ಭಾರತದ ಸಾಮಾಜಿಕ ಮಾಧ್ಯಮ ಆಪ್ ‘ಕೂ’ ಶೀಘ್ರದಲ್ಲೇ ಸ್ಥಗಿತ

Date:

‘ಎಕ್ಸ್‌’ಗೆ(ಹಿಂದಿನ ಟ್ವಿಟರ್‌) ಪರ್ಯಾಯ ಎಂದೇ ಹೇಳಲಾಗುತ್ತಿದ್ದ ಭಾರತದ ಸಾಮಾಜಿಕ ಮಾಧ್ಯಮ ಆಪ್‌ ‘ಕೂ’  ಶೀಘ್ರದಲ್ಲೇ ಸ್ಥಗಿತಗೊಳ್ಳಲಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಆನ್‌ಲೈನ್‌ ಮಾಧ್ಯಮ ಡೈಲಿಹಂಟ್‌ನೊಂದಿಗೆ ಸ್ವಾಧೀನ ಪ್ರಕ್ರಿಯೆ ಮಾತುಕತೆಗಳು ವಿಫಲವಾದ ನಂತರ 4 ವರ್ಷಗಳ ಹಿಂದೆ ಆರಂಭಗೊಂಡಿದ್ದ ‘ಕೂ’ ಆಪ್‌ ಸ್ಥಗಿತಕೊಳ್ಳುತ್ತಿದೆ.

‘ಕೂ’ ಆಪ್‌ ಆರಂಭವಾದಾಗ ರಾಜಕಾರಣಿಗಳು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಪ್ರಚಾರ ನಡೆಸಿದ್ದರು. ಕಂಪನಿಯು ನೈಜೀರಿಯಾ ಹಾಗೂ ಬ್ರೆಜಿಲ್‌ನಲ್ಲಿ ವಿಸ್ತರಿಸಿ ಹೂಡಿಕೆದಾರರ ಗಮನವನ್ನು ಸೆಳೆದಿತ್ತು.

2020ರಲ್ಲಿ ಉದ್ಯಮಿಗಳಾದ ಅಮ್ರಮೇಯ ರಾಧಾಕೃಷ್ಣ ಹಾಗೂ ಮಾಯಾಂಕ್‌ ಬಿದ್ವಾತ್ಕಾ ಎಂಬುವವರು 10 ಭಾಷೆಗಳಲ್ಲಿ ಲಭ್ಯವಾಗುವಂತೆ ‘ಕೂ’ ಆಪ್‌ಅನ್ನು ಅಭಿವೃದ್ಧಿಪಡಿಸಿದ್ದರು. ಹಳದಿ ಬಣ್ಣದ ಹಕ್ಕಿಯ ಲೋಗೊದೊಂದಿಗೆ ಆರಂಭವಾಗಿದ್ದ ಇದು ಉದ್ಘಾಟನಾ ಸಂದರ್ಭದಲ್ಲಿ ಸುಮಾರು 6 ಕೋಟಿ ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೊದಲ ಭಾಷಣದಲ್ಲೇ ಬಿಜೆಪಿಗರ ಬೆವರಿಳಿಸಿದ ರಾಹುಲ್ ಮತ್ತು ಮಹುವಾ

ಈ ನಡುವೆ ಆಪ್‌ 2021ರಲ್ಲಿ ಅಮೆರಿಕದ ಟೈಗರ್‌ ಗ್ಲೋಬಲ್‌ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು 31 ಮಿಲಿಯನ್‌ ಡಾಲರ್‌ ಹೂಡಿಕೆಯನ್ನು ಹೆಚ್ಚಿಸಿತ್ತು. ಇದು 2022ರ ವೇಳೆಗೆ 57 ಮಿಲಿಯನ್‌ ಡಾಲರ್‌ಗೆ ಏರಿಕೆಗೊಂಡು 90 ಲಕ್ಷ ಸಕ್ರಿಯ ಚಂದಾದಾರರಿದ್ದರು.

ಆದರೆ ನಂತರದ ದಿನಗಳಲ್ಲಿ ಕಂಪನಿ ಬೆಳವಣಿಗೆ ಸಾಧಿಸುವಲ್ಲಿ ವಿಫಲವಾಯಿತು. ಹೂಡಿಕೆ ಹೆಚ್ಚಿಸಲು ವಿಫಲವಾಗುವುದರೊಂದಿಗೆ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಲಾಯಿತು. ‘ಕೂ’ ಸಂಸ್ಥಾಪಕರು ತಮ್ಮ ಸ್ವಂತ ಹಣದಿಂದ ಉದ್ಯೋಗಿಗಳಿಗೆ ವೇತನವನ್ನು ನೀಡಬೇಕಾದ ಪರಿಸ್ಥಿತಿ ಉಂಟಾಯಿತು. ಅಂತಿಮವಾಗಿ ಡೈಲಿಹಂಟ್‌ನೊಂದಿಗೆ ಸ್ವಾಧೀನ ಪ್ರಕ್ರಿಯೆ ವಿಫಲವಾದ ನಂತರ ಕಂಪನಿ ಮುಚ್ಚುವ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...