ಲಾಕಪ್ ಡೆತ್‌ ಪ್ರಕರಣ | ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಖುಲಾಸೆ

Date:

1990ರ ಲಾಕಪ್ ಡೆತ್ ಪ್ರಕರಣದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್ ಭಟ್ ಅಪರಾಧ ಎಸಗಿದ್ದಾರೆ ಎಂದು ಸಾಬೀತುಪಡಿಸುವಲ್ಲಿ ಪ್ರಾಷಿಕ್ಯೂಷನ್ ವಿಫಲವಾಗಿದೆ. ಹೀಗಾಗಿ, ಗುಜರಾತ್‌ನ ಫೋರ ಬಂದರ್ ನ್ಯಾಯಾಲಯವು ಅವರನ್ನು ನಿರ್ದೋಷಿ ಎಂದು ಘೋಷಿಸಿದ್ದು, ಪ್ರಕರಣದಿಂದ ಖುಲಾಸೆಗೊಳಿಸಿದೆ.

1990ರಲ್ಲಿ ಸಂಜೀವ್ ಭಟ್ ಅವರು ಜಾಮ್‌ನಗರದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದರು. ಆಗ, ಜೋಧ್‌ಪುರ ಪಟ್ಟಣದಲ್ಲಿ ಕೋಮು ಗಲಭೆ ನಡೆದು, ಪೊಲೀಸರು ಸುಮಾರು 150 ಜನರನ್ನು ಬಂಧಿಸಿದ್ದರು. ವಿಚಾರಣೆಗೆ ವೇಳೆ ತಪ್ಪೊಪ್ಪಿಗೆ ಪಡೆಯಲು ಬಂಧಿತರ ಮೇಲೆ ತೀವ್ರ ಹಲ್ಲೆ ನಡೆಸಿದ್ದರು. ಬಳಿಕ, ಎಲ್ಲರನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಪ್ರಭುದಾಸ್ ವೈಷ್ಣವಿ ಎಂಬವರು ಸಾವನ್ನಪ್ಪಿದ್ದರು. ಅದನ್ನು ಲಾಕಪ್ ಡೆತ್ ಎಂದು ಆರೋಪಿಸಲಾಗಿತ್ತು.

ಪೊಲೀಸ್ ಕಸ್ಟಡಿಯಲ್ಲಿದ್ದ ನನ್ನಿಂದ ಟಾಡಾ ಕಾಯ್ದೆ ಹಾಗೂ ಶಸ್ತ್ರಾಸ್ತ್ರಗಳ ಕಾಯ್ದೆಯಡಿ ತಪ್ಪೊಪ್ಪಿಗೆ ಪಡೆಯಲು ನನ್ನ ಮೇಲೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಸಂಜೀವ್ ಭಟ್ ವಿರುದ್ಧ ನರನ್ ಜಾಧವ್ ಎಂಬವರು 1990ರಲ್ಲಿ ದೂರು ನೀಡಿದ್ದರು. ಅವರ ದೂರು ಮತ್ತು ಪ್ರಭುದೇವ್ ವೈಷ್ಣವ್ ಸಾವಿನ ಆಧಾರದ ಮೇಲೆ ಸಂಜೀವ್ ಭಟ್ ಹಾಗೂ ಪೊಲೀಸ್ ಪೇದೆ ವಜುಭಾಯಿ ಚೌ ವಿರುದ್ಧ ಐಪಿಸಿ ಸೆಕ್ಷನ್ 330 ಹಾಗೂ 324ರ ಅಡಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಸಂಬಂಧ 34 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆದಿದೆ. ಆದರೆ, ಸಂಜೀವ್ ಭಟ್ ದೋಷಿ ಎಂದು ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ. ಹೀಗಾಗಿ, ಸೂಕ್ತ ಪುರಾವೆಗಳ ಕೊರತೆಯಿದೆ ಎಂದು ಅಭಿಪ್ರಾಯ ಪಟ್ಟಿರುವ ಫೋರ ಬಂದರಿನ ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಕೇಶ್ ಪಾಂಡ್ಯ ಅವರು ಸಂಜೀವ್ ಭಟ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | ಟೋಲ್‌ ಎಂಬ ಸರ್ಕಾರಿ ದರೋಡೆ; 20 ತಿಂಗಳಲ್ಲಿ 438 ಕೋಟಿ ವಸೂಲಿ

ಲಾಕಪ್‌ ಡೆತ್ ಪ್ರಕರಣದಲ್ಲಿ ಸಂಜೀವ್ ಭಟ್ ನಿರ್ದೋಷಿ ಎಂದು ನ್ಯಾಯಾಲಯ ಘೋಷಿಸಿದ್ದರೂ, ಸಂಜೀವ್ ಭಟ್ ಜೈಲಿನಲ್ಲಿದ್ದಾರೆ. ಅಲ್ಲದೆ, ಅವರನ್ನು 2015ರಲ್ಲಿಯೇ ಹುದ್ದೆಯಿಂದ ವಜಾಗೊಳಿಸಲಾಗಿದೆ.

1996ರಲ್ಲಿ ಪಲನ್ ಪುರ್‌ನಲ್ಲಿ ರಾಜಸ್ಥಾನದ ವಕೀಲರೊಬ್ಬರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ತಾವೇ ಮಾದಕ ದ್ರವ್ಯ ಇಟ್ಟು, ಅದನ್ನು ತಾವೇ ಜಪ್ತಿ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಸಂಜೀವ್ ಭಟ್ ಅವರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅವರು ಈಗ, ಗುಜರಾತ್‌ನ ರಾಜ್ ಕೋಟ್‌ನ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಗಮನಾರ್ಹವಾಗಿ, ಸಂಜೀವ್ ಭಟ್ ಅವರು ಪ್ರಧಾನಿ ಮೋದಿ ಅವರನ್ನು ಕಠುವಾಗಿ ಟೀಕೆ ಮಾಡುವವರು. ಮೋದಿ ಸರ್ಕಾರದ ನೀತಿ-ನಿರ್ಧಾರ, ಯೋಜನೆಗಳನ್ನು ನೇರವಾಗಿ ಟೀಕೆ ಮಾಡಿದ್ದರು. ಆ ಕಾರಣಕ್ಕಾಗಿಯೇ, ಅವರನ್ನು ಪ್ರಕರಣದ ನೆಪವೊಡ್ಡಿ ಹುದ್ದೆಯಿಂದ ವಜಾಗೊಳಿಸಲಾಗಿದೆ. ಅಲ್ಲದೆ, 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ, ಜೈಲಿಗೆ ಕಳಿಸಲಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...