ಲವ್ ಜಿಹಾದ್ ಭ್ರಾಂತಿ: ಕೋರ್ಟ್‌ನಲ್ಲಿ ಅಂತರ್‌ ಧರ್ಮೀಯ ದಂಪತಿ ಮೇಲೆ ವಕೀಲರಿಂದ ಹಲ್ಲೆ

Date:

ನ್ಯಾಯಾಲಯದಲ್ಲಿ ವಿಹಾಹ ನೋಂದಿಣಿ ಮಾಡಿಕೊಳ್ಳಲು ಬಂದಿದ್ದ ಅಂತರ್‌ ಧರ್ಮೀಯ ದಂಪತಿಗಳ ಮೇಲೆ ವಕೀಲರ ಗುಂಪು ಹಲ್ಲೆ ನಡೆಸಿರುವ ಅಮಾನುಷ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಮುಸ್ಲಿಂ ಯುವಕ ‘ಲವ್‌ ಜಿಹಾದ್‌’ ನಡೆಸುತ್ತಿದ್ದಾನೆಂದು ಆರೋಪಿಸಿರುವ ವಕೀಲರ ಗುಂಪು ಆತನ ಮೇಲೆ ಹಲ್ಲೆಗೈದಿದೆ.

ಮುಸ್ಲಿಂ ಯುವಕ ಮತ್ತು ಹಿಂದು ಯುವತಿ ತಮ್ಮ ವಿವಾಹ ನೋಂದಣಿಗಾಗಿ ರೇವಾ ಜಿಲ್ಲಾ ನ್ಯಾಯಾಲಯಕ್ಕೆ ಬಂದಿದ್ದರು. ಈ ವೇಳೆ, ವಕೀಲರು ಯುವತಿಯ ಹೆಸರು ಕೇಳಿದ್ದಾರೆ. ಆಧಾರ್ ಕಾರ್ಡ್‌ ತೋರಿಸುವಂತೆ ಒತ್ತಾಯಿಸಿದ್ದಾರೆ. ಆಕೆ ತನ್ನ ಹೆಸರು ಹೇಳುತ್ತಿದ್ದಂತೆಯೇ, ಇದು ‘ಲವ್‌ ಜಿಹಾದ್’ ಎಂದು ಆರೋಪಿಸಿ, ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ

ಹಲ್ಲೆಯ ಬಗ್ಗೆ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. “ಯುವತಿ ಹಿಂದು ಹೆಸರನ್ನು ಹೊಂದಿದ್ದು, ಬುರ್ಖಾ ಧರಿಸಿದ್ದರು. ಇದರಿಂದ, ವಕೀಲರು ಸಿಟ್ಟಾಗಿದ್ದಾರೆ. ಆಕೆ ಮೇಲ್ಜಾತಿಗೆ ಸೇರಿದ ಹಿಂದುವಾಗಿದ್ದು, ಆಕೆಯನ್ನು ಮುಸ್ಲಿಂ ಯುವಕ ‘ಲವ್‌ ಜಿಹಾದ್‌’ ಬಲೆಗೆ ಬೀಳಿಸಿದ್ದಾರೆಂದು ವಕೀಲರು ಆರೋಪಿಸಿ, ಥಳಿಸಿದ್ದಾರೆ. ನಾವು ಯುವಕನನ್ನು ರಕ್ಷಿಸಿದ್ದೇವೆ. ಕೋರ್ಟ್‌ ಆವರಣದಿಂದ ಹೊರಗೆ ಕರೆತಂದಿದ್ದೇವೆ. ಯುವತಿಯನ್ನು ಹತ್ತಿರದ ಸುರಕ್ಷಿತ ಸ್ಥಳದಲ್ಲಿ ಇರಿಸಿದ್ದೇವೆ” ಎಂದು ಸಿವಿಲ್‌ ಲೈನ್ಸ್‌ ಪೊಲೀಸ್‌ ಅಧಿಕಾರಿ ಕಮಲೇಶ್‌ ಸಾಹು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂತ್ರಸ್ತ ಯುವಕ ಮತ್ತು ಯುವತಿ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಪ್ರೀತಿಸುತ್ತಿದ್ದರು. ಮದುವೆಯಾಗಲು ನಿರ್ಧರಿಸಿದ್ದರು. ಆದರೆ, ಅವರ ಪ್ರೀತಿಗೆ ಕುಟುಂಬಸ್ಥರು ಒಪ್ಪದ ಕಾರಣ, ನ್ಯಾಯಾಲಯದಲ್ಲಿ ವಿವಾಹವಾಗಿ, ವಿವಾಹ ನೋಂದಣಿ ಮಾಡಿಸಿಕೊಳ್ಳಲು ಬಂದಿದ್ದರು” ಎಂದು ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಈ ವರದಿ ಓದಿದ್ದೀರಾ?: ಕೋಮುದ್ವೇಷದ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಯುವಕನ ಶರ್ಟ್‌ ಹರಿದು, ಹಲ್ಲೆ ನಡೆಸಲಾಗಿದೆ. ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ವರದಿಯಾಗಿದೆ. ಹಲ್ಲೆ ಘಟನೆಯಲ್ಲಿ ವಕೀಲರು ಭಾಗಿಯಾಗಿಲ್ಲವೆಂದು ರೇವಾ ಬಾರ್ ಅಸೋಸಿಯೇಷನ್ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...