ಲಕ್ನೋ ಕಟ್ಟಡ ಕುಸಿತ | ಮೃತರ ಸಂಖ್ಯೆ 8ಕ್ಕೆ ಏರಿಕೆ, 28 ಮಂದಿಗೆ ಗಾಯ

Date:

ಲಕ್ನೋ ಕಟ್ಟಡ ಕುಸಿತ ಪ್ರಕರಣದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಭಾನುವಾರ ಮುಂಜಾನೆ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರಿಂದಾಗಿ ಲಕ್ನೋ ಕಟ್ಟಡ ಕುಸಿತದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿದೆ. ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ.

ಹರ್ಮಿಲಾಪ್ ಬಿಲ್ಡಿಂಗ್ ಎಂದು ಗುರುತಿಸಲಾದ ಕಟ್ಟಡವನ್ನು ಔಷಧ ವ್ಯಾಪಾರಕ್ಕಾಗಿ ಗೋದಾಮಿನಂತೆ ಬಳಸಲಾಗುತ್ತಿತ್ತು. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಕುಸಿತ ಸಂಭವಿಸಿದೆ.

ಸುಮಾರು ನಾಲ್ಕು ವರ್ಷಗಳ ಹಿಂದೆ ನಿರ್ಮಿಸಲಾದ ಕಟ್ಟಡವು ಕುಸಿತವಾಗುವ ಸಮಯದಲ್ಲಿ ಕೆಲವು ನಿರ್ಮಾಣ ಕಾರ್ಯಗಳೂ ಕೂಡಾ ನಡೆಯುತ್ತಿತ್ತು. ಘಟನೆ ನಡೆದಾಗ ಹಲವಾರು ಮಂದಿ ನೆಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸೂರತ್ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ಗಾಯಾಳುಗಳನ್ನು ಲೋಕ ಬಂಧು ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಾರಿಗೆ ನಗರ ಪ್ರದೇಶದಲ್ಲಿ ಕುಸಿದ ಕಟ್ಟಡದಲ್ಲೇ ಗೋಡೌನ್‌ಗಳು ಮತ್ತು ಮೋಟಾರ್ ವರ್ಕ್‌ಶಾಪ್‌ಗಳು ಇದ್ದವು. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

“ಮಳೆಯಾಗುತ್ತಿದ್ದರಿಂದ ನಾವು ನೆಲ ಮಹಡಿಗೆ ಬಂದಿದ್ದೇವೆ. ಕಟ್ಟಡದ ಪಿಲ್ಲರ್‌ನಲ್ಲಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ್ದೇವೆ. ಇದ್ದಕ್ಕಿದ್ದಂತೆ, ಇಡೀ ಕಟ್ಟಡವು ನಮ್ಮ ಮೇಲೆ ಕುಸಿದಿದೆ” ಎಂದು ಪಿಟಿಐಗೆ ಗಾಯಾಳು ಆಕಾಶ್ ಸಿಂಗ್ ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ವೇಗಗೊಳಿಸಲು ಮತ್ತು ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...