ಮಧ್ಯಪ್ರದೇಶ | 90 ಡಿಗ್ರಿ ತಿರುವಿನ ರೈಲ್ವೇ ಮೇಲುರಸ್ತೆ; ಬಿಜೆಪಿ ಸರ್ಕಾರದ ವಿರುದ್ಧ ಭಾರೀ ಟ್ರೋಲ್

Date:

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ರೈಲ್ವೇ ಹಳಿಗಳ ಮೇಲೆ ಮೇಲುರಸ್ತೆಯನ್ನು (ಫ್ಲೈ ಓವರ್) ನಿರ್ಮಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಸೇತುವೆಯು ವಿವಾದಕ್ಕೆ ಗುರಿಯಾಗಿದ್ದು, ನೆಟ್ಟಿಗರು ಸೇತುವೆ ನಿರ್ಮಿಸಿದ ಇಂಜಿನಿಯರ್ ಮತ್ತು ಬಿಜೆಪಿ ಸರ್ಕಾರವನ್ನು ಭಾರೀ ಟ್ರೋಲ್ ಮಾಡುತ್ತಿದ್ದಾರೆ.

ಭೋಪಾಲ್‌ನ ಐಶ್‌ಬಾಗ್ ಕ್ರೀಡಾಂಗಣದ ಬಳಿ ಇರುವ ರೈಲ್ವೇ ಹಳಿಗಳ ಮೇಲೆ ಮೇಲುರಸ್ತೆ ನಿರ್ಮಿಸಲಾಗಿದೆ. ಸೇತುವೆಯನ್ನು 90 ಡಿಗ್ರಿ ಲಂಬಾಕಾರದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ರಸ್ತೆಯಲ್ಲಿ ವಾಹನಗಳು ಚಲಿಸುವುದಾದರೂ ಹೇಗೆ ಎಂಬ ಗಂಭೀರ ಪ್ರಶ್ನೆ ವ್ಯಕ್ತವಾಗುತ್ತಿದೆ. ಅಂತೆಯೇ, ಮೇಲುರಸ್ತೆಯನ್ನು ನಿರ್ಮಾಣ ಮಾಡಿದ ಎಂಜಿನಿಯರ್ ಬಹುಶಃ ಗೇಮಿಂಗ್ ಆ್ಯಪ್ ‘ಟೆಂಪಲ್‌ ರನ್‌’ನಲ್ಲಿನ ರಸ್ತೆಗಳನ್ನು ನೋಡಿ, ಯೋಜನೆ ರೂಪಿಸಿ, ಕಾಮಗಾರಿ ನಡೆಸಿರಬಹುದು ಎಂದು ಅಪಹಾಸ್ಯ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರವನ್ನೂ ಕೂಡ ಟ್ರೋಲ್ ಮಾಡಲಾಗುತ್ತಿದೆ.

ಸೇತುವೆಯ ಮೇಲೆ ಹೋಗುವ ವಾಹನಗಳು ಸೇತುವೆಯ ಮೂಲೆ ಭಾಗಕ್ಕೆ ಹೋಗಿ, ಹಠತ್ತನೆ ತಿರುಗಿಕೊಳ್ಳಬೇಕಾಗುತ್ತದೆ. ಆ ರೀತಿಯಲ್ಲಿ ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ಸೇತುವೆ ಕುರಿತು ಟೀಕೆ, ಅಪಹಾಸ್ಯ, ಟ್ರೋಲ್‌ಗಳು ಹೆಚ್ಚಿದಂತೆ ಸೇತುವೆ ಕುರಿತಾಗಿ ಲೋಕೋಪಯೋಗಿ ಸಚಿವ ರಾಕೇಶ್‌ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ಸೇತುವೆ ವಿಚಾರವನ್ನು ಪರಿಶೀಲಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೇತುವೆಯನ್ನು ನಿರ್ಮಿಸುವಾಗ, ಬಹಳಷ್ಟು ತಾಂತ್ರಿಕ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಆದ್ದರಿಂದ ಅಂತಹ ಆರೋಪಗಳಿದ್ದರೆ, ನಾವು ಅದನ್ನು ಪರಿಶೀಲಿಸುತ್ತೇವೆ” ಎಂದು ಸಚಿವರು ಹೇಳಿದ್ದಾರೆ.

ಇನ್ನು, ಬಿಜೆಪಿ ಸರ್ಕಾರ ಮತ್ತು ಕಾಮಕಾರಿ ನಡೆಸಿದ ಎಂಜಿನಿಯರ್‌ಅನ್ನು ಟ್ರೋಲ್ ಮಾಡಿರುವ ನೆಟ್ಟಿಗರು, “ಇದು ಭೋಪಾಲ್‌ನಲ್ಲಿ ಬಿಜೆಪಿಯ ಎಂಜಿನಿಯರಿಂಗ್ ಅದ್ಭುತ. 90° ತಿರುವಿನ ಮೇಲುರಸ್ತೆಯನ್ನು ಸರಿಯಾಗಿ ನಿರ್ಮಿಸಲಾಗಿದೆ. ಈ ಎಂಜಿನಿಯರಿಂಗ್ ಅದ್ಭುತ ಕಾಮಗಾರಿಯನ್ನು ಪೂರ್ಣಗೊಳಿಸಲು ಬರೋಬ್ಬರಿ 10 ವರ್ಷಗಳು ಬೇಕಾಯಿತು” ಎಂದು ಟೀಕಿಸಿದ್ದಾರೆ.

ಅಂದಹಾಗೆ, 648 ಮೀಟರ್ ಉದ್ದ, 8.5 ಮೀಟರ್ ಅಗಲದ ಈ ಸೇತುವೆಯನ್ನು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಮೇಲುರಸ್ತೆಯು ಮಹಾಮಾಯಿ ಕಾ ಬಾಗ್, ಪುಷ್ಪಾ ನಗರ ಹಾಗೂ ರೈಲ್ವೆ ನಿಲ್ದಾಣ ವಲಯ ಪ್ರದೇಶವನ್ನು ಭೋಪಾಲ್ ನಗರದೊಂದಿಗೆ ಸಂಪರ್ಕಿಸುವ ಸೇತುವೆಯಾಗಿದೆ. ರೈಲ್ವೇ ಕ್ರಾಸಿಂಗ್‌ಗಳಲ್ಲಿ ವಾಹನ ಸವಾರರು ದೀರ್ಘ ಕಾಯುವಿಕೆಯ ಸಮಸ್ಯೆಯನ್ನು ನಿವಾರಿಸಲು ಮೇಲುರಸ್ತೆಯನ್ನು ನಿರ್ಮಿಸಲಾಗಿದೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...