪ್ರಭುತ್ವ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ಅಗ್ನಿಹೋತ್ರಿ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಅಗ್ನಿಹೋತ್ರಿ ಅವರ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ‘ದಿ ಕಾಶ್ಮೀರ್ ಫೈಲ್ಸ್‌’, ‘ದಿ ತಾಷ್ಕೆಂಟ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ಎಂಬ ಸಿನಿಮಾಗಳನ್ನೂ ನಿರ್ಮಿಸಿ ಬಿಡಗುಡೆ ಮಾಡಿದ್ದಾರೆ. ಈ ಎಲ್ಲ ಸಿನಿಮಾಗಳಲ್ಲಿಯೂ ಇತಿಹಾಸ ಮತ್ತು ಸತ್ಯವನ್ನು ತಿರುಚಲಾಗಿದೆ ಎಂಬ ಆರೋಪಗಳಿವೆ. ಈ ಸಿನಿಮಾಗಳ ಕಾರಣಕ್ಕಾಗಿ ಅಗ್ನಿಹೋತ್ರಿ ವಿವಾದದ ಕೇಂದ್ರಬಿಂದುವೂ ಆಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...