ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

Date:

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಪ್ರಗತಿಯಲ್ಲಿದ್ದು, ಮಧ್ಯಾಹ್ನ 1 ಗಂಟೆವರೆಗಿನ ಮತದಾನದಲ್ಲಿ ದೇಶಾದ್ಯಂತ ಶೇ.39.13 ರಷ್ಟು ಮತದಾನವಾಗಿದೆ.

ಈ ನಡುವೆ ಚುನಾವಣಾ ಆಯೋಗವು ಇವಿಎಂನ ಅಸಮರ್ಪಕ ಕಾರ್ಯಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಿಂದ 290 ದೂರುಗಳನ್ನು ಸ್ವೀಕರಿಸಿದೆ. ಆಯೋಗಕ್ಕೆ ಪತ್ರ ಬರೆದಿರುವ ತೃಣಮೂಲ ಕಾಂಗ್ರೆಸ್ ತಕ್ಷಣ ಮಧ್ಯಸ್ಥಿಕೆ ವಹಿಸಬೇಕೆಂದು ಕೋರಿದೆ.

ಆದಾಗ್ಯೂ, ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಟಿಎಂಸಿ ನಡೆಯನ್ನು ಖಂಡಿಸಿದ್ದು, ಸುಪ್ರೀಂ ಕೋರ್ಟ್ ಪದೇ ಪದೆ ಇವಿಎಂನಲ್ಲಿ ಯಾವುದೇ ದೋಷವಿಲ್ಲ ಎಂದು ಹೇಳಿದರೂ ಜನರು ಪ್ರಶ್ನಿಸುವುದನ್ನು ಬಿಡುತ್ತಿಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

88 ಲೋಕಸಭಾ ಕ್ಷೇತ್ರಗಳಲ್ಲಿ ಕೇರಳದ ಎಲ್ಲ 20, ಕರ್ನಾಟಕದ 14 ಸೇರಿದಂತೆ ರಾಜಸ್ಥಾನ, ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಅಸ್ಸಾಂ, ಬಿಹಾರ್‌, ಛತ್ತೀಸ್‌ಘಡ, ಪಶ್ಚಿಮ ಬಂಗಾಳ, ಮಣಿಪುರ, ತ್ರಿಪುರ ಮತ್ತು ಜಮ್ಮು ಕಾಶ್ಮೀರ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಇಂದು ಬೆಳಗಿನಿಂದಲೇ ಪ್ರಮುಖ ಗಣ್ಯ ವ್ಯಕ್ತಿಗಳು ತಮ್ಮ ಹಕ್ಕು ಚಲಾಯಿಸಿದರು. ಕಾಂಗ್ರೆಸ್ ನಾಯಕ ಶಶಿ ತರೂರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಟರಾದ ಪ್ರಕಾಶ್ ರಾಜ್, ಯಶ್, ಮಾಜಿ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಉದ್ಯಮಿಗಳಾದ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಮತದಾನ ಮಾಡಿದರು.

ಚುನಾವಣಾ ಆಯೋಗದ ಪ್ರಕಾರ ಮಧ್ಯಾಹ್ನ ಒಂದು ಗಂಟೆಯವರೆಗೆ ತ್ರಿಪುರಾರಲ್ಲಿ ಶೇ.54.47 ಮತದಾನವಾಗಿದೆ. ಛತ್ತೀಸ್‌ಘಡ ಶೇ. 54.26, ಅಸ್ಸಾಂ 46.31, ಕರ್ನಾಟಕ 38.23, ಪಶ್ಚಿಮ ಬಂಗಾಳ 46.29 ಹಾಗೂ ಕೇರಳದಲ್ಲಿ 29.36 ರಷ್ಟು ಮತದಾನವಾಗಿದೆ.

ಇಂದಿನ ಹಂತದಲ್ಲಿ ಒಟ್ಟು 1,210 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಎಸ್‌ಪಿ 74, ಬಿಜೆಪಿ 69 ಹಾಗೂ ಕಾಂಗ್ರೆಸ್ 68 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇಷ್ಟು ಲೋಕಸಭಾ ಕ್ಷೇತ್ರಗಳಿಗೆ 2019ರಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಡಿಎ 65 ಹಾಗೂ ಇಂಡಿಯಾ ಒಕ್ಕೂಟ 23 ಕ್ಷೇತ್ರಗಳಲ್ಲಿ ಜಯಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...