ಪೊಲೀಸ್ ಕಸ್ಟಡಿಯಲ್ಲೇ ಲಾರೆನ್ಸ್ ಟಿವಿ ಸಂದರ್ಶನ; ಇಬ್ಬರು ಡಿಎಸ್‌ಪಿ ಸೇರಿ ಏಳು ಪೊಲೀಸ್ ಅಧಿಕಾರಿಗಳ ಅಮಾನತು

Date:

ಪೊಲೀಸ್‌ ಕಸ್ಟಡಿಯಲ್ಲೇ ದರೋಡೆಕೋರ, ಕೊಲೆ ಪಾತಕಿ ಲಾರೆನ್ಸ್ ಬಿಷ್ಣೋಯ್ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾನೆ. ಅಲ್ಲದೆ, ಆತನನ್ನು ಸನ್ಮಾನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆ, ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು (ಡಿಎಸ್‌ಪಿ) ಸೇರಿದಂತೆ ಏಳು ಮಂದಿ ಪೊಲೀಸ್ ಅಧಿಕಾರಿಗಳನ್ನು ಪಂಜಾಬ್ ಸರ್ಕಾರ ಅಮಾನತುಗೊಳಿಸಿದೆ.

ಪಂಜಾಬ್ ಗೃಹ ಕಾರ್ಯದರ್ಶಿ ಗುರುಕಿರತ್ ಕಿರ್ಪಾಲ್ ಸಿಂಗ್ ಅವರು ಹೊರಡಿಸಿದ ಆದೇಶದ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಪೊಲೀಸ್‌ ಕಸ್ಟಡಿಯಲ್ಲಿದ್ದಾಗಲೇ ಖಾಸಗಿ ವಾಹಿನಿಗೆ ಸಂದರ್ಶನ ನೀಡಿದ್ದಾನೆ. ಆ ಸಂದರ್ಶನವು ಸುದ್ದಿ ವಾಹಿನಿಯಲ್ಲಿ ಪ್ರಸಾರ ಮಾಡಿರುವುದನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಪತ್ತೆಹಚ್ಚಿದ್ದು, ಅಧಿಕಾರಗಳ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಲಾರೆನ್ಸ್‌ ಸಿಐಎ ವಶದಲ್ಲಿದ್ದಾಗ 2022ರ ಸೆಪ್ಟೆಂಬರ್ 3 ಮತ್ತು 4ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂದರ್ಶನ ನೀಡಿದ್ಧಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಾರೆನ್ಸ್‌ ವಿರುದ್ದ ಪ್ರಕರಣಗಳನ್ನು ವಿಶೇಷ ಡಿಜಿಪಿ (ಮಾನವ ಹಕ್ಕುಗಳು) ಪ್ರಬೋಧ್ ಕುಮಾರ್ ನೇತೃತ್ವದ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಮತ್ತು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಡಿಎಸ್‌ಪಿಗಳಾದ ಗುರ್ಶರ್ ಸಿಂಗ್ ಸಂಧು ಮತ್ತು ಸಮ್ಮರ್ ವನೀತ್ ಹಾಗೂ ಸಬ್ ಇನ್‌ಸ್ಪೆಕ್ಟರ್‌ಗಳಾದ ರೀನಾ, ಜಗತ್ಪಾಲ್ ಜಂಗು, ಶಗಂಜಿತ್ ಸಿಂಗ್ ಹಾಗೂ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮುಖ್ತಿಯಾರ್ ಸಿಂಗ್ ಮತ್ತು ಹೆಡ್ ಕಾನ್‌ಸ್ಟೆಬಲ್ ಓಂ ಪ್ರಕಾಶ್ ಅವರು ಅಮಾನತಾದ ಅಧಿಕಾರಿಗಳು.

ಲಾರೆನ್ಸ್‌ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಅಲ್ಲದೆ, ಇತ್ತೀಚೆಗೆ ಮುಂಬೈನಲ್ಲಿ ನಡೆದ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಈತನೇ ಸಂಚುಕೋರ ಎಂದು ಶಂಕಿಸಲಾಗಿದೆ. ಈತನ ವಿರುದ್ಧ ಪಂಜಾಬ್, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಸುಮಾರು 35ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಕಳೆದ ವರ್ಷ ಕೆನಡಾದಲ್ಲಿ ನಡೆದ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯನ್ನು ಲಾರೆನ್ಸ್‌ ಗ್ಯಾಂಗ್‌ ಮಾಡಿದ್ದು, ಇದಕ್ಕೆ ಭಾರತ ಸರ್ಕಾರ ಕುಮ್ಮಕ್ಕು ನೀಡಿದೆ. ಲಾರೆನ್ಸ್‌ ಭಾರತದ ಸರ್ಕಾರ ಏಜೆಂಟ್‌ ಆಗಿದ್ದಾನೆ ಎಂದು ಕೆನಡಾ ಸರ್ಕಾರ ಆರೋಪಿಸಿದೆ.

ಕಳೆದ ವರ್ಷ ಮಾರ್ಚ್‌ನಲ್ಲಿ ಲಾರೆನ್ಸ್‌ನನ್ನು ಪಂಜಾಬ್ ಪೊಲೀಸರು ಬಂಧಿಸಿದ್ದರು. ಆ ವೇಳೆ, ಲಾರೆನ್ಸ್‌ನ ಎರಡು ಸಂದರ್ಶನಗಳನ್ನು ಟಿವಿ ಚಾನೆಲ್ ಪ್ರಸಾರ ಮಾಡಿತ್ತು. ಪೊಲೀಸರು ಲಾರೆನ್ಸ್‌ನೊಂದಿಗೆ ಕೈಜೋಡಿಸಿದ್ದಾರೆ ಎಂದು ಮೃತ ಗಾಯಕ ಸಿಧು ಮೂಸೆವಾಲಾ ಅವರ ತಂದೆ ಬಲ್ಕೌರ್ ಸಿಂಗ್ ಸಿಧು ಆರೋಪಿಸಿದ್ದರು. ನಂತರ, ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಲಾಗಿತ್ತು. ತನಿಖೆ ಆರಂಭಿಸಿದ ಎಸ್‌ಐಟಿ ಸಿಧು ಅವರ ಆರೋಪ ನಿಜವೆಂದು ಕಂಡುಹಿಡಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...