ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿರುವ ಅಡ್ವಾಣಿ: ವಿಶ್ವ ಹಿಂದೂ ಪರಿಷತ್

Date:

ಬಿಜೆಪಿ ಹಿರಿಯ ಮುಖಂಡ ಲಾಲ್‍ಕೃಷ್ಣ ಅಡ್ವಾಣಿ ಅವರು ಈ ತಿಂಗಳ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಹೇಳಿದ್ದಾರೆ.

ಆಎಎಸ್‌ಎಸ್‌ ಮುಖಂಡ ಕೃಷ್ಣ ಗೋಪಾಲ ಮತ್ತು ರಾಮ ಲಾಲ್ ಅವರ ಜತೆ ಅಡ್ವಾಣಿ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದ ಬಳಿಕ ಅಲೋಕ್ ಕುಮಾರ್ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆಗೆ ಆಗಮಿಸಲಿರುವ ಅಡ್ವಾಣಿಯವರಿಗೆ ಅಗತ್ಯವಾದ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುವುದು ಮತ್ತು ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜನವರಿ 22ರಂದು ಭವ್ಯ ಮಂದಿರದಲ್ಲಿ ರಾಮನ ವಿಗ್ರಹದ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಲ್ಲ ಸಂಪ್ರದಾಯಗಳ ಸಂತರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಈ ಮಧ್ಯೆ ಕಾಂಗ್ರೆಸ್ ಪಕ್ಷ ಆಹ್ವಾನವನ್ನು ತಿರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

ದೇವಸ್ಥಾನದ ಅಧಿಕಾರಿಗಳ ಪ್ರಕಾರ, ಏಳು ದಿನಗಳ ಕಾರ್ಯಕ್ರಮ ಜನವರಿ 16ರಿಂದ ಆರಂಭವಾಗಲಿದೆ. ಸಮಾಜದ ಎಲ್ಲ ವರ್ಗಗಳ ಮುಖಂಡರು ಭಾಗವಹಿಸುವ ಜನವರಿ 22ರ ಕಾರ್ಯಕ್ರಮಕ್ಕೆ ಸಮರೋಪಾದಿ ಸಿದ್ಧತೆಗಳು ನಡೆಯುತ್ತಿವೆ.

ವಾರಾಣಾಸಿಯ ಅರ್ಚಕ ಲಕ್ಷ್ಮೀಕಾಂತ ದೀಕ್ಷಿತ್ ಅವರು ಜನವರಿ 22ರಂದು ರಾಮ ಲಲ್ಲಾ ಪ್ರಾಣಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸುವರು. ಜನವರಿ 14ರಿಂದ ಜನವರಿ 22ರವರೆಗೆ ಅಯೋಧ್ಯೆಯಲ್ಲಿ ಅಮೃತ ಮಹೋತ್ಸವ ಆಯೋಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...