‘ಲಿಪ್‌ಸ್ಟಿಕ್‌ ಹಾಕಿದ ಮಹಿಳೆಯರು ಮುಂದೆ ಬರುತ್ತಾರೆ’; ಮಹಿಳಾ ಮೀಸಲಾತಿ ಬಗ್ಗೆ ಆರ್‌ಜೆಡಿ ನಾಯಕ ಸೆಕ್ಸಿಸ್ಟ್ ಹೇಳಿಕೆ

Date:

ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದಿಂದ ‘ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’ ಹೊಂದಿರುವ ಮಹಿಳೆಯರು ಮುಂದೆ ಬರುತ್ತಾರೆ ಎಂದು ಮಹಿಳೆಯರ ಬಗ್ಗೆ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಹಿರಿಯ ನಾಯಕ ಅಬ್ದುಲ್ ಬರಿ ಸಿದ್ದಿಕಿ ಲಿಂಗ ಅಸೂಕ್ಷ್ಮತೆಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಸಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಿಡಿಕಾರಿದ್ದಾರೆ.

ಬಿಹಾರದ ಮುಜಾಫರ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದಿಕಿ, “’ಲಿಪ್‌ಸ್ಟಿಕ್‌ ಮತ್ತು ಬಾಬ್-ಕಟ್ ಹೇರ್ ಸ್ಟೈಲ್’ ಹೊಂದಿರುವ ಮಹಿಳೆಯರು ಮುಂದೆ ಬರುತ್ತಾರೆ ಎಂದು ಹೇಳಿದ್ದಾರೆ. ಕೂಡಲೇ ಎಚ್ಚತ್ತ ಸಿದ್ದಿಕಿ, ತಮ್ಮ ಪಕ್ಷವು ‘ಮೊದಲಿನಿಂದಲೂ’ ಮಸೂದೆಯನ್ನು ಬೆಂಬಲಿಸುತ್ತಿದೆ ಎಂದು ಹೇಳುವ ಮೂಲಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಲು ಯತ್ನಿಸಿದ್ದಾರೆ. ವಾಸ್ತವವಾಗಿ, ಪ್ರಸ್ತುತ ಇರುವ ಮಸೂದೆಯನ್ನು ಆರ್‌ಜೆಡಿ ವಿಮರ್ಷಿಸುತ್ತಿದ್ದು, ಮಿಹಿಳಾ ಮೀಸಲಾತಿಯಲ್ಲಿ ಒಬಿಸಿ ಕೋಟಾ ಸೇರಿಸಬೇಕೆಂದು ಒತ್ತಾಯಿಸುತ್ತಿದೆ.

“ತಮ್ಮ ಕಾರ್ಯಕ್ರಮದಲ್ಲಿ ಹಲವಾರು ಮಂದಿ ಗ್ರಾಮೀಣ ಭಾಗದ ಮಹಿಳೆಯರಿದ್ದರು. ಅವರಿಗೆ ಹೊಸ ಕಾನೂನಿನ ಪ್ರಯೋಜನಗಳನ್ನು ಅರ್ಥಮಾಡಿಸಲು ‘ವಿಶಿಷ್ಟ ಗ್ರಾಮ ಭಾಷೆ’ಯಲ್ಲಿ ಮಾತನಾಡಲು ಪ್ರಯತ್ನಿಸುತ್ತಿದ್ದೆ. ಆ ಕಾರಣದಿಂದಾಗಿ ಅಂತಹ ಹೇಳಿಕೆ ನೀಡಿದೆ” ಎಂದು ಸಿದ್ದಿಕಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹೇಳಿಕೆಯನ್ನು ಖಂಡಿಸಿರುವ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಕೌಶಲ್ ಕಿಶೋರ್, “ಇದು ಆರ್‌ಜೆಡಿ ನಾಯಕನ ‘ಸಣ್ಣ ಮನಸ್ಥಿತಿ’ಯ ಸಂಕೇತ” ಎಂದು ಟೀಕಿಸಿದ್ದಾರೆ.

“ಇದು ಅವರ ಸಣ್ಣ ಮನಸ್ಥಿತಿಯ ಸಂಕೇತ. ಚುನಾಯಿತರಾಗಿ ಸಂಸತ್ತಿಗೆ ಬರುವ ಮಹಿಳೆಯರು ಸಂವಿಧಾನ ಮತ್ತು ಕಾನೂನುಗಳನ್ನು ಓದಿ ಸಾರ್ವಜನಿಕ ಹಿತಾಸಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆ. ಕಾರಿಗೆ ಹೇಗೆ ಎರಡು ಚಕ್ರಗಳಿವೆಯೋ ಅದೇ ರೀತಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರು ಮತ್ತು ಪುರುಷರು ಒಟ್ಟಾಗಿ ಸಾರ್ವಜನಿಕ ಹಿತಾಸಕ್ತಿಯ ಕಾನೂನುಗಳನ್ನು ರಚಿಸುವ ಮೂಲಕ ಈ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲು ಸಹಾಯ ಮಾಡುತ್ತಾರೆ, ” ಎಂದು ಕೌಶಲ್ ಹೇಳಿದ್ದಾರೆ.

“ಸಿದ್ದಿಕಿ ಅವರ ಹೇಳಿಕೆಯು ಮಹಿಳೆಯರಿಗೆ ನೋವುಂಟು ಮಾಡುತ್ತವೆ” ಎಂದು ವಿಪಕ್ಷಗಳ ಒಕ್ಕೂಟದ (ಇಂಡಿಯಾ) ಮಿತ್ರ ಪಕ್ಷ ಜೆಎಂಎಂನ ರಾಜ್ಯಸಭಾ ಸಂಸದೆ ಮಹುವಾ ಮಜಿ ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಹಸುಗಳನ್ನು ಇಸ್ಕಾನ್ ಮಾರಿದಷ್ಟು ಬೇರಾರು ಮಾರಿಲ್ಲ; ಬಿಜೆಪಿ ಸಂಸದೆ ಆರೋಪಕ್ಕೆ ಇಸ್ಕಾನ್ ಪ್ರತಿಕ್ರಿಯೆ

“ನಾವು ಇಂದು 21 ನೇ ಶತಮಾನದಲ್ಲಿದ್ದೇವೆ. ಮಹಿಳೆಯರಿಗೆ ನೋವುಂಟು ಮಾಡುವ ಇಂತಹ ಹೇಳಿಕೆಗಳನ್ನು ತಪ್ಪಿಸಬೇಕು. ಹಿಂದುಳಿದ ವರ್ಗಗಳ ಮಹಿಳೆಯರು ಮುಂದೆ ಬರಬೇಕೆಂದು ನಾವು ಬಯಸುತ್ತೇವೆ. ಮೀಸಲಾತಿ ಮಸೂದೆಯಲ್ಲಿ ನಾವು ಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮಹಿಳೆಯರ ಮೀಸಲಾತಿ ಬಗ್ಗೆಯೂ ಮಾತನಾಡುತ್ತಿದ್ದೇವೆ,” ಎಂದು ಅವರು ಹೇಳಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಮಹಿಳಾ ಕೋಟಾ ನೀಡಬೇಕೆಂದು ಆರ್‌ಜೆಡಿ, ಸಮಾಜವಾದಿ ಪಕ್ಷ, ಜೆಡಿಯು ಸೇರಿದಂತೆ ಹಲವಾರು ಪಕ್ಷಗಳು ಒತ್ತಾಯಿಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...