ಶಿಂದೆ ಟೀಕೆ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

Date:

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರನ್ನು ಪರೋಕ್ಷವಾಗಿ ಟೀಕಿಸಿದ ಕಾರಣಕ್ಕೆ ತನ್ನ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸ್ಟಾಂಡ್‌ಅಪ್ ಕಾಮೆಡಿಯನ್ ಕುನಾಲ್ ಕಾಮ್ರಾ ಅವರು ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಏಪ್ರಿಲ್ 5ರಂದು ಕುನಾಲ್ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕುನಾಲ್ ಪರೋಕ್ಷವಾಗಿ ಶಿಂದೆ ಅವರನ್ನು ಟೀಕಿಸಿದ್ದರು. ತನ್ನ ಶಿವಸೇನೆ ಪಕ್ಷವನ್ನೇ ಇಬ್ಭಾಗ ಮಾಡಿದ ದ್ರೋಹಿ ಎಂದು ಹೇಳಿದ್ದರು. ಶಿಂದೆ ಉದ್ದೇಶಿಸಿ ತನ್ನ ಹಾಸ್ಯ ಹಾಡಿನಲ್ಲಿ ಶಿಂದೆ ಹೆಸರನ್ನೂ ಎಲ್ಲಿಯೂ ಉಲ್ಲೇಖಿಸದ ಕುನಾಲ್ ‘ಥಾಣೆಯ ನಾಯಕ’ ಎಂದು ಸಂಭೋದಿಸಿದ್ದಾರೆ. ಶಿಂದೆ ಶಿವಸೇನೆಯಿಂದ ಹೊರಬಂದು ಪ್ರತ್ಯೇಕವಾಗಿ ತಮ್ಮದೇ ಶಿವಸೇನೆ ಪಕ್ಷವನ್ನು ಕಟ್ಟಿಕೊಂಡಿದ್ದಾರೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಪ್ರತ್ಯೇಕ ಪಕ್ಷವಾಗಿದೆ.

ಇದನ್ನು ಓದಿದ್ದೀರಾ? 2020ರಲ್ಲಿ ಕಂಗನಾ ಪರ ನಿಂತ ಕೇಂದ್ರ ಈಗ ಕುನಾಲ್ ಕಾಮ್ರಾಗೆ ರಕ್ಷಣೆ ಒದಗಿಸಲಿ: ಸಂಜಯ್ ರಾವತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋ ವೈರಲ್ ಆಗುತ್ತಿದ್ದಂತೆ ಆಕ್ರೋಶಗೊಂಡ ಶಿವಸೇನೆ ಕಾರ್ಯಕರ್ತರು ಈ ಕಾರ್ಯಕ್ರಮ ನಡೆದ ಸ್ಟುಡಿಯೋ ಇರುವ ಹೊಟೇಲ್‌ನಲ್ಲಿ ದಾಂಧಲೆ ನಡೆಸಿತ್ತು. ಅಷ್ಟು ಮಾತ್ರವಲ್ಲದೆ ಕುನಾಲ್‌ ಅವರಿಗೆ ಶಿವಸೇನೆ ನಾಯಕರು ಜೀವ ಬೆದರಿಕೆಯನ್ನೂ ಹಾಕಿದ್ದರು. ಕುನಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ಎಫ್‌ಐಆರ್ ರದ್ದು ಕೋರಿ ಕುನಾಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನ್ನ ವಿರುದ್ಧ ಕ್ರಮ ಕೈಗೊಳ್ಳುವುದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ. ಹಾಗೆಯೇ ಭಾರತದ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಲಾದ ಯಾವುದೇ ವೃತ್ತಿ ಮತ್ತು ವ್ಯವಹಾರವನ್ನು ನಡೆಸುವ ಹಕ್ಕು, ಜೀವನ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಕೂಡಾ ಕುನಾಲ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ವಕೀಲ ಮೀನಾಜ್ ಕಾಕಾಲಿಯಾ ಅವರವ ಮೂಲಕ ಕುನಾಲ್ ಅರ್ಜಿ ಸಲ್ಲಿಸಿದ್ದ ಏಪ್ರಿಲ್ 21ರಂದು ನ್ಯಾಯಮೂರ್ತಿ ಸಾರಂಗ್ ಕೊತ್ವಾಲ್ ನೇತೃತ್ವದ ಪೀಠ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಇನ್ನು ಕುನಾಲ್ ಕಾಮ್ರಾ ಕಳೆದ ತಿಂಗಳು ತಮ್ಮ ವಿರುದ್ಧ ದಾಖಲಾದ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಆದರೆ ಈವರೆಗೂ ಯಾವುದೇ ವಿಚಾರಣೆ ಹಾಜರಾಗಿಲ್ಲ. ಈವರೆಗೂ ಕುನಾಲ್ ವಿರುದ್ಧ ಮೂರು ಸಮನ್ಸ್ ಜಾರಿ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...