ಲಾಟರಿ ವಿತರಕರು ಕೇಂದ್ರಕ್ಕೆ ಸೇವಾ ತೆರಿಗೆ ಪಾವತಿಸುವ ಹೊಣೆ ಹೊಂದಿಲ್ಲ: ಸುಪ್ರೀಂ ಕೋರ್ಟ್

Date:

ಲಾಟರಿ ವಿತರಕರು ಕೇಂದ್ರ ಸರ್ಕಾರಕ್ಕೆ ಸೇವಾ ತೆರಿಗೆ ಪಾವತಿಸುವ ಹೊಣೆಯನ್ನು ಹೊಂದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಈ ಮೂಲಕ ಕೇಂದ್ರದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸಿಕ್ಕಿಂ ಹೈಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದು, ಈ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಎನ್‌ಕೆ ಸಿಂಗ್ ಅವರನ್ನು ಒಳಗೊಂಡ ಪೀಠವು ವಜಾಗೊಳಿಸಿದೆ.

ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸ್ನೇಹಮಯಿ ಕೃಷ್ಣ ನಿರ್ಧಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಸಂಸ್ಥೆಯೂ ಸಂಬಂಧವಿಲ್ಲದ ಕಾರಣ ಪ್ರತಿವಾದಿಗಳು (ಲಾಟರಿ ವಿತರಕರು) ಸೇವಾ ತೆರಿಗೆ ಪಾವತಿಸಲು ಹೊಣೆಗಾರರಾಗುವುದಿಲ್ಲ. ಆದರೆ ಪ್ರತಿವಾದಿಗಳು ಸಂವಿಧಾನದ ಪ್ರಕಾರವಾಗಿ ರಾಜ್ಯವು ವಿಧಿಸುವ ತೆರಿಗೆಯನ್ನು ಪಾವತಿಸುವುದನ್ನು ಮುಂದುವರಿಸಬೇಕು” ಎಂದು ನ್ಯಾಯಮೂರ್ತಿ ನಾಗರತ್ನ ತೀರ್ಪು ನೀಡುತ್ತಾ ತಿಳಿಸಿದ್ದಾರೆ.

“ಲಾಟರಿ ಟಿಕೆಟ್‌ಗಳ ಖರೀದಿದಾರ ಮತ್ತು ಸಂಸ್ಥೆಯ ನಡುವಿನ ವಹಿವಾಟಿನ ಮೇಲೆ ಸೇವಾ ತೆರಿಗೆ ವಿಧಿಸಲಾಗುವುದಿಲ್ಲ. ಎಲ್ಲಾ ವಾದ ವಿವಾದವನ್ನು ಗಮನಿಸಿದಾಗ ಭಾರತ ಸರ್ಕಾರ ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳಲ್ಲಿ ನಮಗೆ ಯಾವುದೇ ಅರ್ಹತೆ ಕಂಡುಬರುವುದಿಲ್ಲ. ಆದ್ದರಿಂದ ಈ ಮೇಲ್ಮನವಿಯನ್ನು ವಜಾಗೊಳಿಸಲಾಗಿದೆ” ಎಂದು ಪೀಠ ಹೇಳಿದೆ.

ಇದನ್ನು ಓದಿದ್ದೀರಾ? ಮೊದಲ ಮದುವೆ ಮುಂದುವರೆದಿದ್ದರೂ, ಮಹಿಳೆ 2ನೇ ಪತಿಯಿಂದ ಜೀವನಾಂಶ ಪಡೆಯಬಹುದು: ಸುಪ್ರೀಂ ಕೋರ್ಟ್‌

ಸೇವಾ ತೆರಿಗೆ ವಿಧಿಸುವ ಹಕ್ಕು ನಮಗೂ ಇದೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಆದರೆ ಸಿಕ್ಕಿಂ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್, ಲಾಟರಿಗಳ ಮೇಲೆ ತೆರಿಗೆ ವಿಧಿಸುವುದು ರಾಜ್ಯ ಸರ್ಕಾರ ಮಾತ್ರ, ಕೇಂದ್ರ ಸರ್ಕಾರವಲ್ಲ ಎಂದು ಹೇಳಿದೆ.

ಲಾಟರಿ ಸಂಸ್ಥೆ ಫ್ಯೂಚರ್ ಗೇಮಿಂಗ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಸಿಕ್ಕಿಂ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ 2013ರಲ್ಲಿಯೇ ಕೇಂದ್ರ ಸರ್ಕಾರ ಲಾಟರಿ ಮೇಲೆ ಸೇವಾ ತೆರಿಗೆ ವಿಧಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...