ಉತ್ತರ ಪ್ರದೇಶ | ಗುಂಡಿ ಬಿಚ್ಚಿದ ಅಂಗಿ ಧರಿಸಿ ಬಂದಿದ್ದ ವಕೀಲನಿಗೆ ಹೈಕೋರ್ಟ್‌ನಿಂದ 6 ತಿಂಗಳು ಜೈಲು ಶಿಕ್ಷೆ

Date:

ಕೋರ್ಟ್‌ ಕಲಾಪ ನಡೆಯುತ್ತಿರುವಾಗ ಗುಂಡಿ ಬಿಚ್ಚಿದ ಅಂಗಿ ಧರಿಸಿ ಬಂದಿದ್ದ ವಕೀಲರೊಬ್ಬರಿಗೆ ಅಲಹಾಬಾದ್‌ ಹೈಕೋರ್ಟ್ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

2021ರ ನಡೆದಿದ್ದ ಪ್ರಕರಣದಲ್ಲಿ ವಕೀಲ ಅಶೋಕ್‌ ಪಾಂಡೆ ಎಂಬುವವರು ನ್ಯಾಯಾಲಯಕ್ಕೆ ಕೋರ್ಟ್ ನಿಲುವಂಗಿಯಿಲ್ಲದೆ ಗುಂಡಿ ಬಿಚ್ಚಿದ ಅಂಗಿ ಧರಿಸಿ ಹಾಜರಾಗಿದ್ದರು.

ನ್ಯಾಯಮೂರ್ತಿಗಳಾದ ವಿವೇಕ್‌ ಚೌಧರಿ ಹಾಗೂ ಬಿ ಆರ್‌ ಸಿಂಗ್‌ ಒಳಗೊಂಡ ವಿಭಾಗೀಯ ಪೀಠ ‘ಅಶೋಕ್ ಪಾಂಡೆಯ ಹಿಂದಿನ ನಡವಳಿಕೆ ಹಾಗೂ ವಿಚಾರಣೆಯಲ್ಲಿ ಪಾಲ್ಗೊಳ್ಳಲು ಅವರ ನಿರಾಕರಣೆಯ ಕಾರಣಕ್ಕೆ ಅನುಕರಣೀಯ ಶಿಕ್ಷೆ ವಿಧಿಸುವುದು ಅನಿವಾರ್ಯವಾಗಿದೆ”’ ಎಂದು ತಮ್ಮ ಆದೇಶದಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆನ್​​ಲೈನ್​​ ಗೇಮಿಂಗ್-ಬೆಟ್ಟಿಂಗ್‌ಗೆ ಕಡಿವಾಣ ಹಾಕಿ, ಕಾಯ್ದೆ ರೂಪಿಸುವ ಅಗತ್ಯವಿದೆ

ಶಿಕ್ಷೆಯ ಜೊತೆ 2 ಸಾವಿರ ದಂಡ ಕೂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದರೆ ಒಂದು ತಿಂಗಳು ಹೆಚ್ಚು ಅವಧಿಯ ಶಿಕ್ಷೆ ಅನುಭವಿಸಬೇಕೆಂದು ಪೀಠವು ಆದೇಶಿಸಿದೆ.

ಪಾಂಡೆ ಅವರು ನಾಲ್ಕು ತಿಂಗಳೊಳಗೆ ಲಖನೌದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ಅವರಿಗೆ ಶರಣಾಗಬೇಕೆಂದು ಗಡುವನ್ನು ವಿಧಿಸಲಾಗಿದೆ. ಅಲ್ಲದೆ ಅಲಹಾಬಾದ್‌ ಹೈಕೋರ್ಟ್‌ ಕಲಾಪಗಳ ವಕೀಲಿಕೆಯ ಅಭ್ಯಾಸದಿಂದ ನಿಮ್ಮನ್ನು ಏಕೆ ನಿಷೇಧಿಸಬಾರದು ಎಂದು ಪ್ರಶ್ನಿಸಿರುವ ಪೀಠ ಪಾಂಡೆ ಅವರಿಗೆ ಶೋಕಾಸ್ ನೋಟಿಸ್‌ಅನ್ನು ಜಾರಿಗೊಳಿಸಿದೆ. ನೋಟಿಸ್‌ಗೆ ಮೇ 1ರೊಳಗೆ ಉತ್ತರಿಸುವಂತೆ ತಿಳಿಸಲಾಗಿದೆ.

2021, ಆಗಸ್ಟ್‌ 18ರಂದು ಪಾಂಡೆ ಅವರು ನ್ಯಾಯಾಲಯಕ್ಕೆ ಗುಂಡಿ ಬಿಚ್ಚಿದ ಅಂಗಿ ಧರಿಸಿ ಆಗಮಿಸಿದ್ದರು. ಈ ಅನುಚಿತ ವರ್ತನೆಯನ್ನು ಆಕ್ಷೇಪಿಸಿದ ನ್ಯಾಯಾಧೀಶರನ್ನು ಗೂಂಡಾಗಳನ್ನು ಕರೆದ ನಂತರ ಪಾಂಡೆ ಅವರನ್ನು ಕೋರ್ಟ್‌ನಿಂದ ಹೊರಕಳಿಸಲಾಗಿತ್ತು. ಈ ಘಟನೆ ನಡೆದ ನಂತರ ಪಾಂಡೆ ವಿರುದ್ಧ ಸ್ವಯಂಪ್ರೇರಿತ ವಿಚಾರಣೆ ಕೈಗೊಳ್ಳಲಾಗಿತ್ತು.

ಈ ನ್ಯಾಯಾಂಗ ನಿಂದನೆ ಪ್ರಕರಣಗಳಿಗೆ ಉತ್ತರಿಸಲು ಹಲವು ಅವಕಾಶಗಳನ್ನು ನೀಡಲಾದರೂ ಅವರು ಪ್ರತಿಕ್ರಿಯೆ ನೀಡಿರಲಿಲ್ಲ. ಪಾಂಡೆ ಅವರ ಈ ರೀತಿಯ ವರ್ತನೆ ಇದೇ ಮೊದಲೇನಲ್ಲ, 2017ರಲ್ಲಿ ಅನುಚಿತವಾಗಿ ವರ್ತಿಸಿದ ಕಾರಣಕ್ಕಾಗಿ 2 ವರ್ಷ ಹೈಕೋರ್ಟ್ ಕಲಾಪಗಳಿಗೆ ಹಾಜರಾಗದಂತೆ ನಿಷೇಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...