ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

Date:

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ ಬಂಗಾಳ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ.

ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನ ಮನೆಯಿಂದ ಜೀವಂತ ಬಾಂಬ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ದಿನ್ಹಾಟಾದಲ್ಲಿರುವ ಬಿಜೆಪಿ ಬೂತ್ ಅಧ್ಯಕ್ಷನ ಮನೆಯಲ್ಲಿ ಬಾಂಬ್ ಪತ್ತೆಯಾಗಿದ್ದು, ಅಧಿಕಾರಿಗಳು ಬಾಂಬ್ ಅನ್ನು ವಶಪಡಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಮೊದಲ ಹಂತದಲ್ಲಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಮುಖಂಡನ ಮನೆ ಮೇಲೆ ಟಿಎಂಸಿ ಕಾರ್ಯಕರ್ತರು ಕಚ್ಚಾ ಬಾಂಬ್ ಎಸೆದಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಲೋಕಸಭಾ ಕ್ಷೇತ್ರದ ಚಂದಮಾರಿಯಲ್ಲಿ ಮತಗಟ್ಟೆಯೊಂದರ ಮುಂದೆ ಕಲ್ಲು ತೂರಾಟ ನಡೆದಿರುವ ಘಟನೆ ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ಚಂದಮಾರಿಯಲ್ಲಿ ಮತದಾರರು ಮತದಾನ ಮಾಡದಂತೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಈ ಕಲ್ಲು ತೂರಾಟದಲ್ಲಿ ಬಿಜೆಪಿಯ ಮತಗಟ್ಟೆ ಏಜೆಂಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭಾರಿ ಭದ್ರತಾ ವ್ಯವಸ್ಥೆಗಳ ನಡುವೆಯೂ ಮಣಿಪುರದಲ್ಲಿ ಹಿಂಸಾಚಾರ ಉಂಟಾಗಿದೆ. ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ ತಮನ್‌ಪೋಕ್ಪಿ ಮತಗಟ್ಟೆಯ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಸ್ಥಳದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಇಂಫಾಲ್‌ ಪೂರ್ವ ಜಿಲ್ಲೆಯ ತೊಂಗ್ಜು ವಿಧಾನಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಗಲಭೆ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಚುನಾವಣಾ ಆಯೋಗದ ವರದಿಯಂತೆ  ವಿವಿಧ ರಾಜ್ಯಗಳಲ್ಲಿ ಮತದಾನವಾಗಿರುವ ಅಂಕಿಅಂಶ

Election turnout

Election turnout 1

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...