ಅಮೆರಿಕ | ಅಕ್ಟೋಬರ್ 14 ರಂದು ಮೇರಿಲ್ಯಾಂಡ್‌ನಲ್ಲಿ ಡಾ. ಬಿ ಆರ್ ಅಂಬೇಡ್ಕರ್‌ರ ಬೃಹತ್ ಪುತ್ಥಳಿ ಅನಾವರಣ

Date:

ಉತ್ತರ ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ಅಕ್ಟೋಬರ್‌ 14 ರಂದು ಭಾರತದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಅತಿ ದೊಡ್ಡ ಪ್ರತಿಮೆಯೊಂದು ಅನಾವರಣಗೊಳ್ಳಲಿದೆ.

ಈ ಪ್ರತಿಮೆಗೆ ‘ಸಮಾನತೆಯ ಪ್ರತಿಮೆ’ ಎಂದು ಹೆಸರಿಡಲಾಗಿದೆ. ಅಮೆರಿಕದ ರಾಜಧಾನಿ ವಾಷಿಂಗ್ಟನ್‌ನ ದಕ್ಷಿಣ ಭಾಗದಲ್ಲಿನ 35 ಕಿ. ಮೀ. ದೂರದಲ್ಲಿ ಇರುವ ಮೇರಿಲ್ಯಾಂಡ್‌ನ ಅಕೋಕೀಕ್ ನಗರದಲ್ಲಿ 13 ಎಕರೆ ವಿಸ್ತಾರದ ಪ್ರದೇಶದಲ್ಲಿ ಅಂಬೇಡ್ಕರ್ ಅವರ 19 ಅಡಿ ಎತ್ತರದ ಪುತ್ಥಳಿ ಅನಾವರಣಗೊಳ್ಳಲಿದೆ.

ಗುಜರಾತ್‌ನಲ್ಲಿ ಸರ್ದಾರ್ ಪಟೇಲ್ ಅವರ ಏಕತೆಯ ಪ್ರತಿಮೆಯನ್ನು ನಿರ್ಮಿಸಿದ್ದ ರಾಮ್ ಸುತಾರ್ ಅವರೇ ಇದೀಗ ಬಾಬಾ ಸಾಹೇಬ್ ಅವರ ಪ್ರತಿಮೆಯನ್ನೂ ನಿರ್ಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಹೊರಗೆ ನಿರ್ಮಿಸಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಅತಿ ದೊಡ್ಡ ಪ್ರತಿಮೆ ಇದಾಗಿದೆ ಎಂದು ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ (ಎಐಸಿ) ಹೇಳಿದ್ದು, ಬಾಬಾ ಸಾಹೇಬ್ ಅವರ ಸ್ಮರಣಾರ್ಥ ಈ ಪ್ರತಿಮೆಯನ್ನು ತಮ್ಮ ಕೇಂದ್ರದಲ್ಲಿ ನಿರ್ಮಿಸುತ್ತಿರುವುದಾಗಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಮುಂಬೈ ನಿವಾಸದ ಮೇಲೆ ಪೊಲೀಸರ ದಾಳಿ

“ಅಮೆರಿಕ ಮತ್ತು ವಿಶ್ವದ ಇತರ ಭಾಗಗಳಿಂದ ಬಾಬಾ ಸಾಹೇಬ್ ಅವರ ಹೆಚ್ಚಿನ ಸಂಖ್ಯೆಯ ಅನುಯಾಯಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ” ಎಐಸಿ ಹೇಳಿದೆ.

ಈ ಸ್ಮಾರಕವು ತಮ್ಮ ಜೀವಮಾನದುದ್ದಕ್ಕೂ ದಲಿತರ ಹಾಗೂ ಅಸ್ಪೃಷ್ಯರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದ ಬಾಬಾ ಸಾಹೇಬರ ಸಂದೇಶಗಳು ಮತ್ತು ಬೋಧನೆಗಳನ್ನು ಹರಡಲು ಮತ್ತು ಸಮಾನತೆ ಮತ್ತು ಮಾನವ ಹಕ್ಕುಗಳ ಸಂಕೇತವನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ ಎಂದು ಎಐಸಿ ತಿಳಿಸಿದೆ.

53 ವರ್ಷಗಳ ಹಿಂದೆ ಅಕ್ಟೋಬರ್ 14, 1956ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ 5 ಲಕ್ಷ ಅನುಯಾಯಿಗಳ ಜೊತೆಗೆ ಹಿಂದೂ ಧರ್ಮದಿಂದ ಬೌದ್ದ ಧರ್ಮಕ್ಕೆ ಮತಾಂತರ ಆಗಿದ್ದರು. ನಾಗಪುರದಲ್ಲಿ ನಡೆದ ಈ ಕಾರ್ಯಕ್ರಮ ಐತಿಹಾಸಿಕ ಸನ್ನಿವೇಶವಾಗಿತ್ತು. ಇದನ್ನು ಇತಿಹಾಸದ ಅತಿ ದೊಡ್ಡ ಸಾಮೂಹಿಕ ಮತಾಂತರ ಕಾರ್ಯಕ್ರಮ ಎಂದೂ ಬಣ್ಣಿಸಲಾಗಿದೆ.

ಈ ಕಾರಣದಿಂದ ಬಾಬಾ ಸಾಹೇಬ್ ಅವರು ಬೌದ್ದ ಧರ್ಮಕ್ಕೆ ಮತಾಂತರ ಹೊಂದಿದ ದಿನದಂದೇ ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ಅವರ ಪ್ರತಿಮೆ ಅನಾವರಣ ಮಾಡಲು ತೀರ್ಮಾನಿಸಲಾಗಿದೆ ಎಂದು ಎಐಸಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...