ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್

Date:

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಆಗಸ್ಟ್ 20ರಂದು ಆಸ್ಪತ್ರೆಗಳಲ್ಲಿನ ಆರೋಗ್ಯ ಸಿಬ್ಬಂದಿಯ ಸುರಕ್ಷತೆಯನ್ನು ಪರಿಶೀಲಿಸಲು ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸಲು ಆದೇಶಿಸಿದರು.

ಆಗಸ್ಟ್ 9ರಂದು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣವನ್ನು ವಿಚಾರಣೆಯನ್ನು ಸಿಜೆಐ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ನಡೆಸಿದೆ. ಪೀಠವು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡಿತ್ತು.

ಇದನ್ನು ಓದಿದ್ದೀರಾ? ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ರೋಗಿಗಳನ್ನು ಶಿಫ್ಟ್ ಮಾಡಿ, ಆಸ್ಪತ್ರೆಯನ್ನು ಮುಚ್ಚಿ; ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ರಾಷ್ಟ್ರೀಯ ಕಾರ್ಯಪಡೆಯನ್ನು ಸ್ಥಾಪಿಸುತ್ತಿದ್ದೇವೆ. ಅದು ಬೇರೆ ಬೇರೆ ಹಿನ್ನೆಲೆಯ ವೈದ್ಯರನ್ನು ಹೊಂದಿದ್ದು, ಅವರು ಭಾರತದಾದ್ಯಂತ ಅನುಸರಿಸಬೇಕಾದ ವಿಧಾನಗಳನ್ನು ಸೂಚಿಸುತ್ತಾರೆ. ಯುವ ಅಥವಾ ಮಧ್ಯವಯಸ್ಕ ವೈದ್ಯರು ತಮ್ಮ ಉದ್ಯೋಗ ವಾತಾವರಣದಲ್ಲಿ ಸುರಕ್ಷಿತವಾಗಿರಲು ಸಾಧ್ಯವಾಗಲು ಅನುಸರಿಸಬೇಕಾದ ವಿಧಾನಗಳನ್ನು ಸೂಚಿಸುತ್ತಾರೆ” ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿರುವ ವಿಚಾರದಲ್ಲಿ ಪಶ್ಚಿಮ ಬಂಗಾಳ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆಸ್ಪತ್ರೆಯ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದೆ.

ರಾಷ್ಟ್ರೀಯ ಕಾರ್ಯಪಡೆಯ ಸದಸ್ಯರ ಪಟ್ಟಿ:

  1. ಸರ್ಜನ್ ವೈಸ್ ಅಡ್ಮಿರಲ್ ಆರ್ತಿ ಸರಿನ್
  2. ಡಾ ಡಿ ನಾಗೇಶ್ವರ ರೆಡ್ಡಿ
  3. ಡಾ ಎಂ ಶ್ರೀನಿವಾಸ್
  4. ಡಾ ಪ್ರತಿಮಾ ಮೂರ್ತಿ
  5. ಡಾ ಗೋವರ್ಧನ್ ದತ್ ಪುರಿ
  6. ಡಾ ಸೌಮಿತ್ರಾ ರಾವತ್
  7. ದೆಹಲಿಯ ಏಮ್ಸ್ ಹೃದ್ರೋಗ ವಿಭಾಗ ಮುಖ್ಯಸ್ಥೆ ಪ್ರೊ ಅನಿತಾ ಸಕ್ಸೇನಾ
  8. ಮುಂಬೈನ ಡೀನ್ ಗ್ರಾಂಟ್ ಮೆಡಿಕಲ್ ಕಾಲೇಜಿನ ಮುಖ್ಯಸ್ಥೆ ಪ್ರೊ ಪಲ್ಲವಿ ಸಪ್ರೆ
  9. ಏಮ್ಸ್‌ನ ನರವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ ಪದ್ಮಾ ಶ್ರೀವಾಸ್ತವ
?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...