4ನೇ ಹಂತದ ಲೋಕಸಭಾ ಚುನಾವಣೆ: ಮಧ್ಯಾಹ್ನ 3ರವರೆಗೆ ಶೇ. 53 ರಷ್ಟು ಮತದಾನ

Date:

ನಾಲ್ಕನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಮಧ್ಯಾಹ್ನ 3 ಗಂಟೆಯವರೆಗೆ 9 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ 96 ಕ್ಷೇತ್ರಗಳಲ್ಲಿ ಶೇ. 52.60 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲಿ ಅತೀ ಹೆಚ್ಚು 66.87 ರಷ್ಟು ಮತದಾನವಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಅತೀ ಕಡಿಮೆ ಶೇ. 29.93 ಮತದಾನವಾಗಿದೆ. ಇನ್ನುಳಿದಂತೆ ಮಧ್ಯ ಪ್ರದೇಶ ಶೇ. 59.63, ಜಾರ್ಖಂಡ್ ಶೇ. 56.42 ಉತ್ತರ ಪ್ರದೇಶ ಶೇ. 48.41 ಹಾಗೂ ಬಿಹಾರದಲ್ಲಿ ಶೇ. 45.23 ರಷ್ಟು ಮತದಾನವಾಗಿದೆ.

ಇದೇ ದಿನದಂದು ಆಂಧ್ರ ಪ್ರದೇಶದ 175 ಕ್ಷೇತ್ರಗಳ ಹಾಗೂ ಒಡಿಶಾದ 147 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನನ್ನು ಬಾಂಬ್‌ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ. ಬೋಲ್‌ಪುರ್‌ ಲೋಕಸಭಾ ಕ್ಷೇತ್ರದಲ್ಲಿ ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದೆ. ಮೃತನನ್ನು ಮಿಂಟು ಶೇಖ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂರುಗಳಿಗೆ ಬೆಲೆ ಇಲ್ಲ, ಕ್ರಮ ಕೈಗೊಳ್ಳಲ್ಲ, ಆಯೋಗಕ್ಕೆ ಹಲ್ಲೂ ಇಲ್ಲ

ಆಂಧ್ರ ಪ್ರದೇಶದ ಕೆಲವು ಕಡೆ ಹಿಂಸಾಚಾರ ನಡೆದಿದೆ. ಚಿತ್ತೂರು ಜಿಲ್ಲೆಯಲ್ಲಿ ಮೂವರು ಟಿಡಿಪಿ ಚುನಾವಣಾ ಏಜೆಂಟರನ್ನು ಅಪಹರಿಸಲಾಗಿದ್ದು, ಪೊಲೀಸರು ಮೂವರನ್ನೂ ರಕ್ಷಿಸಿದ್ದಾರೆ. ಘಟನೆಗೆ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ಕಾರಣ ಎಂದು ಟಿಡಿಪಿ ನಾಯಕರು ಆರೋಪಿಸಿದ್ದಾರೆ.

ಇಂದಿನ ಲೋಕಸಭಾ ಚುನಾವಣೆಯಲ್ಲಿ ಆಂಧ್ರ ಪ್ರದೇಶ 25, ತೆಲಂಗಾಣ 17, ಉತ್ತರ ಪ್ರದೇಶ 13, ಮಹಾರಾಷ್ಟ್ರ 11, ಮಧ್ಯ ಪ್ರದೇಶ, ಪಶ್ಚಿಮ ಬಂಗಾಳ ತಲಾ 8, ಬಿಹಾರ 5, ಒಡಿಶಾ, ಜಾರ್ಖಂಡ್ ತಲಾ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.

ತೆಲಂಗಾಣದ ಹೈದರಾಬಾದ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮತಗಟ್ಟೆಯೊಂದರಲ್ಲಿ ಮಹಿಳಾ ಮತದಾರರ ಬುರ್ಕಾವನ್ನು ತೆಗೆದು ಪರಿಶೀಲನೆ ನಡೆಸಿದ್ದಕ್ಕಾಗಿ ಚುನಾವಣಾ ಅಧಿಕಾರಿಗಳ ದೂರಿನ ಮೇರೆಗೆ ಪೊಲೀಸರು ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...