ಮತದಾನ ದಿನದಂದು ವಿಪಕ್ಷದವರನ್ನು ಮನೆಯೊಳಗೆ ಕೂಡಿಹಾಕಿ: ಕೇಂದ್ರ ಸಚಿವನ ವಿವಾದಾತ್ಮಕ ಮಾತು

Date:

ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ‘ಲಲ್ಲನ್’ ಅವರು ಮಂಗಳವಾರ ಹೊಸ ವಿವಾದಕ್ಕೆ ಗುರಿಯಾಗಿದ್ದಾರೆ. ಎನ್‌ಡಿಎ ಬೆಂಬಲಿಗರಿಗೆ ಮತದಾನ ದಿನದಂದು ವಿಪಕ್ಷದವರನ್ನು ಬೆದರಿಸುವಂತೆ ಕರೆ ನೀಡುತ್ತಿರುವಂತೆ ಕೇಳಿಬರುವ ವಿಡಿಯೋ ವೈರಲ್ ಆಗಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಲಲ್ಲನ್ ಅವರ ಬಿಹಾರದ ಮುಂಗೇರ ಲೋಕಸಭಾ ಕ್ಷೇತ್ರದಡಿಯಲ್ಲಿರುವ ಮೊಕಾಮಾದಲ್ಲಿ ಈ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಮಾಗಧಿ ಭಾಷೆಯಲ್ಲಿ ಮಾತನಾಡುತ್ತಾ ಲಲ್ಲನ್ ಹೇಳಿರುವುದು: “ಇಲ್ಲಿ ಕೆಲವರು ಇದ್ದಾರೆ, ಅವರನ್ನು ಮತದಾನ ದಿನದಂದು ಹೊರಗೆ ಬಿಡಬೇಡಿ. ಮನೆಯೊಳಗೆ ಕೂಡಿಹಾಕಿ. ಅವರು ನಿಮ್ಮ ಮಾತು ಕೇಳಿದರೆ, ಬೂತ್‌ಗೆ ಕರೆತಂದು ಮತ ಹಾಕಿಸಿ ಮನೆಗೆ ಕಳಿಸಿ.” ಎಂದು ಹೇಳಿದ್ದಾರೆ

ಪಿಟಿಐ ಸಂಸ್ಥೆಯು ಈ ವಿಡಿಯೋದ ಸತ್ಯಾಸತ್ಯತೆಯನ್ನು ಸ್ವತಂತ್ರವಾಗಿ ಪರಿಶೀಲಿಸಿಲ್ಲ ಎಂದಿದೆ. ಆದರೂ ಸಾಮಾಜಿಕ ಮಾಧ್ಯಮಗಳಲ್ಲಿ ಇದು ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊಕಾಮಾ ಕ್ಷೇತ್ರದಲ್ಲಿ ಜೆಡಿ(ಯು) ಅಭ್ಯರ್ಥಿ ಅನಂತ್ ಸಿಂಗ್ ಅವರ ಪರವಾಗಿ ಪ್ರಚಾರ ಮಾಡುತ್ತಿದ್ದ ಲಲ್ಲನ್, ಕೊಲೆ ಪ್ರಕರಣದಲ್ಲಿ ಅನಂತ್ ಸಿಂಗ್ ಅವರನ್ನು ರಕ್ಷಿಸಿದ್ದಕ್ಕೆ ಈಗಾಗಲೇ ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದ್ದರು. ಜನ್ ಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್ ಕೊಲೆ ಪ್ರಕರಣದಲ್ಲಿ ಅನಂತ್ ಸಿಂಗ್ ಮತ್ತು ಅವರ ಇಬ್ಬರು ಸಹಚರರು – ಮಾಣಿಕಂತ್ ಠಾಕೂರ್ ಮತ್ತು ರಂಜೀತ್ ರಾಮ್ – ಭಾನುವಾರ ರಾತ್ರಿ ಬಂಧಿಸಲ್ಪಟ್ಟಿದ್ದಾರೆ. ಯಾದವ್ ಅವರು ಮೊಕಾಮಾದಲ್ಲಿ ಜನ್ ಸುರಾಜ್ ಪಕ್ಷದ ಅಭ್ಯರ್ಥಿ ಪಿಯೂಷ್ ಪ್ರಿಯದರ್ಶಿ ಅವರ ಪರ ಪ್ರಚಾರ ಮಾಡುತ್ತಿದ್ದಾಗ ಕೊಲ್ಲಲ್ಪಟ್ಟಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ

ಸೋಮವಾರ ಮೊಕಾಮಾದಲ್ಲಿ ಅನಂತ್ ಸಿಂಗ್ ಪರ ಪ್ರಚಾರ ನಡೆಸಿದ್ದ ಲಲ್ಲನ್, ಈ ಘಟನೆಯನ್ನು ‘ಪಿತೂರಿ’ ಎಂದು ಕರೆದಿದ್ದರು. “ಅನಂತ್ ಸಿಂಗ್ ಬಂಧನದ ಹಿಂದೆ ಪಿತೂರಿ ಇದೆ. ಪೊಲೀಸ್ ತನಿಖೆಯಲ್ಲಿ ಸತ್ಯ ಬಯಲಾಗುತ್ತದೆ. ಅನಂತ್ ಬಾಬು ಜೈಲಿನಲ್ಲಿರುವುದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಇಂದಿನಿಂದ ಮೊಕಾಮಾದ ಆದೇಶ ನನ್ನ ಕೈಯಲ್ಲಿದೆ” ಎಂದು ಘೋಷಿಸಿದ್ದರು. ಉಪಮುಖ್ಯಮಂತ್ರಿ ಸಮ್ರಾಟ್ ಚೌಧರಿ ಅವರೊಂದಿಗೆ ಲಲ್ಲನ್ ಮೊಕಾಮಾಕ್ಕೆ ಭೇಟಿ ನೀಡಿ ಪ್ರಚಾರ ಮಾಡಿದ್ದರು.

ಲಲ್ಲನ್ ಅವರ ಈ ಹೊಸ ವಿಡಿಯೋಗೆ ವಿರೋಧ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. “ಚುನಾವಣಾ ಆಯೋಗದ ದೇಹದ ಮೇಲೆ ಬುಲ್ಡೋಜರ್ ಓಡಿಸುತ್ತಾ ಲಲ್ಲನ್ ಸಿಂಗ್ ಹೇಳುತ್ತಿದ್ದಾರೆ, ಬಡವರು ಮತದಾನ ದಿನ ಮನೆಯಿಂದ ಹೊರಗೆ ಬರಬಾರದು! ಆಯೋಗ ನಿಷ್ಪಲವಾಗಿದೆ” ಎಂದಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ, “ಬಿಹಾರದಲ್ಲಿ ‘ಗುಂಡಾಗಿರಿ ಮತ್ತು ಜಂಗಲ್ ರಾಜ್’ದ ಹೊಸ ಉದಾಹರಣೆ ಇದು! ಸೋಲು ಕಂಡು ಜೆಡಿ(ಯು)-ಬಿಜೆಪಿ ನಾಯಕರು ಜನರು ಮನೆಯಿಂದ ಹೊರಗೆ ಬರಬಾರದು, ಕೂಡಿಹಾಕಿ ಎಂದು ಹೇಳಿರುವುದು ಆಪತ್ತಿನ ಸೂಚನೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...