ಸೈಬರ್ ವಂಚನೆ ಕೃತ್ಯಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸಾಲ ನೀಡುವ ಒಟ್ಟು 87 ಅಕ್ರಮ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ ಎಂದು ಹೇಳಿಕೊಂಡಿದೆ.
ಲೋಕಸಭೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷ್ ಮಲ್ಹೋತ್ರಾ, “ಸಾಲ ನೀಡಿಕೆಗೆ ಸಂಬಂಧಿಸಿದ ಕಾರ್ಯವಿಧಾನಗಳು ಮತ್ತು ನಿಮಯಗಳನ್ನು ಅನುಸರಿಸಿ ಈ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಸೆಕ್ಷನ್ 69 ಎ ಅಡಿಯಲ್ಲಿ ಸಾರ್ವಜನಿಕ ಪ್ರವೇಶಕ್ಕಾಗಿ ಯಾವುದೇ ಮಾಹಿತಿಯನ್ನು ನಿರ್ಬಂಧಿಸಲು ನಿರ್ದೇಶನಗಳನ್ನು ನೀಡಲು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (ಎಂಇಐಟಿವೈ) ಅಧಿಕಾರ ಹೊಂದಿದೆ. ಸಚಿವಾಲಯವು ನಿಗದಿಪಡಿಸಿದ ಕಾರ್ಯವಿಧಾನವನ್ನು ಅನುಸರಿಸಿ ಅಕ್ರಮ ಸಾಲ ಅರ್ಜಿಗಳಿಗೆ ಕಡಿವಾಣ ಹಾಕಲಾಗುತ್ತಿದೆ” ಎಂದು ವಿವರಿಸಿದ್ದಾರೆ.
“ಸಾಲ ಅಪ್ಲಿಕೇಶನ್‌ಗಳ ಮೂಲಕ ಆನ್‌ಲೈನ್ ಸಾಲ ನೀಡುವ ಚಟುವಟಿಕೆಗಳಲ್ಲಿ ತೊಡಗಿರುವ ಕಂಪನಿಗಳು ಸೇರಿದಂತೆ ಕಂಪನಿಗಳ ವಿರುದ್ಧ ತನಿಖೆ, ಖಾತೆಗಳ ಪುಸ್ತಕಗಳ ಪರಿಶೀಲನೆ ಮತ್ತು ತಪಾಸಣೆಗಳಂತಹ ಕಂಪನಿಗಳ ಕಾಯ್ದೆ-2013ರ ಅಡಿಯಲ್ಲಿ ನಿಯಂತ್ರಕ ಕ್ರಮಗಳನ್ನು ಕಾಲಕಾಲಕ್ಕೆ ತೆಗೆದುಕೊಳ್ಳಲಾಗುತ್ತದೆ. ಕಂಪನಿ ಕಾಯ್ದೆ-2013ರ ಅಡಿಯಲ್ಲಿ ಯಾವುದೇ ಉಲ್ಲಂಘನೆ ಕಂಡುಬಂದಾಗ, ಅದಕ್ಕೆ ಅನುಗುಣವಾಗಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದಿದ್ದಾರೆ.




