14% ವೇತನ ಹೆಚ್ಚಳ ತಿರಸ್ಕರಿಸಿದ LIC ನೌಕರರ ಸಂಘ; ಕನಿಷ್ಠ 25%ಗೆ ಬೇಡಿಕೆ

Date:

ಸಾರ್ವಜನಿಕ ವಲಯದ ವಿಮಾ ಕಂಪನಿ ‘ಎಲ್ಐಸಿ’ಯ ನೌಕರರ ಒಕ್ಕೂಟವು 14% ವೇತನ ಹೆಚ್ಚಳದ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದೆ. ಐದು ವರ್ಷಗಳ ಒಪ್ಪಂದದ ಅಡಿಯಲ್ಲಿ 2017ರಿಂದ ವೇತನ ಪರಿಷ್ಕರಣೆ ಬಾಕಿ ಇದ್ದು, ಕನಿಷ್ಠ 25% ಹೆಚ್ಚಳ ಮಾಡಬೇಕೆಂದು ನೌಕರರು ಒತ್ತಾಯಿಸುತ್ತಿದ್ದರು.

ಅಖಿಲ ಭಾರತ ರಾಷ್ಟ್ರೀಯ ಜೀವ ವಿಮಾ ನೌಕರರ ಫೆಡರೇಶನ್ (AINLIEF) ಮತ್ತು ಎಲ್‌ಐಸಿಯ ಇತರ ಒಕ್ಕೂಟಗಳೊಂದಿಗೆ ಶುಕ್ರವಾರ ಮುಂಬೈನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ, ಸರ್ಕಾರವು 14% ವೇತನ ಹೆಚ್ಚಿಸುವ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಅದನ್ನು ಒಕ್ಕೂಟವು ತಿರಸ್ಕರಿಸಿದೆ. “ಇದು ಕೆಲಸಗಾರರ ಬದ್ಧತೆಗೆ ಸರ್ಕಾರದ ಅರ್ಪಣಾ ಭಾವವನ್ನು ಪ್ರತಿಬಿಂಬಿಸುವುದಿಲ್ಲ” ಎಂದು ಒಕ್ಕೂಟ ಹೇಳಿದೆ.

“ಹಲವಾರು ನಿಯತಾಂಕಗಳಲ್ಲಿ ಸಾರ್ವಜನಿಕ ವಲಯದ ವಿಮಾದಾರರ ಕಾರ್ಯಕ್ಷಮತೆಯನ್ನು ಪರಿಗಣಿಸಿ ಆಡಳಿತವು ಮುಂದಿಟ್ಟಿರುವ ಪ್ರಸ್ತಾಪವು ಉದ್ಯೋಗಿಗಳಿಗೆ ನಿರಾಶೆ ಮೂಡಿಸಿದೆ” ಎಂದು AINLIEFನ ಪ್ರಧಾನ ಕಾರ್ಯದರ್ಶಿ ರಾಜೇಶ್ ನಿಂಬಾಳ್ಕರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಲ್‌ಐಸಿ ಉದ್ಯೋಗಿಗಳಿಗೆ 2017ರಲ್ಲಿ ಕೊನೆಯ ಬಾರಿಗೆ ವೇತನ ಹೆಚ್ಚಳ ಮಾಡಲಾಗಿತ್ತು. ಆಗ, ಕಂಪನಿಯು ಸುಮಾರು 20-25%ರಷ್ಟು ಹೆಚ್ಚಳ ನೀಡಿತ್ತು. ಈ ಬಾರಿಯೂ ನಾವು ಸುಮಾರು 22% ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದೇವೆ” ಎಂದು ನಿಂಬಾಳ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ವರ್ಷದಿಂದ ವರ್ಷಕ್ಕೆ 49% ನಿವ್ವಳ ಲಾಭವನ್ನು ದಾಖಲಿಸಿದ್ದಾರೆ. 2023-24ಯಲ್ಲಿ 9,444.42 ಕೋಟಿ ರೂ. ಲಾಭವಾಗಿದೆ. ಇದು ಹಿಂದಿನ ವರ್ಷ 6,334.29 ಕೋಟಿ ರೂ.ಗಳಿತ್ತು. ಅಲ್ಲದೆ, ಎಲ್‌ಐಸಿಯ ಒಟ್ಟು ಆದಾಯವು ಕಳೆದ ಡಿಸೆಂಬರ್ ತ್ರೈಮಾಸಿಕದಲ್ಲಿ 2,12,447 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಬಿಸಿನೆಸ್‌ ಸ್ಟಾಂಡರ್ಡ್‌ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...