ಅಬಕಾರಿ ನೀತಿ ಹಗರಣ| ಕವಿತಾ ಬಂಧನ ಎಪ್ರಿಲ್ 23ರವರೆಗೆ ವಿಸ್ತರಣೆ

Date:

ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ಬಂಧನವನ್ನು ದೆಹಲಿಯ ನ್ಯಾಯಾಲಯವು ಮಂಗಳವಾರ ಎಪ್ರಿಲ್ 23 ರವರೆಗೆ ವಿಸ್ತರಿಸಿದೆ.

ತನಿಖಾ ಸಂಸ್ಥೆಯು 14 ದಿನಗಳ ಕಸ್ಟಡಿಯನ್ನು ಕೋರಿದ್ದು ಕವಿತಾ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದು, ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ರೂಸ್ ಅವೆನ್ಯೂ ನ್ಯಾಯಾಲಯದ ಮುಂದೆ ವಾದಿಸಿದೆ.

ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 15 ರಂದು ಕವಿತಾ ಅವರನ್ನು ತನಿಖಾ ಸಂಸ್ಥೆ ಬಂಧಿಸಿದ್ದು ನಂತರ ಕವಿತಾ ಅವರು ಸಿಬಿಐ ಕಸ್ಟಡಿಯಲ್ಲಿದ್ದಾರೆ. ಈ ಹಿಂದೆ ಕವಿತಾ ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ನ್ಯಾಯಾಲಯವು ಎಪ್ರಿಲ್ 9 ಕ್ಕೆ ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕವಿತಾ ಅವರು ಈ ಹಿಂದೆ ತನ್ನ 16 ವರ್ಷದ ಪುತ್ರನಿಗೆ ಪರೀಕ್ಷೆಯ ಸಮಯದಲ್ಲಿ ಬೆಂಬಲಿಸುವ ಅಗತ್ಯವಿದೆ ಎಂದು ಹೇಳಿ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ. ಕವಿತಾ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಉಲ್ಲೇಖಿಸಲಾದ “ಸೌತ್ ಗ್ರೂಪ್” ನ ಪ್ರಮುಖ ಸದಸ್ಯರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ?  ಅಬಕಾರಿ ನೀತಿ ಹಗರಣ | ಬಿಆರ್‌ಎಸ್‌ ನಾಯಕಿ ಕವಿತಾಗೆ ಮಧ್ಯಂತರ ಜಾಮೀನು ನಿರಾಕರಣೆ

ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಯೋಜನಗಳನ್ನು ಪಡೆಯಲು ಕವಿತಾ ಎಎಪಿಯ ಉನ್ನತ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರೊಂದಿಗೆ ಕಾರ್ಯನಿರ್ವಹಿಸಿದ್ದಾರೆ. ಎಎಪಿ ನಾಯಕರಿಗೆ 100 ಕೋಟಿ ರೂಪಾಯಿ ನೀಡುವಲ್ಲಿ ಅವರು ಪಾತ್ರ ವಹಿಸಿದ್ದಾರೆ ಎಂದು ದೂರಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ನಾಯಕ ಮನೀಶ್ ಸಿಸೋಡಿಯಾ, ಸಂಜಯ್‌ ಸಿಂಗ್‌ರನ್ನು ಕೂಡಾ ಬಂಧಿಸಿದೆ. ಇತ್ತೀಚೆಗೆ ಸಂಜಯ್ ಸಿಂಗ್‌ ಜಾಮೀನು ಮೇಲೆ ಹೊರಬಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...