ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

Date:

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ ತೆರಳುವ ಹಜ್‌ ಯಾತ್ರೆಗೆ ಒಂದು ಲಕ್ಷ ರೂ. ನೆರವು ನೀಡುವುದಾಗಿ ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.

ಆಂಧ್ರದ ನಲ್ಲೂರಿನಲ್ಲಿ ಮುಸ್ಲಿಂ ಸಮುದಾಯದವರೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು,ರಾಜ್ಯದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲಿದ್ದು, ಮೆಕ್ಕಾಗೆ ತೆರಳುವ ಪ್ರತಿ ಮುಸ್ಲಿಂ ಸಮುದಾಯದವರಿಗೂ ಒಂದು ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಹೇಳಿದರು.

ಹಿಂದಿನ ಟಿಡಿಪಿ ಸರ್ಕಾರ ಆಂಧ್ರ ಪ್ರದೇಶದಲ್ಲಿ ಮುಸ್ಲಿಂ ಹಬ್ಬವಾದ ರೋಟಿಯಾನ್‌ ಕಿ ಈದ್‌ಗೆ ರಾಜ್ಯದ ಹಬ್ಬದ ಮಾನ್ಯತೆ ನೀಡಿತ್ತು. ಟಿಡಿಪಿ ಈ ಹಿಂದೆಯೂ ಎನ್‌ಡಿಎ ಒಕ್ಕೂಟದ ಭಾಗವಾಗಿತ್ತು. ಈ ಸಂದರ್ಭದಲ್ಲಿ ಸಮುದಾಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಲು ಬಿಟ್ಟಿರಲಿಲ್ಲ ಎಂದು ಚಂದ್ರಬಾಬು ನಾಯ್ಡು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳುಗಾರರನ್ನು ಸೋಲಿಸುವ ಸಮಯ ಬಂದಿದೆ; ಮತದಾರರೇ ಮುಂದಾಗಬೇಕಿದೆ

ಟಿಡಿಪಿ ಹೈದರಾಬಾದ್‌ನಲ್ಲಿ ಉರ್ದು ವಿವಿ ಸ್ಥಾಪಿಸಿದೆ. ಅಲ್ಲದೆ ಹಜ್‌ ಕೆಂದ್ರಗಳನ್ನು ಸ್ಥಾಪಿಸಿದೆ. ಆದರೆ ಸಿಎಂ ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಕಳೆದ 5 ವರ್ಷಗಳಲ್ಲಿ ಒಂದೇ ಒಂದು ಮಸೀದಿಯನ್ನು ಕಟ್ಟಿಸಿಲ್ಲ ಎಂದು ನಾಯ್ಡು ಆರೋಪಿಸಿದರು.

ಆಂಧ್ರ ಪ್ರದೇಶದ 175 ವಿಧಾನಸಭೆ ಹಾಗೂ 25 ಲೋಕಸಭಾ ಕ್ಷೇತ್ರಗಳಿಗೆ ಮೇ 13 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...