2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

Date:

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ಮುಕ್ತಾಯಗೊಂಡಿದ್ದು, ಶೇ.61 ರಷ್ಟು ಮತದಾನವಾಗಿದೆ.

ಕೇರಳ, ತ್ರಿಪುರ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಹೆಚ್ಚು ಮತದಾನವಾಗಿದೆ. ಮಧ್ಯ ಪ್ರದೇಶದ ಬೇತುಲ್ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಮರಣ ಹೊಂದಿದ ಕಾರಣ ಚುನಾವಣೆಯನ್ನು ಮೇ 7 ರಂದು ಮೂರನೇ ಹಂತದ ಮತದಾನದ ದಿನಕ್ಕೆ ಮುಂದೂಡಲಾಗಿದೆ.

ಅಸ್ಸಾಂ – 70.66 %, ಬಿಹಾರ – 53.03%, ಛತ್ತೀಸ್‌ಗಢ – 72.13%, ಜಮ್ಮು ಮತ್ತು ಕಾಶ್ಮೀರ – 67.22% ಕರ್ನಾಟಕ: 63.90%, ಕೇರಳ: 63.97%, ಮಧ್ಯಪ್ರದೇಶ: 54.83%, ಮಹಾರಾಷ್ಟ್ರ : 53.51%, ಮಣಿಪುರ: 76.06%, ರಾಜಸ್ಥಾನ: 59.19%, ತ್ರಿಪುರ: 76.23%, ಉತ್ತರ ಪ್ರದೇಶ: 52.64%, ಪಶ್ಚಿಮ ಬಂಗಾಳ: 71.84% ಮತದಾನವಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2ನೇ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ್, ಭೂಪೇಶ್ ಬಘೇಲ್, ಶಶಿ ತರೂರ್, ರಾಜೀವ್ ಚಂದ್ರಶೇಖರ್‌, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹಾಗೂ ನಟಿ ಹೇಮಾ ಮಾಲಿನಿ ಅವರ ಭವಿಷ್ಯ ನಿರ್ಧಾರವಾಗಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

88 ಲೋಕಸಭಾ ಕ್ಷೇತ್ರಗಳಲ್ಲಿ ಕೇರಳದ ಎಲ್ಲ 20, ಕರ್ನಾಟಕದ 14 ಸೇರಿದಂತೆ ರಾಜಸ್ಥಾನ, ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಅಸ್ಸಾಂ, ಬಿಹಾರ್‌, ಛತ್ತೀಸ್‌ಘಡ, ಪಶ್ಚಿಮ ಬಂಗಾಳ, ಮಣಿಪುರ, ತ್ರಿಪುರ ಮತ್ತು ಜಮ್ಮು ಕಾಶ್ಮೀರ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ.

ಇಂದಿನ ಹಂತದಲ್ಲಿ ಒಟ್ಟು 1,210 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಎಸ್‌ಪಿ 74, ಬಿಜೆಪಿ 69 ಹಾಗೂ ಕಾಂಗ್ರೆಸ್ 68 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇಷ್ಟು ಲೋಕಸಭಾ ಕ್ಷೇತ್ರಗಳಿಗೆ 2019ರಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಡಿಎ 65 ಹಾಗೂ ಇಂಡಿಯಾ ಒಕ್ಕೂಡ 23 ಕ್ಷೇತ್ರಗಳನ್ನು ಜಯಿಸಿತ್ತು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...