ಕುಂಭಮೇಳ | ಭಕ್ತರಿಗೆ ನೀಡುವ ಆಹಾರಕ್ಕೆ ಬೂದಿ ಬೆರೆಸಿದ ಪೊಲೀಸ್ ಅಧಿಕಾರಿ; ಅಮಾನತು

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಗರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇವೆ. ಬುಧವಾರ ಕಾಲ್ತುಳಿತವೂ ಸಂಭವಿಸಿದ್ದು, 40 ಮಂದಿ ಸಾವನ್ನಪ್ಪಿದ್ದಾರೆ. ಭಕ್ತರಲ್ಲಿ ಆತಂಕ ಹೆಚ್ಚಾಗುತ್ತಿದೆ. ಇದೆಲ್ಲದರ ನಡುವೆ, ಕುಂಭಮೇಳದಲ್ಲಿ ಭಕ್ತರಿಗಾಗಿ ತಯಾರಿಸುತ್ತಿದ್ದ ಆಹಾರದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರು ಬೂದಿ ಬೆರೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ಅಧಿಕಾರಿಯನ್ನು ಇದೀಗ ಅಮಾನತು ಮಾಡಲಾಗಿದೆ.

ಸಾಮಾಜಿಕ ಜಾಲತಾಣ ಬಳಕೆದಾರರೊಬ್ಬರು ವಿಡಿಯೋವನ್ನು ಹಂಚಿಕೊಂಡು, ಕುಂಭಮೇಳ ನಡೆಯುತ್ತಿರುವ ಪ್ರದೇಶದ ಡಿಸಿಪಿ ಕುಲೀಪ್ ಸಿಂಗ್ ಗುಣವತ್ ಅವರನ್ನು ಟ್ಯಾಗ್‌ ಮಾಡಿದ್ದರು. ವಿಡಿಯೋದಲ್ಲಿ ಪೊಲೀಸ್‌ ಅಧಿಕಾರಿ ಬ್ರಿಜೇಶ್ ಕುಮಾರ್ ತಿವಾರಿ, ಒಲೆಯ ಮೇಲೆ ತಯಾರಿಸಲಾಗುತ್ತಿದ್ದ ಆಹಾರಕ್ಕೆ ಬೂದಿ ಸೇರಿಸುವುದು ಸೆರೆಯಾಗಿದೆ.

ವಿಡಿಯೋವನ್ನು ಹಂಚಿಕೊಂಡಿದ್ದ ಹಲವರು, ಇದು ನಾಚಿಕೆಗೇಡಿನ ಕೃತ್ಯವಾಗಿದೆ. ತಪ್ಪಿತಸ್ತ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋ ವೈರಲ್ ಆದ ಬಳಿಕ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ. ಆಹಾರದಲ್ಲಿ ಬೂದಿ ಬೆರೆಸಿದ್ದ ಪೊಲೀಸ್‌ ಅಧಿಕಾರಿ ಬ್ರಿಜೇಶ್ ಕುಮಾರ್ ತಿವಾರಿ ಎಂಬವರನ್ನು ಅಮಾನತುಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...