ಮಹಿಳೆ ಸೇರಿ ಮೂವರಿಗೆ ಪಾಸ್ ನೀಡಿದ್ದ ಸಂಸದ ಪ್ರತಾಪ್ ಸಿಂಹ!

Date:

ಭಾರೀ ಭದ್ರತಾ ಲೋಪದೊಂದಿಗೆ ಬುಧವಾರ ಲೋಕಸಭೆ ಗ್ಯಾಲರಿಯಿಂದ ಕಲಾಪ ನಡೆಯುವ ಸದನಕ್ಕೆ ಜಿಗಿದು ಆತಂಕ ಸೃಷ್ಟಿಸಿದ್ದ ಇಬ್ಬರಲ್ಲಿ ಮೈಸೂರಿನ ಮನೋರಂಜನ್‌ ಎಂಬಾತ ಕಳೆದ ಮೂರು ತಿಂಗಳಿಂದ ಪಾಸ್‌ಗಾಗಿ ದುಂಬಾಲು ಬೀಳುತ್ತಿದ್ದ ಎನ್ನಲಾಗಿದೆ.

ಮೂಲಗಳ ಪ್ರಕಾರ ಸಂಸದ ಪ್ರತಾಪ್‌ ಸಿಂಹ ಕಚೇರಿಯಿಂದ ಲೋಕಸಭೆಯ ಗ್ಯಾಲರಿಯಲ್ಲಿ ಸದನ ವೀಕ್ಷಿಸಲು ಮೂವರಿಗೆ ಪಾಸ್‌ ನೀಡಲಾಗಿತ್ತು. ಒಬ್ಬಾತ ಮೈಸೂರಿನ ಡಿ ಮನೋರಂಜನ್‌, ಮತ್ತೊಬ್ಬ ಮನೋರಂಜನ್‌ ಸ್ನೇಹಿತ ಉತ್ತರ ಪ್ರದೇಶದ ಸಾಗರ್‌ ಶರ್ಮಾ.

ಮನೋರಂಜನ್‌ ನೂತನ ಸಂಸತ್‌ ವೀಕ್ಷಿಸುವ ಸಲುವಾಗಿ ಕಳೆದ ಮೂರು ತಿಂಗಳಿಂದ ಸಂಸದರ ಕಚೇರಿಯಲ್ಲಿ ಸಿಬ್ಬಂದಿಯ ದುಂಬಾಲು ಬಿದ್ದಿದ್ದ. ಅಲ್ಲದೆ ಸಾಗರ್ ಶರ್ಮಾನನ್ನು ತನ್ನ ಸ್ನೇಹಿತ ಎಂದು ಕೂಡ ಪರಿಚಯಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಸ್‌ಗಳನ್ನು ನೀಡುವ ಸಂದರ್ಭದಲ್ಲಿ ಇವರಿಬ್ಬರು ಸೇರಿದಂತೆ ಒಬ್ಬ ಮಹಿಳೆಯೊಬ್ಬರಿಗೂ ಅಧಿಕೃತ ಪಾಸ್‌ ನೀಡಲಾಗಿತ್ತು. ಪಾಸ್‌ ಪಡೆದ ಮಹಿಳೆಯು ತನ್ನ ಮಗುವಿನೊಂದಿಗೆ ಬಂದಿದ್ದರು. ಆದರೆ ಪಾಸ್‌ನಲ್ಲಿ ಮಗುವಿನ ಹೆಸರನ್ನು ನಮೂದಿಸದ ಕಾರಣ ಭದ್ರತಾ ಸಿಬ್ಬಂದಿ ಮಹಿಳೆಯನ್ನು ವಾಪಸ್‌ ಕಳುಹಿಸಿದ್ದರು. ಮುಖ್ಯ ಸಂಗತಿಯಂದರೆ ಇಬ್ಬರು ಆರೋಪಿಗಳೊಂದಿಗೆ ಮಹಿಳೆಗೆ ಯಾವುದೇ ಸಂಬಂಧವಿರಲಿಲ್ಲ.

ಭದ್ರತಾ ಲೋಪವಾದರೂ ಸಂಸದ ಪ್ರತಾಪ್ ಸಿಂಹ ಕಚೇರಿ ಸಿಬ್ಬಂದಿ ಸಂಸದರನ್ನು ಸಮರ್ಥಿಸಿಕೊಂಡಿದೆ. ಸಂಸದರು ಸಾಮಾನ್ಯವಾಗಿ ತಮ್ಮ ಕ್ಷೇತ್ರದಿಂದ ಬರುವ ಇಂತಹ ವಿನಂತಿಗಳನ್ನು ಪ್ರೋತ್ಸಾಹ ನೀಡುತ್ತಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 2016ರಲ್ಲೂ ನೋಟು ಅಮಾನ್ಯೀಕರಣ ವಿರುದ್ಧ ಪ್ರತಿಭಟಿಸಲು ಲೋಕಸಭೆಗೆ ಜಿಗಿದಿದ್ದ ಅಪರಿಚಿತ !

ಭಾರೀ ಭದ್ರತಾ ಲೋಪವಾದ ನಂತರ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂದರ್ಶಕರ ಪಾಸ್‌ಅನ್ನು ರದ್ದುಗೊಳಿಸಿದ್ದಾರೆ. 2001ರ ಸಂಸತ್ ದಾಳಿಯ 22 ನೇ ವಾರ್ಷಿಕೋತ್ಸವದಂದು ಈ ಭದ್ರತಾ ಲೋಪ ಹೇಗೆ ಸಂಭವಿಸಿತು ಎಂಬುದರ ಕುರಿತು ವಿವರವಾದ ವರದಿಯನ್ನು ಲೋಕಸಭೆ ಸ್ಪೀಕರ್ ಕೇಳಿದ್ದಾರೆ. 2001 ರ ಸಂಸತ್ತಿನ ದಾಳಿಯ ವಾರ್ಷಿಕೋತ್ಸವದಂದು ಭಯ ಹರಡುವ ಹಳದಿ ಅನಿಲವನ್ನು ಸಿಂಪಡಿಸುತ್ತಾ ಸದನದೊಳಗೆ ಓಡಾಡಿದ್ದರು.

ನಂತರ ಸದನದಲ್ಲಿದ್ದ ಕೆಲ ಸಂಸದರು ಇಬ್ಬರು ಯುವಕರನ್ನು ಹಿಡಿದು ಥಳಿಸಿದ ನಂತರ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದರು.

ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಘಟನೆಯ ಬಗ್ಗೆ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ,” ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ, ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವರ ಕರ್ತವ್ಯವಾಗಿದೆ” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...