ಲಿವ್-ಇನ್ ಸಂಬಂಧ | ಮುಸ್ಲಿಂ ಯುವಕನ ಜೊತೆ ಜೀವಿಸುವ ಬಗ್ಗೆ ನಿರ್ಧರಿಸಲು ಹಿಂದು ಯುವತಿಗೆ ಅವಕಾಶ ಕೊಟ್ಟ ಬಾಂಬೆ ಹೈಕೋರ್ಟ್‌

Date:

ಲಿವ್-ಇನ್ ಸಂಬಂಧದಲ್ಲಿ ಜೊತೆಯಾಗಿ ಬದುಕುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿಯನ್ನು ಬೇರ್ಪಡಿಸಲು ಯುವತಿಯ ಪೋಷಕರು ಯತ್ನಿಸಿದ್ದರು. ಪ್ರಕರಣವು ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್‌, “ಇದು ಆಕೆಯ ಜೀವನ. ಆಕೆಯ ಭವಿಷ್ಯದ ಬಗ್ಗೆ ಆಕೆಯೇ ನಿರ್ಧರಿಸಬೇಕು” ಎಂದು ಹೇಳಿದೆ. ತನ್ನ ಬದುಕಿನ ಆಯ್ಕೆಗೆ ಯುವತಿಗೆ ಅನುಮತಿ ನೀಡಿದೆ.

ಯವಕ-ಯುವತಿಯ ಅಂತರ್‌ ಧರ್ಮೀಯ ಸಂಬಂಧಕ್ಕೆ ಯುವತಿಯ ಷೋಷಕರು ವಿರೋಧ ವ್ಯಕ್ತಪಡಿಸಿದ್ದರು. ಯುವಕ-ಯುವತಿಯ ಸಂಬಂಧವನ್ನು ಮುರಿದು, ಅವರಿಬ್ಬರನ್ನು ಬೇರ್ಪಡಿಸಲು ಮುಂದಾಗಿದ್ದರು. ಯುವತಿಯನ್ನು ಬಲವಂತವಾಗಿ ಚೆಂಬೂರ್ ಸರಕಾರಿ ಮಹಿಳಾ ವಸತಿ ನಿಲಯ ಕರೆದೊಯ್ಯಲಾಗಿತ್ತು. ಆಕೆಯನ್ನು ವಸತಿ ನಿಲಯದಿಂದ ಬಿಡುಗಡೆ ಮಾಡಲು ನಿರ್ದೇಶಿಸಬೇಕೆಂದು ಕೋರಿ ಯುವಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರಿದ್ದ ಪೀಠ, ತನ್ನ ಭವಿಷ್ಯದ ಬದುಕಿನ ಆಯ್ಕೆ ಯುವತಿಗೇ ಬಿಟ್ಟ ವಿಚಾರ ಎಂದು ಸಾರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದು ಆಕೆಯ ಜೀವನ. ಆಕೆ ಬಯಸಿದ್ದನ್ನು ಮಾಡಲಿ. ಆಕೆಗೆ ನಾವು ಶುಭ ಹಾರೈಸಬಹುದಷ್ಟೇ. ಹೀಗೇ ಮಾಡಬೇಕೆಂದು ಒತ್ತಾಯ ಮಾಡಲು ಸಾಧ್ಯವಿಲ್ಲ. ನಾವು ಆಕೆಯನ್ನು ಪೋಷಕರ ಜೊತೆ ಹೋಗಲು ಸಿದ್ಧವೇ ಎಂದು ಕೇಳಿದ್ದೇವೆ. ಆಕೆ ತಯಾರಿಲ್ಲ. ಯುವತಿಗೆ ತನ್ನ ಯೋಗಕ್ಷೇಮದ ಬಗ್ಗೆ ತಿಳಿವಳಿಕೆ ಇರುವುದೇ ಆದರೆ ಯಾವುದೇ ಸಮಸ್ಯೆ ಇಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...