ಮಿಜೋರಾಂ | ಡಿಸೆಂಬರ್ 8 ರಂದು ಲಾಲ್ದುಹೋಮಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

Date:

ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವವಾಗಿ ಗೆಲುವು ಸಾಧಿಸಿರುವ ಝೆಡ್‌ಪಿಎಂನ ಶಾಸಕಾಂಗ ನಾಯಕರಾಗಿ ಲಾಲ್ದುಹೋಮಾ ಆಯ್ಕೆಯಾಗಲಿದ್ದಾರೆ.

ಡಿಸೆಂಬರ್‌ 8ರಂದು ಲಾಲ್ದುಹೋಮಾ ಅವರು ಮಿಜೋರಾಂ ರಾಜಧಾನಿ ಐಜ್ವಾಲ್‌ನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಶಾಸಕರೊಂದಿಗೆ ಸಭೆಯ ನಂತರ ಇಂದು ಸಂಜೆಯೊಳಗೆ ರಾಜ್ಯಪಾಲ ಹರಿಬಾಬು ಕಂಬಂಪತಿ ಅವರನ್ನು ರಾಜಭವನದಲ್ಲಿ ಲಾಲ್ದುಹೋಮಾ ಭೇಟಿಯಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಜ್ವಾಲ್‌ನಲ್ಲಿರುವ ಲಾಲ್ದುಹೋಮಾ ಅವರ ನಿವಾಸದಲ್ಲಿ ಝೆಡ್‌ಪಿಎಂ ಶಾಸಕರು ಸಭೆ ಸೇರಲಿದ್ದು, ಅಲ್ಲಿ ಪಕ್ಷದ  ಶಾಸಕಾಂಗ ಪಕ್ಷದ ನಾಯಕರನ್ನಾಗಿ ಲಾಲ್ದುಹೋಮಾ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣದಲ್ಲಿ ಮುಂದುವರೆದ ಸಿಎಂ ಆಯ್ಕೆ ಕಗ್ಗಂಟು

ಐಪಿಎಸ್‌ ಅಧಿಕಾರಿಯಾಗಿದ್ದ ಲಾಲ್ದುಹೋಮಾ 1984ರಲ್ಲಿ ರಾಜೀನಾಮೆ ನೀಡಿ ರಾಜಕೀಯಕ್ಕೆ ಸೇರ್ಪಡೆಗೊಂಡಿದ್ದರು. ಕಳೆದ ನಾಲ್ಕು ದಶಕಗಳಲ್ಲಿ ತಮ್ಮ ರಾಜಕೀಯ ಹೋರಾಟದ ನಂತರ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಾರೆ.

ಡಿ.4 ರಂದು ನಡೆದ ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಝೆಡ್‌ಪಿಎಂ ಒಟ್ಟು 40 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಏರುವ ಪಕ್ಷವಾಗಿ ಹೊರಹೊಮ್ಮಿತು. ಹಿಂದಿನ ಜೋರಮ್ತಂಗಾ ನೇತೃತ್ವದ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಸರ್ಕಾರ ಕೇವಲ 10 ಸ್ಥಾನಗಳನ್ನಷ್ಟೆ ಪಡೆಯಲು ಸಾಧ್ಯವಾಯಿತು.

ಬಿಜೆಪಿ ಎರಡು ಸ್ಥಾನ ಗಳಿಸಿದರೆ, 1986 ರಿಂದ ಮಿಜೋರಾಂನಲ್ಲಿ ಐದು ಬಾರಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಚುನಾವಣೆಯಲ್ಲಿ ಸೋತಿದ್ದ ಜೋರಮ್ತಂಗಾ ಸೋಮವಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...