‘ಲಿವ್-ಇನ್’ ಸಂಬಂಧವನ್ನೂ ನೋಂದಾಯಿಸಬೇಕು: ಕೋರ್ಟ್‌ ಆದೇಶ

Date:

‘ಲಿವ್-ಇನ್’ ಸಂಬಂಧಗಳನ್ನು ಕೂಡ ನೋಂದಾಯಿಸಿಕೊಳ್ಳಬೇಕು. ಅದಕ್ಕಾಗಿ, ಹೊಸ ವೆಬ್ ಪೋರ್ಟಲ್ ಅನ್ನು ಪ್ರಾರಂಭಿಸಬೇಕು ಎಂದು ರಾಜಸ್ಥಾನ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್‌ ನಿರ್ದೇಶನ ನೀಡಿದೆ.

ರಕ್ಷಣೆ ಕೋರಿ ಹಲವಾರು ‘ಲಿವ್-ಇನ್ ಸಂಬಂಧ’ದಲ್ಲಿರುವ ಸಂಗಾತಿಗಳು ಅಲ್ಲಿಸಿದ್ದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್‌ ನ್ಯಾಯಮೂರ್ತಿ ಅನ್ನಪ್ ಕುಮಾರ್ ಧಂಡ್ ಅವರಿದ್ದ ಏಕ ಸದಸ್ಯ ಪೀಠವು ವಿಚಾರಣೆ ನಡೆಸಿದೆ. “ಲಿವ್-ಇನ್‌ ಸಂಬಂಧಕ್ಕೆ ರಕ್ಷಣೆ ಕೊಡುವ ಕಾನೂನು ಜಾರಿಗೆ ಬರುವವರೆಗೆ, ಲಿವ್-ಇನ್ ಸಂಬಂಧಗಳನ್ನು ಸಕ್ಷಮ ಪ್ರಾಧಿಕಾರ/ನ್ಯಾಯಮಂಡಳಿಯಲ್ಲಿ ನೋಂದಾಯಿಸಬೇಕು” ಎಂದು ಹೇಳಿದೆ.

“ಹಲವಾರು ದಂಪತಿಗಳು ‘ಲಿವ್-ಇನ್’ ಸಂಬಂಧದಲ್ಲಿ ವಾಸಿಸುತ್ತಿದ್ದಾರೆ. ಅವರ ಸಂಬಂಧದ ಸ್ಥಿತಿಗೆ ಮಾನ್ಯತೆ ದೊರೆಯದ ಕಾರಣ, ಅವರು ತಮ್ಮ ಕುಟುಂಬಗಳು ಮತ್ತು ಸಮಾಜದಿಂದ ಬೆದರಿಕೆ, ಅಪಾಯಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ, ಅವರು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ರಕ್ಷಣೆ ಕೋರಿ 226ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸುತ್ತಿದ್ದಾರೆ. ಪರಿಣಾಮವಾಗಿ, ನ್ಯಾಯಾಲಯಗಳು ಅಂತಹ ಅರ್ಜಿಗಳು ಹೆಚ್ಛಾಗಿ ತುಂಬುತ್ತಿವೆ” ಎಂದು ಪೀಠ ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಿವ್-ಇನ್ ಸಂಬಂಧದ ಕಲ್ಪನೆಯು ವಿಶಿಷ್ಟ ಮತ್ತು ಆಕರ್ಷಕವಾಗಿ ಕಾಣಿಸಬಹುದು. ಆದರೆ, ವಾಸ್ತವದಲ್ಲಿ ಉದ್ಭವಿಸಬಹುದಾದ ಸಮಸ್ಯೆಗಳು ಮತ್ತು ಸವಾಲುಗಳಿವೆ. ಈ ಸಂಬಂಧದಲ್ಲಿ ಮಹಿಳೆಯ ಸ್ಥಾನಮಾನವು ಹೆಂಡತಿಯ ಸ್ಥಾನಮಾನವಲ್ಲ. ಸಾಮಾಜಿಕ ಅನುಮೋದನೆ ಅಥವಾ ಪವಿತ್ರತೆಯನ್ನು ಹೊಂದಿರುವುದಿಲ್ಲ” ಎಂದು ನ್ಯಾಯಮೂರ್ತಿ ಅನ್ನಪ್ ಕುಮಾರ್ ಹೇಳಿದ್ದಾರೆ.

“ಲಿವ್-ಇನ್-ಸಂಬಂಧದ ಒಪ್ಪಂದವನ್ನು ಸಕ್ಷಮ ಪ್ರಾಧಿಕಾರ/ನ್ಯಾಯಮಂಡಳಿಯಲ್ಲಿ ನೋಂದಾಯಿಸಬೇಕು. ಇದಕ್ಕೆ ಅಗತ್ಯ ವೆಬ್‌ ಪೋರ್ಟಲ್‌ಅನ್ನು ಸರ್ಕಾರ ಸ್ಥಾಪಿಸಬೇಕು. ಸಕ್ಷಮ ಪ್ರಾಧಿಕಾರವು ಲಿವ್‌-ಇನ್ ಸಂಬಂಧದ ದಂಪತಿಗಳು ಮತ್ತು ಅವರಿಂದ ಜನಿಸುವ ಮಕ್ಕಳ ಕುಂದುಕೊರತೆಗಳನ್ನು ಪರಿಹರಿಸುವ ಕಾರ್ಯವನ್ನೂ ಮಾಡಬೇಕು” ಎಂದು ಕೋರ್ಟ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...