ರಾಹುಲ್ ಗಾಂಧಿ ಸಂಸದ ಸ್ಥಾನ ಪ್ರಶ್ನಿಸಿದ ವಕೀಲನಿಗೆ ‘ಸುಪ್ರೀಂ’ನಿಂದ 1 ಲಕ್ಷ ರೂ. ದಂಡ

Date:

ಪ್ರಧಾನಿ ನರೇಂದ್ರ ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡಿದ ನಂತರ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ಊರ್ಜಿತಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಲಖನೌ ಮೂಲದ ವಕೀಲ ಅಶೋಕ್ ಪಾಂಡೆಗೆ ಸುಪ್ರೀಂ ಕೋರ್ಟ್‌ ಶುಕ್ರವಾರ (ಜನವರಿ 19) ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಒಂದು ಲಕ್ಷ ರೂ. ದಂಡ ವಿಧಿಸಿದೆ.

ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರು, ಅರ್ಜಿಯನ್ನು ವಜಾಗೊಳಿಸಿ, ಈ ಅರ್ಜಿದಾರರಿಗೆ ನಿಷ್ಪ್ರಯೋಜಕ ಪಿಐಎಲ್ ಸಲ್ಲಿಸುವುದು ಹವ್ಯಾಸವಾಗಿದೆ. ಅದಕ್ಕೆ ಇದೊಂದು ಸೇರ್ಪಡೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಪಿಐಎಲ್ ಅನ್ನು ಸಲ್ಲಿಸಿದಾಗ ಹಲವು ಬಾರಿ ಕರೆದಿದ್ದರು ಕೂಡಾ ಅರ್ಜಿದಾರರು ಗೈರುಹಾಜರಾಗಿದ್ದರು. ಅರ್ಜಿದಾರರು ನಿಷ್ಪ್ರಯೋಜಕ ಪಿಐಎಲ್‌ಗಳನ್ನು ಸಲ್ಲಿಸುವ ಅಭ್ಯಾಸ ಹೊಂದಿದ್ದಾರೆ. ಇದರಿಂದಾಗಿ ನ್ಯಾಯಾಲಯದ ಅಮೂಲ್ಯ ಸಮಯ ಮತ್ತು ನೋಂದಣಿ ಕೂಡ ವ್ಯರ್ಥವಾಗುತ್ತದೆ. ನಾವು ಈ ಅರ್ಜಿಯನ್ನು ವಜಾಗೊಳಿಸಿ, ಒಂದು ಲಕ್ಷ ರೂಪಾಯಿ ದಂಡ ವಿಧಿಸುವುದಾಗಿ” ಸುಪ್ರೀಂ ಪೀಠ ಆದೇಶ ನೀಡಿದೆ.

ಲೋಕಸಭಾ ಸದಸ್ಯರನ್ನು ಖುಲಾಸೆಗೊಳಿಸುವವರೆಗೆ ಸಂಸತ್ ಸ್ಥಾನದಿಂದ ಅನರ್ಹನಾಗಿರುತ್ತಾರೆ ಎಂದು ಕಾನೂನು ಹೇಳುತ್ತದೆ. ಅಲ್ಲದೇ ತಕ್ಷಣವೇ ವಯನಾಡಿನಲ್ಲಿ ಉಪಚುನಾವಣೆ ನಡೆಸುವಂತೆಯೂ ಕಾನೂನು ಹೇಳುತ್ತದೆ ಎಂದು ಅಶೋಕ್ ಪಾಂಡೆ ಪಿಐಎಲ್‌ನಲ್ಲಿ ವಾದಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...