ಕರ್ನೂಲ್ ಬಸ್ ದುರಂತ: ಬೆಂಕಿ ತೀವ್ರತೆಗೆ ಕಾರಣವಾದವೇ 234 ಸ್ಮಾರ್ಟ್‌ಫೋನ್‌ಗಳು?

Date:

ಕರ್ನೂಲ್ ಬಸ್‌ ದುರಂತ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ವೇಳೆ ಹೊಸ ಮಾಹಿತಿಯನ್ನು ಹೊರಬಿದಿದ್ದು, ಬಸ್‌ನಲ್ಲಿ ಸುಮಾರು 234 ಸ್ಮಾರ್ಟ್‌ಫೋನ್‌ಗಳನ್ನು ಸಾಗಿಸಲಾಗುತ್ತಿತ್ತು. ಅವುಗಳ ಬ್ಯಾಟರಿಗಳು ಸ್ಪೋಟಗೊಂಡಿದ್ದು, ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿವೆ ಎಂದು ವಿಧಿವಿಜ್ಞಾನ ತಜ್ಞರು ಹೇಳಿದ್ದಾರೆ.

ಬಸ್‌ನಲ್ಲಿ ರಿಯಲ್‌ಮಿ ಕಂಪನಿಯ 234 ಹೊಸ ಸ್ಮಾರ್ಟ್‌ಫೋನ್‌ಗಳನ್ನು ಸಾಗಿಸಲಾಗುತ್ತಿತ್ತು. ಇವುಗಳನ್ನು ಹೈದರಾಬಾದ್‌ ಮೂಲದ ಉದ್ಯಮಿ ಮಂಗನಾಥ್ ಅವರು ಬೆಂಗಳೂರಿಗೆ ರವಾನಿಸುತ್ತಿದ್ದರು. ಬಸ್‌ ಅಪಘಾತಕ್ಕೀಡಾದಾಗ, ಈ ಫೋನ್‌ಗಳ ಬ್ಯಾಟರಿಗಳು ಸ್ಫೋಟಗೊಂಡಿವೆ ಎಂದು ತಜ್ಞರು ಸೂಚಿಸಿದ್ದಾರೆ.

ಫೋನ್‌ಗಳು ಬೆಂಕಿಗೆ ಆಹುತಿಯಾದಾಗ ಬ್ಯಾಟರಿಗಳು ಸ್ಫೋಟಗೊಳ್ಳುವುದನ್ನು ಪ್ರತ್ಯಕ್ಷದರ್ಶಿಗಳು ಗಮನಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಂಧ್ರಪ್ರದೇಶ ಅಗ್ನಿಶಾಮಕ ಸೇವೆಗಳ ಇಲಾಖೆಯ ಮಹಾನಿರ್ದೇಶಕ ಪಿ. ವೆಂಕಟರಾಮನ್ ಹೇಳುವಂತೆ; ಸ್ಮಾರ್ಟ್‌ಫೋನ್‌ಗಳ ಸ್ಫೋಟದ ಜೊತೆಗೆ, ಬಸ್‌ನ ಹವಾನಿಯಂತ್ರಣ (ಎಸಿ) ವ್ಯವಸ್ಥೆಗೆ ಬಳಸಲಾದ ವಿದ್ಯುತ್ ಬ್ಯಾಟರಿಗಳು ಸಹ ಸಿಡಿದಿವೆ. ಪರಿಣಾಮವಾಗಿ, ಶಾಖವು ತುಂಬಾ ತೀವ್ರಗೊಂಡಿದ್ದು, ಬಸ್‌ನ ತಳಕ್ಕೆ ಹಾಸಲಾಗಿದ್ದ ಅಲ್ಯೂಮಿನಿಯಂ ಪದರಗಳು ಕರಗಿಹೋಗಿವೆ ಎಂದು ಹೇಳಿದ್ದಾರೆ.

ಬೈಕ್‌ಗೆ ಬಸ್‌ ಡಿಕ್ಕಿಹೊಡೆದಾಗ, ಬಸ್‌ನ ಕೆಳಗೆ ಬೈಕ್‌ ಸಿಕ್ಕಿಕೊಂಡಿದೆ. ಈ ವೇಳೆ, ಇಂಧನ ಸರಬರಾಜು ಪೈಪ್‌ಗೆ ಹಾನಿಯಾಗಿದ್ದು, ಡೀಸೆಲ್‌ ಚಿಮ್ಮಲು ಆರಂಭಿಸಿದೆ. ಬೆಂಕಿ ಕಿಡಿ ಡೀಸೆಲ್‌ಗೆ ತಗುಲಿದ್ದು, ಬಸ್‌ ಮುಂಭಾಗದಲ್ಲಿ ಮೊದಲಿಗೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ, ಇಡೀ ಬಸ್‌ಗೆ ಬೆಂಕಿ ವ್ಯಾಪಿಸಿದೆ ಎಂದು ಅವರು ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ತೆರಿಗೆ ಹಂಚಿಕೆ | ಕರ್ನಾಟಕಕ್ಕೆ ಮತ್ತೆ ಕಾದಿದೆಯಾ ಭಾರೀ ಅನ್ಯಾಯ? ಕೇಂದ್ರದ ಸಮರ್ಥನೆಗೆ ರಾಜ್ಯ ಬಿಜೆಪಿ ಸಿದ್ದ

ವಾಹನದ ತೂಕವನ್ನು ಕಡಿಮೆ ಮಾಡಲು ಮತ್ತು ವೇಗವನ್ನು ಹೆಚ್ಚಿಸಲು ಸಾಮಾನ್ಯವಾಗಿ ಬಳಸಲಾಗುವ ಕಬ್ಬಿಣದ ಬದಲಿಗೆ ಹಗುರವಾದ ಅಲ್ಯೂಮಿನಿಯಂ ವಸ್ತುಗಳನ್ನು ಬಳಸಲಾಗಿದೆ. ಇದು, ತುರ್ತು ಸಮಯದಲ್ಲಿ ಹಾನಿ ತೀವ್ರತೆಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದ್ದಾರೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ ಶುಕ್ರವಾರ ಮುಂಜಾನೆ ಕರ್ನೂಲ್ ಬಳಿ, ಬೈಕ್‌ಗೆ ಡಿಕ್ಕಿಹೊಡೆದಿತ್ತು. ಬೈಕ್ ಬಸ್‌ನ ಅಡಿಭಾಗಕ್ಕೆ ಸಿಕ್ಕಿಕೊಂಡಿದ್ದರಿಂದ ಬೆಂಕಿ ಹೊತ್ತಿಕೊಂಡು ಇಡೀ ಬಸ್‌ ಸುಟ್ಟುಹೋಗಿದೆ. ದುರಂತದಲ್ಲಿ 19 ಪ್ರಯಾಣಿಕರು ಜೀವ ಕಳೆದುಕೊಂಡು, ಸಜೀವದಹನವಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...