ಲಡಾಖ್ | ರಾಜ್ಯ ಸ್ಥಾನಮಾನಕ್ಕಾಗಿ ಮಾರ್ಚ್ 16ರಂದು ರ‍್ಯಾಲಿ

Date:

ಲಡಾಖ್‌ನಲ್ಲಿ ರಾಜ್ಯ ಸ್ಥಾನಮಾನಕ್ಕಾಗಿ ಹೋರಾಟ ಮುಂದುವರೆದಿದ್ದು, ಲೇಹ್ ಮತ್ತು ಕಾರ್ಗಿಲ್ ಜಿಲ್ಲೆಗಳಲ್ಲಿ ಮಾರ್ಚ್ 16ರಂದು ರ‍್ಯಾಲಿ ನಡೆಯಲಿದೆ. ಮಾರ್ಚ್ 12ರಂದು ಈ ಹೋರಾಟವನ್ನು ನಿಗದಿಪಡಿಸಲಾಗಿತ್ತು. ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಮತ್ತು ಪರಿಸರವಾದಿ ಸೋನಮ್ ವಾಂಗ್‌ಚುಕ್ ಬಂಧನವನ್ನು ವಿರೋಧಿಸಿ, ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಈ ಮೆರವಣಿಗೆ ನಡೆಸಲಿದೆ.

ಈ ಬಗ್ಗೆ ಈದಿನ ಡಾಟ್‌ ಕಾಮ್‌ಗೆ ಪ್ರತಿಕ್ರಿಯಿಸಿರುವ ಲಡಾಖ್ ಹೋರಾಟಗಾರ, ಕೆಡಿಎ ಸದಸ್ಯ ಸಜ್ಜಾದ್ ಕಾರ್ಗಿಲಿ, “ಮಾರ್ಚ್ 16ರಂದು ರ‍್ಯಾಲಿ ನಡೆಯಲಿದೆ. ಈ ಸಂಬಂಧ ನಾಳೆ (ಮಾರ್ಚ್ 12) ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಾಗುತ್ತದೆ. ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು, ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಸೋನಮ್ ವಾಂಗ್‌ಚುಕ್ ಜೈಲು ಸೇರಿ 100 ದಿನ: ಲಡಾಖ್ ಜನರಿಗಾಗಿ ಧ್ವನಿಯೆತ್ತಿ ಮೋದಿ ಶತ್ರುವಾದರೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂಗೇ ನಮ್‌ಗ್ಯಾಲ್ ಚೌಕ್‌ನಿಂದ ಲೇಹ್‌ನ ಪೋಲೋ ಮೈದಾನಕ್ಕೆ ಮೆರವಣಿಗೆ ನಡೆಸಲಿದ್ದಾರೆ. ಅಲ್ಲಿ ನಾಯಕರು ಬಹಿರಂಗ ಸಭೆ ನಡೆಸಿ ಜನರನ್ನು ಉದ್ದೇಶಿ ಮಾತನಾಡಲಿದ್ದಾರೆ.

2025ರ ಸೆಪ್ಟೆಂಬರ್ 24ರಂದು ಲೇಹ್‌ನಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 80 ಮಂದಿ ಗಾಯಗೊಂಡಿದ್ದಾರೆ. ಇದಾದ ಬಳಿಕ ಈ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಲಡಾಖ್‌ನ ಪ್ರಸಿದ್ಧ ಶಿಕ್ಷಣ ಸುಧಾರಕ, ಇಂಜಿನಿಯರ್, ಪರಿಸರವಾದಿ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಸೋನಮ್ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್ 26ರಂದು ಬಂಧಿಸಲಾಗಿದೆ. ಇಂದಿಗೂ ಸೋನಮ್ ಅವರು ರಾಜಸ್ಥಾನದ ಜೋಧಪುರ ಜೈಲಿನಲ್ಲೇ ಇದ್ದಾರೆ. ಅವರ ಪತ್ನಿ ಗೀತಾಂಜಲಿ ಅಂಗಮೋ ಕಾನೂನು ಹೋರಾಟ ಮುಂದುವರೆಸಿದ್ದಾರೆ. ಈ ಹಿಂಸಾಚಾರ ನಡೆದ ಬಳಿಕ ಮೊದಲ ಬಾರಿಗೆ ರ‍್ಯಾಲಿ ನಡೆಸಲಾಗುತ್ತಿದೆ.

ಇನ್ನು ಸೆಪ್ಟೆಂಬರ್ 24ರಂದು ಲೇಹ್‌ನಲ್ಲಿ ನಡೆದ ಹಿಂಸಾಚಾರದ ತನಿಖೆಗಾಗಿ ಗೃಹ ವ್ಯವಹಾರಗಳ ಸಚಿವಾಲಯವು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಬಿ ಎಸ್ ಚೌಹಾಣ್ ನೇತೃತ್ವದಲ್ಲಿ ನ್ಯಾಯಾಂಗ ತನಿಖಾ ಆಯೋಗವನ್ನು ನೇಮಿಸಿದ್ದು, ತನಿಖೆ ಮುಂದುವರೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...